Homeಮುಖಪುಟಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

- Advertisement -
- Advertisement -

ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ 3,600 ಎಕರೆಗೂ ಹೆಚ್ಚು ಭೂಮಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ಇದರಿಂದ 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳು ನೆಲೆಯನ್ನು ಕಳೆದುಕೊಳ್ಳಲಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ಇದನ್ನು ತಳ್ಳಿ ಹಾಕಿರುವ ಸ್ಥಳೀಯರು, ನಮ್ಮ ಮನೆಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗಿದೆ. ಈ ಮನೆಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಶಾಲೆಗಳನ್ನು ನಿರ್ಮಿಸಲಾಗಿದೆ. ಮಸೀದಿ, ಮದ್ರಸ, ಚರ್ಚ್, ಮಾರುಕಟ್ಟೆ ಸೇರಿದಂತೆ ಬಹುತೇಕ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವಿದೆ. ಮನೆಗಳು ಅಕ್ರಮ ನಿರ್ಮಾಣವಾಗಿದ್ದರೆ ಈ ಸೌಲಭ್ಯಗಳೆಲ್ಲ ಹೇಗೆ ಸಿಕ್ಕಿತು? ಇವೆಲ್ಲದಕ್ಕೂ ಸೂಕ್ತ ದಾಖಲೆ ಕೊಡುವುದು ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಆದಾಗ್ಯೂ, ಸುಮಾರು 3,600 ಎಕರೆಯಿಂದ 4000 ಎಕರೆಯಷ್ಟು ಅರಣ್ಯ ಭೂಮಿಯನ್ನು ಜನರು ಅತಿಕ್ರಮಣ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಈ ಪ್ರದೇಶಗಳಲ್ಲಿ ಸುಮಾರು 2,000 ಕುಟುಂಬಗಳು ವಾಸಿಸುತ್ತಿವೆ. ಈ ಪೈಕಿ ಸುಮಾರು 1,500 ಕುಟುಂಬಗಳಿಗೆ ನೋಟಿಸ್ ನೀಡಲಾಗಿದೆ. ಅವರು ಇಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಉಳಿದ ಕುಟುಂಬಗಳು ಅರಣ್ಯವಾಸಿಗಳಾಗಿದ್ದು, ಅರಣ್ಯ ಹಕ್ಕು ಸಮಿತಿಯಿಂದ (ಎಫ್‌ಆರ್‌ಸಿ) ಪ್ರಮಾಣಪತ್ರಗಳನ್ನು ಹೊಂದಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಗಳನ್ನು ಕೆಡವಲಾಗುತ್ತಿರುವ ಕುಟುಂಬಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಎಫ್‌ಆರ್‌ಸಿ ಪ್ರಮಾಣಪತ್ರಗಳನ್ನು ಹೊಂದಿರುವವರು ಬೋಡೋ, ನೇಪಾಳಿ, ಮಣಿಪುರಿ ಮತ್ತು ಇತರ ಸಮುದಾಯಗಳಿಗೆ ಸೇರಿದವರು ಎಂದು ಮಾಹಿತಿ ನೀಡಿದ್ದಾರೆ.

“ನೋಟಿಸ್ ಪಡೆದ ಶೇ. 80ರಷ್ಟು ಕುಟುಂಬಗಳು ಕಳೆದ ಕೆಲ ದಿನಗಳಲ್ಲಿ ತಮ್ಮ ಮನೆಗಳನ್ನು ಖಾಲಿ ಮಾಡಿವೆ. ನಾವು ಅವರ ಮನೆಗಳನ್ನು ಮಾತ್ರ ಕೆಡವುತ್ತಿದ್ದೇವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಲಾಘಾಟ್ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಹಲವಾರು ಹಿರಿಯ ಅಧಿಕಾರಿಗಳು, ಸರುಪಥರ್ ಉಪವಿಭಾಗದ ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಉರಿಯಮ್‌ಘಾಟ್‌ನ ರೆಂಗ್ಮಾ ಮೀಸಲು ಅರಣ್ಯದಲ್ಲಿ ಸುಮಾರು 3,600 ಎಕರೆಗೂ ಹೆಚ್ಚು ಭೂಮಿಯ ಅತಿಕ್ರಮಣವನ್ನು ತೆರವು ಕಾರ್ಯಾಚರಣೆಯನ್ನು ಮಂಗಳವಾರ ಬೆಳಿಗ್ಗೆಯಿಂದ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ.

“ಬಿದ್ಯಾಪುರ ಪ್ರದೇಶದ ಮುಖ್ಯ ಮಾರುಕಟ್ಟೆಯಿಂದ ತೆರವು ಕಾರ್ಯ ಪ್ರಾರಂಭವಾಗಿದೆ. ಕ್ರಮೇಣ ನಾವು ವಸತಿ ಪ್ರದೇಶಗಳಲ್ಲಿ ಅಕ್ರಮ ಕಟ್ಟಡಗಳನ್ನು ಕೆಡವುತ್ತೇವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಬಾಧಿತ ಕುಟುಂಬಗಳು ಈ ತೆರವು ಕಾರ್ಯಾಚರಣೆಯ ತಾರ್ಕಿಕತೆಯನ್ನು ಪ್ರಶ್ನಿಸಿದ್ದು, ನಾಗಾಲ್ಯಾಂಡ್‌ನ ಆಕ್ರಮಣದಿಂದ ಪ್ರದೇಶವನ್ನು ರಕ್ಷಿಸಲು ಹಿಂದಿನ ಸರ್ಕಾರಗಳು ತಮ್ಮನ್ನು ಈ ಸ್ಥಳಕ್ಕೆ ಕರೆತಂದವು ಎಂದು ಹೇಳಿಕೊಂಡಿದ್ದಾರೆ.

“ಇಲ್ಲಿಂದ ನಾವು ಎಲ್ಲಿಗೆ ಹೋಗೋದು? ನನ್ನ ತಂದೆ ಸುಮಾರು 40 ವರ್ಷಗಳ ಹಿಂದೆ ನಾಗಾಂವ್ ಜಿಲ್ಲೆಯಿಂದ ಇಲ್ಲಿಗೆ ಬಂದವರು. ನಾನು ಇಲ್ಲೇ ಹುಟ್ಟಿ ಬೆಳೆದವ. 1980ರ ದಶಕದಲ್ಲಿ ನಾಗಾಲ್ಯಾಂಡ್‌ನ ಅತಿಕ್ರಮಣದಿಂದ ಅರಣ್ಯ ಭೂಮಿಯನ್ನು ರಕ್ಷಿಸಲು ನಮ್ಮ ಪೂರ್ವಿಕರನ್ನು ಇಲ್ಲಿಗೆ ಕರೆತರಲಾಯಿತು” ಎಂದು ತೆರವು ನೋಟಿಸ್ ಪಡೆದ ಅಲಿ ಕಾಜಿ ಎಂಬವರು ಪಿಟಿಐಗೆ ಹೇಳಿದ್ದಾರೆ.

1978-79ರಲ್ಲಿ ಮಾಜಿ ಮುಖ್ಯಮಂತ್ರಿ ಗೋಲಪ್ ಬೋರ್ಬೊರಾ ನೇತೃತ್ವದ ಜನತಾ ಪಕ್ಷದ ಸರ್ಕಾರ ಮತ್ತು 1985ರಲ್ಲಿ ಅಧಿಕಾರಕ್ಕೆ ಬಂದ ಮೊದಲ ಎಜಿಪಿ ಸರ್ಕಾರವು, ಇಲ್ಲಿನ ಹೆಚ್ಚಿನ ಜನರ ಪೂರ್ವಜರನ್ನುಅರಣ್ಯ ಪ್ರದೇಶದಲ್ಲಿ ನೆಲೆಸುವಂತೆ ಮಾಡಿತು ಎಂದಿದ್ದಾರೆ.

ಗಮನಾರ್ಹವಾಗಿ, ಅಸ್ಸಾಂಗೆ ಸೇರಿದ ಸುಮಾರು 83,000 ಎಕರೆ ಭೂಮಿಯನ್ನು ನಾಲ್ಕು ನೆರೆಯ ರಾಜ್ಯಗಳು ಆಕ್ರಮಿಸಿಕೊಂಡಿವೆ ಎಂದು ಮಾರ್ಚ್‌ನಲ್ಲಿ ವಿಧಾನಸಭೆಗೆ ತಿಳಿಸಲಾಗಿತ್ತು. ಅಸ್ಸಾಂನ ಅತಿ ಹೆಚ್ಚು 59,490.21 ಎಕರೆ ಭೂಮಿಯನ್ನು ನಾಗಾಲ್ಯಾಂಡ್ ತನ್ನ ವಶದಲ್ಲಿರಿಸಿಕೊಂಡಿವೆ ಎಂದು ಹೇಳಲಾಗಿತ್ತು.

“ಈ ತೆರವು ಕಾರ್ಯಾಚರಣೆಯಲ್ಲಿ ನಾವು ಅಧಿಕಾರಿಗಳೊಂದಿಗೆ ಸಹಕರಿಸುತ್ತಿದ್ದೇವೆ. ನಮಗೆ ಬೇರೆಡೆ ನೆಲೆಸಲು ಅವಕಾಶ ಮಾಡಿಕೊಡುವಂತೆ ವಿನಂತಿಸಿದ್ದೇವೆ. ಆದರೆ, ಅವರು ನಿರಾಕರಿಸಿದ್ದಾರೆ. ಈಗ ನಮಗೆ ಡೇರೆಗಳ ಕೆಳಗೆ ಇರುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಕುಡಿಯಲು ನೀರನ್ನು ಕೂಡ ಕೊಡುತ್ತಿಲ್ಲ, ಇನ್ನು ಆಹಾರದ ವಿಷಯ ಮರೆತುಬಿಡಿ. ಇದು ತುಂಬಾ ಅಮಾನವೀಯ” ಎಂದು ಕಾಜಿ ಅಳಲು ತೋಡಿಕೊಂಡಿದ್ದಾರೆ.

“ನಾವು ಅಕ್ರಮ ನಿವಾಸಿಗಳಾಗಿದ್ದರೆ ವಿದ್ಯುತ್ ಸಂಪರ್ಕ ಹೇಗೆ ಸಿಕ್ಕಿತು? ಸರ್ಕಾರ ಶಾಲೆಗಳನ್ನು ಹೇಗೆ ತೆರೆದರು? ನಮಗೆ ನೀರಿನ ಸಂಪರ್ಕ ಹೇಗೆ ಕೊಟ್ಟರು? ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಮಗೆ ಮನೆಗಳನ್ನು ನೀಡಲಾಗಿದೆ” ಎಂದು ಮತ್ತೊಬ್ಬರು ಸಂತ್ರಸ್ತೆ ಮುಮ್ತಾಝ್ ಹೇಳಿದ್ದಾರೆ.

ಅಕ್ರಮ ನಿವಾಸಿಗಳು ಎಂದು ಸರ್ಕಾರ ಗುರುತಿಸಿರುವವರಿಗೆ ನೀಡಲಾಗಿರುವ ಸರ್ಕಾರಿ ಸೌಲಭ್ಯಗಳ ಬಗ್ಗೆ ಪ್ರಶ್ನಿಸಿದಾಗ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಈ ಸೌಲಭ್ಯಗಳನ್ನು ಸರ್ಕಾರವೇ ನೀಡಿದೆ ಎಂಬುವುದನ್ನು ಒಪ್ಪಿಕೊಂಡಿದ್ದಾರೆ. 2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಈ ಜನಗಳಿಗೆ ಸೌಲಭ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಕ್ರಮ ನಿವಾಸಿಗಳಾಗಿದ್ದರೆ ಅವರಿಗೆ ಈ ಸೌಲಭ್ಯಗಳನ್ನು ಹೇಗೆ ನೀಡಲಾಯಿತು ಎಂಬುವುದು ನನಗೆ ಗೊತ್ತಿಲ್ಲ. ನಾನು ಇಲ್ಲಿಗೆ ಬರುವ ಮೊದಲೇ ಅವರಿಗೆ ಈ ಸೌಲಭ್ಯಗಳನ್ನು ನೀಡಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.
ಇಲ್ಲಿ ಮುಸ್ಲಿಮರಿಗೆ ಸೇರಿದ ಮಸೀದಿ ಮದ್ರಸಗಳು ಇತ್ತು. ಬೋಡೋಗಳು ಚರ್ಚ್‌ಗಳನ್ನು ನಿರ್ಮಿಸಿದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

12 ಹಳ್ಳಿಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲು, ಅಧಿಕಾರಿಗಳು ಇಡೀ ಪ್ರದೇಶವನ್ನು ಒಂಬತ್ತು ವಲಯಗಳಾಗಿ ವಿಂಗಡಿಸಿ, ಅದಕ್ಕೆ ಅನುಗುಣವಾಗಿ ಸಮೀಕ್ಷೆ ನಡೆಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ರೆಂಗ್ಮಾ ಮೀಸಲು ಅರಣ್ಯದ ಸುಮಾರು 30 ಹಳ್ಳಿಗಳ ವ್ಯಾಪ್ತಿಯಲ್ಲಿ ಭೂ ಸಮೀಕ್ಷೆ ನಡೆಸಲಾಗಿದೆ ಎಂದಿದ್ದಾರೆ.

12 ಹಳ್ಳಿಗಳಲ್ಲಿ ಶಂಕಿತ ಅತಿಕ್ರಮಣಕಾರರು ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸಿರುವುದು ಕಂಡುಬಂದಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದು, ಅರಣ್ಯ ಇಲಾಖೆಯಿಂದ ಅತಿಕ್ರಮಣದಾರರಿಗೆ ಸೂಕ್ತ ನೋಟಿಸ್ ನೀಡಲಾಗಿದೆ. ಸ್ಥಳ ಖಾಲಿ ಮಾಡಲು ಏಳು ದಿನಗಳ ಕಾಲಾವಕಾಶ ಕೊಡಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶಂಕಿತ ಅತಿಕ್ರಮಣದಾರರಲ್ಲಿ ಹಲವರು ನಾಗಾಂವ್, ಮೋರಿಗಾಂವ್ ಮತ್ತು ಸೋನಿತ್‌ಪುರ ಜಿಲ್ಲೆಗಳವರು ಎಂದು ವರದಿಯಾಗಿದ್ದಾಗಿ ಅವರು ಹೇಳಿದ್ದಾರೆ.

ತೆರವು ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ಅಸ್ಸಾಂ ಪೊಲೀಸ್ ಗೋಲಾಘಾಟ್‌ನಲ್ಲಿರುವ ಪ್ರಧಾನ ಕಚೇರಿಯಿಂದ ಹಿರಿಯ ಅಧಿಕಾರಿಯನ್ನು ನಿಯೋಜಿಸಿದೆ.

“ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ. ನಮ್ಮ ಸಿಬ್ಬಂದಿಯನ್ನು ಹೊರತುಪಡಿಸಿ, ತೆರವು ಕಾರ್ಯಾಚರಣೆಗೆ ಸಿಆರ್‌ಪಿಎಫ್‌ನ ಬೆಂಬಲವನ್ನು ಪಡೆದುಕೊಂಡಿದ್ದೇವೆ” ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಈ ನಡುವೆ ಅಸ್ಸಾಂನಲ್ಲಿ ನೆಲೆಯನ್ನು ಕಳೆದುಕೊಂಡ ಜನರು ನಾಗಲ್ಯಾಂಡ್ ಪ್ರವೇಶಿಸದಂತೆ ತಡೆಯಲು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಲ್ಲಿನ ಸರ್ಕಾರ ಸೂಚಿಸಿದೆ.

ಜುಲೈ 25ರಂದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಉರಿಯಮ್‌ಘಾಟ್‌ಗೆ ಭೇಟಿ ನೀಡಿ ಅತಿಕ್ರಮಣಗೊಂಡಿರುವ ಪ್ರದೇಶಗಳನ್ನು ಪರಿಶೀಲಿಸಿದ್ದಾರೆ. ಇಲ್ಲಿ ತೆರವು ಕಾರ್ಯಾಚರಣೆಗೆ ಈಗಾಗಲೇ ನೋಟಿಸ್ ನೀಡಲಾಗಿದೆ.

ಈ ಪ್ರದೇಶದಲ್ಲಿ ನೆಲೆಸಿದವರು ಅಸ್ಸಾಂನ ವಿವಿಧ ಜಿಲ್ಲೆಗಳಾದ ಕ್ಯಾಚರ್, ಶ್ರೀಭೂಮಿ, ಧುಬ್ರಿ, ಬಾರ್ಪೇಟಾ, ಹೊಜೈ, ನಾಗಾಂವ್ ಮತ್ತು ಮೋರಿಗಾಂವ್ ಹಾಗೂ ಪಶ್ಚಿಮ ಬಂಗಾಳ ಮತ್ತು ಬಿಹಾರ ಸೇರಿದಂತೆ ಇತರ ರಾಜ್ಯಗಳಿಂದ ಬಂದವರು ಎಂದು ಸಿಎಂ ಶರ್ಮಾ ಹೇಳಿದ್ದಾರೆ.

Courtesy:newindianexpress.com

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...