Homeಮುಖಪುಟಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ: 35 ಸಾವಿರ ಜನರ ಸ್ಥಳಾಂತರ

ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ: 35 ಸಾವಿರ ಜನರ ಸ್ಥಳಾಂತರ

ಇಲ್ಲಿಯವರೆಗೆ 36,290 ಜನರನ್ನು ಹಸ್ತಾಂತರಿಸಲಾಗಿದೆ, 174 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.

- Advertisement -
- Advertisement -

ಭೀಮಾ ನದಿಯು ತನ್ನ ಅಪಾಯಕಾರಿ ಮಟ್ಟಕಿಂತಲೂ ತುಂಬಿ ಹರಿಯುತಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಪರಿಸ್ಥಿತಿಯು ಭೀಕರವಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅನೇಕ ಗ್ರಾಮಗಳು ಪ್ರವಾಹದಿಂದ ಮುಳುಗಿದ್ದರಿಂದ 35,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟದಲ್ಲಿ ಧಾರಾಕಾರ ಮಳೆಯಾಗಿದ್ದು ಮತ್ತು ಅಲ್ಲಿನ ಅಣೆಕಟ್ಟುಗಳಿಂದ ನೀರನ ಬಿಡುಗಡೆ ಮಾಡಿರುವುದರಿಂದ ಅಕ್ಟೋಬರ್ 14 ರಿಂದ ಭೀಮಾ ನದಿಯ ನೀರಿನ ಹರಿವು ಹೆಚ್ಚಾಗಿ ಹರಿಯುತ್ತಿದೆ. ಕೃಷ್ಣ ನದಿಯ ಉಪನದಿಯಾದ ಈ ನದಿಯು ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಪ್ರದೇಶಗಳಲ್ಲಿ ಭಾರಿ ಸಂಕಷ್ಟ ತಂದಿಟ್ಟಿದೆ.

ಕರ್ನಾಟಕ ಸರ್ಕಾರದ  ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ (ಕೆಎಸ್ಎನ್‌ಡಿಎಂಸಿ) ಅಧಿಕಾರಿಗಳು ನಾಲ್ಕು ಜಿಲ್ಲೆಗಳಲ್ಲಿ 97 ಗ್ರಾಮಗಳಲ್ಲಿ ಹೆಚ್ಚಿನ ಜನರು ಹಾನಿಗೆ ಒಳಗಾಗಿದ್ದಾರೆ ಎಂದು ತಿಳಿಸಿದೆ. ಇಲ್ಲಿಯವರೆಗೆ 36,290 ಜನರನ್ನು ಹಸ್ತಾಂತರಿಸಲಾಗಿದೆ, 174 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಮತ್ತು ಇಲ್ಲಿಯೇ 28,008 ರಷ್ಟು ಜನರು ಇಲ್ಲಿಯೇ ಉಳಿದ್ದಾರೆ ಎಂದು ಕೆಎಸ್ಎನ್‌ಡಿಎಂಸಿ ಅಧಿಕಾರಿಗಳು ಹೇಳಿದ್ದಾರೆ.

ಸೇನೆ ಮತ್ತು ವಿಪತ್ತು ನಿರ್ವಹಣೆಯ ಸಿಬ್ಬಂದಿಗಳು ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹಸ್ತಾಂತರಿಸುವುದರಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ಭಾನುವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವೊಂದು ಪ್ರದೇಶಗಳು ನೀರಿನಿಂದ ಆವೃತವಾಗಿವೆ. 24 ಗಂಟೆಗಳ ಅವಧಿಯಲ್ಲಿ ನಗರದಲ್ಲಿ 39.6 ಮಿ.ಮಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ರೂ ದೇಣಿಗೆ ನೀಡಲು ಮುಂದಾದ ದೆಹಲಿ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಾರ್ವಜನಿಕರ ಮೇಲೆ ಸವಾರಿ ಮಾಡಲು ಬಿಡುವುದಿಲ್ಲ..’; ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಸುಪ್ರೀಂ ಕಿಡಿ

0
"ಸಾರ್ವಜನಿಕರ ಮೇಲೆ ಸವಾರಿ ಮಾಡಲು ನಾವು ಬಿಡುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದ್ದು, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಎದುರಿಸಲು ತಾವು ಸಕ್ರಿಯರಾಗಿರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಳಿಗೆ ಸೂಚನೆ ನೀಡಿದೆ. 1945ರ...