Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಭಾರತೀಯರಲ್ಲಿ ಹೃದಯ ಕಾಯಿಲೆಗಳ ಅಪಾಯ ಹೆಚ್ಚು: ಸಂಶೋಧನಾ ವರದಿಯಲ್ಲಿ ಬಹಿರಂಗ

ಬೆಂಗಳೂರಿನಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ ದಕ್ಷಿಣ ಭಾರತೀಯರು ಹೈಪರ್ಟ್ರೋಫಿಕ್ ಕಾರ್ಡಿಯೊಮಯೋಪತಿಯ ಅಪಾಯವನ್ನು ಹೆಚ್ಚಿಸುವ ಹಾನಿಕಾರಕ ಆನುವಂಶಿಕ ರೂಪಾಂತರಗಳನ್ನು ಹೊಂದಿದ್ದಾರೆ ಎಂಬ ವಿಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್‌ ಮತ್ತು ಹಿಂದೂಸ್ತಾನ್ ಟೈಮ್ಸ್...

ಜಾತಿ ಕಾರಣಕ್ಕೆ ಪ್ರೇಮಿಯ ಮರ್ಯಾದೆಗೇಡು ಹತ್ಯೆ; ಶವವನ್ನೇ ಮದುವೆಯಾದ ಯುವತಿ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ವ್ಯಕ್ತಿಯೊಬ್ಬನನ್ನು ಥಳಿಸಿ, ಗುಂಡು ಹಾರಿಸಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಆತನ ಗೆಳತಿ, ಹಣೆಯ ಮೇಲೆ ಸಿಂಧೂರ ಹಚ್ಚಿಕೊಂಡು, ಆತನ ಮನೆಯಲ್ಲಿ ಸೊಸೆಯಾಗಿ...

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...