Homeಮುಖಪುಟಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಜಿಎಸ್‌ಟಿ ವಂಚನೆಗಳ ಬಗ್ಗೆ ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಮೋಸದ ವಹಿವಾಟುಗಳಲ್ಲಿ ತೊಡಗಿರುವ 200 ಕ್ಕೂ ಹೆಚ್ಚು ನಕಲಿ ಕಂಪನಿಗಳನ್ನು ಬಹಿರಂಗಪಡಿಸಿದೆ. ಭಾರೀ GST ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಜಿಜಿಐ ನೀಡಿದ ಗುಪ್ತಚರ ಆಧಾರದ ಮೇಲೆ ಅಹಮದಾಬಾದ್ ಅಪರಾಧ ವಿಭಾಗವು ಅಹಮದಾಬಾದ್, ಜುನಾಗಢ, ಸೂರತ್, ಖೇಡಾ ಮತ್ತು ಭಾವನಗರ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಬೃಹತ್ GST ವಂಚನೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಮಾಡಲಾಗಿರುವ ಈ ಕಾರ್ಯಾಚರಣೆಯ ಪರಿಣಾಮವಾಗಿ 12 ನಕಲಿ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದು ನಂಬಲಾದ 33 ಪ್ರಮುಖ ಆಪರೇಟರ್‌ಗಳನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ. ಭಾರೀ GST ವಂಚನೆ

ಇದನ್ನೂಓದಿ: ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

ಸೌರಾಷ್ಟ್ರ ಶಾಸಕರ ಪುತ್ರ ಮತ್ತು ಪತ್ರಕರ್ತರೂ ಆಗಿರುವ ಮಹೇಶ್ ಲಾಂಗಾ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ತನಿಖೆಯ ನಂತರ ಅವರು ಸೇರಿದಂತೆ ಇತರರನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ. “ಸುಳ್ಳು ದಾಖಲೆಗಳನ್ನು ಬಳಸಿದ್ದಾರೆಂದು ಆರೋಪಿಸಿ ಜಿಎಸ್‌ಟಿ ಅಧಿಕಾರಿಗಳಿಂದ ಬಂದ ದೂರಿನ ಆಧಾರದ ಮೇಲೆ ಪತ್ರಕರ್ತ ಮಹೇಶ್ ಲಾಂಗಾ ಅವರನ್ನು ಬಂಧಿಸಲಾಗಿದೆ” ಎಂದು ಕ್ರೈಂ ಬ್ರಾಂಚ್‌ನ ಎಸಿಪಿ ಭರತ್ ಪಟೇಲ್ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಅಪರಾಧ ವಿಭಾಗವು ಎಲ್ಲಾ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಂಡು ಸಮಗ್ರ ತನಿಖೆ ನಡೆಸುತ್ತದೆ. ನಡೆಯುತ್ತಿರುವ ವಿಚಾರಣೆಯ ಸಮಯದಲ್ಲಿ ಹೆಚ್ಚಿನ ವಿವರಗಳು ಲಭ್ಯವಾಗುವುದರಿಂದ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಆರೋಪಿಗಳು ವಂಚನೆಯ ತೆರಿಗೆ ಕ್ಲೈಮ್‌ಗಳನ್ನು ಸುಗಮಗೊಳಿಸಲು ಮತ್ತು ಜಿಎಸ್‌ಟಿ ಪಾವತಿ ಮಾಡುವುದರಿಂದ ತಪ್ಪಿಸಿಕೊಳ್ಳಲು ಶೆಲ್ ಕಂಪನಿಗಳನ್ನು ರಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದು, ದೊಡ್ಡ ಪ್ರಮಾಣದ ಹಣಕಾಸು ವಂಚನೆಯ ಬಗ್ಗೆ ತನಿಖೆ ತೀವ್ರವಾಗುತ್ತಿದ್ದಂತೆ ಹೆಚ್ಚಿನ ಬಂಧನಗಳು ನಡೆಸಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂಓದಿ: ರೈತ-ಕಾರ್ಮಿಕ ಹಿತ ರಕ್ಷಣಾ ಸಮಿತಿ ಮಲೆನಾಡು: ಪತ್ರಿಕಾಗೋಷ್ಠಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...