Homeಕರ್ನಾಟಕಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

- Advertisement -
- Advertisement -

ಮಠದ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘ ಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಇದೇ ಸೆ.2ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿದೆ.

ಸೆಪ್ಟೆಂಬರ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದೆ. ಅದೇ ಹೊತ್ತಿಗೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆಯಲಿವೆ ಎಂದು ಸಂಘಟನೆಗಳು ತಿಳಿಸಿವೆ.

ದಲಿತ ಸಂಘಟನೆಗಳು, ವಿದ್ಯಾರ್ಥಿ ಯುವಜನ ಸಂಘಟನೆಗಳು, ಎಲ್ಲ ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರೈತ ಮತ್ತು ಕೃಷಿಕೂಲಿಕಾರರ ಸಂಘಟನೆಗಳು, ಅಲ್ಪಸಂಖ್ಯಾತರ ಸಂಘಟನೆಗಳು ನೌಕರರ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳು ವಕೀಲರ ಸಂಘಟನೆಗಳು, ಲೈಂಗಿಕ ಅಲ್ಪಸಂಖ್ಯಾತರು, ವಿವಿಧ ಗುಂಪುಗಳು ಮತ್ತು ಜೀವಪರ ವ್ಯಕ್ತಿಗಳ ಜಂಟಿ ನೇತೃತ್ವದಲ್ಲಿ ಮರುಘಾ ಮಠಾಧೀಶರ ಬಂಧನಕ್ಕೆ ಆಗ್ರಹಿಸಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಎಸ್‌.ಸಿ., ಎಸ್‌.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರು ಸೆಕ್ಷನ್‌ 164ರ ಅಡಿಯಲ್ಲಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಪೊಲೀಸ್‌ ಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಶಿಷ್ಟ ರೀತಿಯಲ್ಲಿ ಕಾನೂನು ಪಾಲನೆ ಮಾಡುವುದು ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘಟನೆಗಳು ಹೇಳಿವೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹೇಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. “ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ” ಎಂಬ ಆರೋಪಗಳು ಬಂದಿವೆ. ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತಾರೆಂಬ ಯಾವುದೇ ಖಚಿತ ಮಾಹಿತಿ ಇಲ್ಲ.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...