Homeಮುಖಪುಟದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

ದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

- Advertisement -
- Advertisement -

ಏರುತ್ತಿರುವ ಬೆಲೆಗಳು, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್‌ ಪಕ್ಷದ ದೆಹಲಿ ಪ್ರಧಾನ ಕಚೇರಿಯ ಹೊರಗೆ ಪಕ್ಷವು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿದರು. ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಇಂದು ಮುಂದೂಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರು ಮತ್ತು ಹಿರಿಯ ನಾಯಕರು “ಪಿಎಂ ಹೌಸ್ ಘೇರಾವ್”ನಲ್ಲಿ ಭಾಗವಹಿಸಲು ಯೋಜಿಸಿದ್ದರಾದರೂ, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸಂಸತ್ತಿನಿಂದ “ಚಲೋ ರಾಷ್ಟ್ರಪತಿ ಭವನ” ನಡೆಸಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಕಳ್ಳಭಟ್ಟಿ ಮದ್ಯ ಕುಡಿದು 36 ಸಾವು: ಅಕ್ರಮ ದಂಧೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಕಾಂಗ್ರೆಸ್ ಮೆರವಣಿಗೆಗೆ ಮುಂಚಿತವಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಿ ಆಡಳಿತವು ನಿಷೇಧಾಜ್ಞೆಗಳನ್ನು ವಿಧಿಸಿತ್ತು. ಈ ನಿರ್ಬಂಧಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದರು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ಅವರನ್ನು ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ಪೊಲೀಸ್ ಲೈನ್ಸ್‌ನಲ್ಲಿ ಇರಿಸಲಾಗಿದೆ.

ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ, “ನಾವು ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗಿದ್ದೇವೆ. ಸುಮಾರು ಒಂದು ಶತಮಾನದ ಹಿಂದಿನಿಂದ ನಿರಂತರವಾಗಿ ಕಟ್ಟುತ್ತಾ ಬಂದಿರುವ ಭಾರತವು ನಿಮ್ಮ ಕಣ್ಣುಗಳ ಮುಂದೆ ನಾಶವಾಗುತ್ತಿದೆ. ಇದರ ವಿರುದ್ಧ ನಿಂತಿರುವವರ ವಿರುದ್ಧ ಸರ್ವಾಧಿಕಾರವು ಕ್ರೂರವಾಗಿ ದಾಳಿ ಮಾಡುತ್ತಿದೆ, ಜೈಲಿಗೆ ಹಾಕುತ್ತಿದೆ, ಬಂಧಿಸುತ್ತಿದೆ ಮತ್ತು ಥಳಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿನ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದೆ. ಈ ವಿಷಯಗಳ ಕುರಿತು ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

0
ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ...