Homeಮುಖಪುಟಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ, ತಮ್ಮ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ನೂರಾರು ಶ್ರಮಿಕ ವ್ಯಾಪಾರಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. “ಒಕ್ಕಲೆಬ್ಬಿಸಿದ ಬಡ ವ್ಯಾಪಾರಿಗಳಿಗೆ ತಕ್ಷಣವೇ ಅದೇ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಸೇರಿದಂತೆ ಹಲವು ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಗಾರರು ಧ್ವನಿ ಎತ್ತಿದ್ದಾರೆ.

ನಗರದ ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಪಾಲಿಕೆಗಳ ವ್ಯಾಪ್ತಿಯಲ್ಲಿ ಜಿಬಿಎ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸುತ್ತಿರುವುದು ವ್ಯಾಪಾರಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಪೊರೇಟ್ ಹಿತಾಸಕ್ತಿಗಳಿಗಾಗಿ ಬಡವರ ಹೊಟ್ಟೆಯ ಮೇಲೆ ಹೊಡೆಯಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ.

ಸಚಿವ ಕೃಷ್ಣಬೈರೇಗೌಡರೇ ಸ್ಥಳಕ್ಕೆ ಬನ್ನಿ:

ಪ್ರತಿಭಟನಾ ನಿರತ ಮುಖಂಡರು ಮಾತನಾಡಿ, “ಅಭಿವೃದ್ಧಿಯ ಹೆಸರಿನಲ್ಲಿ ಬಡವರ ಸ್ವಾವಲಂಬಿ ಬದುಕನ್ನು ನಾಶಪಡಿಸುತ್ತಿರುವುದು ಖಂಡನೀಯ. ತಕ್ಷಣವೇ ಈ ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು. ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಖುದ್ದಾಗಿ ಸ್ಥಳಕ್ಕೆ ಬಂದು ನಮ್ಮ ಅಹವಾಲು ಆಲಿಸಬೇಕು. ಇಲ್ಲವಾದರೆ ಇಡೀ ಬೆಂಗಳೂರಿನಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ಬೀದಿಬದಿ ವ್ಯಾಪಾರಿಗಳ ಪ್ರಮುಖ ಬೇಡಿಕೆಗಳು ಇಲ್ಲಿವೆ:

  • ಒಕ್ಕಲೆಬ್ಬಿಸಲಾದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ತಕ್ಷಣವೇ ಮತ್ತೆ ಅದೇ ಸ್ಥಳದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಬೇಕು.
  • ಸಾರ್ವಜನಿಕರ ಸಂಚಾರಕ್ಕೆ ನಿಜಕ್ಕೂ ಅಡ್ಡಿಯಾಗಿದ್ದರೆ, ಅಷ್ಟೇ ವ್ಯಾಪಾರ ವಹಿವಾಟು ನಡೆಯುವ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಿಕೊಡಬೇಕು.
  • ಅಧಿಕಾರಿಗಳು ಅಕ್ರಮವಾಗಿ ಜಪ್ತಿ ಮಾಡಿರುವ ಬಡ ವ್ಯಾಪಾರಿಗಳ ಸರಕು ಮತ್ತು ಸಾಮಗ್ರಿಗಳನ್ನು ಬೇಷರತ್ತಾಗಿ ವಾಪಸ್ ನೀಡಬೇಕು.
  • ಕೇಂದ್ರ ಸರ್ಕಾರದ ‘ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ’ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
  • ನಗರದಾದ್ಯಂತ ವ್ಯಾಪಾರಿಗಳ ಸಮಗ್ರ ಸಮೀಕ್ಷೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯ ‘ಎತ್ತಂಗಡಿ’ ಪ್ರಕ್ರಿಯೆಯನ್ನು ನಡೆಸಬಾರದು.
  • ಹೊಸದಾಗಿ ರಚನೆಯಾಗಿರುವ ನಗರ ಪಾಲಿಕೆಗಳಲ್ಲಿ ತಕ್ಷಣವೇ ನಿಯಮಾನುಸಾರ ‘ಟೌನ್ ವೆಂಡಿಂಗ್ ಕಮಿಟಿ’ಗಳನ್ನು (TVC) ರಚಿಸಬೇಕು.
  • ನಗರದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಫುಟ್‌ಪಾತ್‌ಗಳನ್ನು ವೈಜ್ಞಾನಿಕವಾಗಿ ಅಗಲೀಕರಣ ಮಾಡಬೇಕು.

ಬೃಹತ್ ಒಗ್ಗಟ್ಟು ಪ್ರದರ್ಶಿಸಿದ ಜಂಟಿ ಹೋರಾಟ ಸಮಿತಿ:

ಬೀದಿಬದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಗೆ ರಾಜ್ಯದ ಪ್ರಮುಖ ಶ್ರಮಿಕ ಸಂಘಟನೆಗಳು ಜಂಟಿಯಾಗಿ ಬೆಂಬಲ ಘೋಷಿಸಿವೆ. ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ, ಕರುನಾಡು ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟ, ನವ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘ, ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳ ಮತ್ತು ಕರ್ನಾಟಕ ಮಹಿಳಾ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಸಾವಿರಾರು ಕಾರ್ಯಕರ್ತರು ಈ ಐಕ್ಯ ಹೋರಾಟದಲ್ಲಿ ಭಾಗವಹಿಸಿ, ಸರ್ಕಾರದ ಬಡವಿರೋಧಿ ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...