Homeಮುಖಪುಟಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಸಂಚಾರವನ್ನು ನಿಷೇಧಿಸುವ ಉದ್ದೇಶದಿಂದ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯ ಗವರ್ನರ್ ಆಚಾರ್ಯ ದೇವವ್ರತ್‌ ಅವರು, “ನಗರ ಪ್ರದೇಶಗಳಲ್ಲಿ ಗುಜರಾತ್ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ”ಯನ್ನು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಹೇಳಿದ್ದರು. ಇದಾಗಿ ಕೆಲವು ದಿನಗಳ ನಂತರ ಮಸೂದೆ ಹಿಂಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರು ಸೆಪ್ಟೆಂಬರ್ 17 ರಂದು ಮಸೂದೆಯನ್ನು ಹಿಂತಿರುಗಿಸಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ನಿಮಾ ಆಚಾರ್ಯ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಸಂದೇಶವನ್ನು ಓದಿದ ಅವರು, “ರಾಜ್ಯಪಾಲರು ತಮ್ಮ ಸಂದೇಶದಲ್ಲಿ ಮಸೂದೆಯ ವಿರುದ್ಧ ಮಾಲ್ಧಾರಿ (ಪಶು ಪಾಲಕರು) ಸಮುದಾಯದ ಪ್ರತಿನಿಧಿಗಳ ಮನವಿಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

“ಪಶುಪಾಲನೆ ಸಮುದಾಯದ ಜೀವನದ ಭಾಗವಾಗಿದೆ. ಆದ್ದರಿಂದ, ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಪಾಲರು ಮರುಪರಿಶೀಲನೆಗಾಗಿ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಮಸೂದೆಯನ್ನು ಹಿಂದಿರುಗಿಸುತ್ತಿದ್ದಾರೆ” ಸ್ಪೀಕರ್‌‌ ಅವರು ರಾಜ್ಯಪಾಲರ ಸಂದೇಶವನ್ನು ಓದುತ್ತಾ ಹೇಳಿದ್ದಾರೆ.

ಜಾನುವಾರುಗಳನ್ನು ವಶಪಡಿಸಿಕೊಳ್ಳುವ ವಿಧಾನ ಮತ್ತು ಮಸೂದೆಯಲ್ಲಿ ವಿಧಿಸಲಾದ ಭಾರಿ ದಂಡವನ್ನು ಮಾಲ್ಧಾರಿ ಸಮುದಾಯವು ವಿರೋಧಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮಸೂದೆಯ ಪ್ರಕಾರ, ನಗರ ಮತ್ತು ಪಟ್ಟಣಗಳಲ್ಲಿ ಜಾನುವಾರುಗಳನ್ನು ಸಾಕುವವರು  ಬಿಡಾಡಿ ಹಸುಗಳು ಮತ್ತು ಹೋರಿಗಳಂತಹ ಪ್ರಾಣಿಗಳನ್ನು ಸಾಕಲು ಪರವಾನಗಿಯನ್ನು ಪಡೆಯಬೇಕು. ಅವುಗಳಿಗೆ ಟ್ಯಾಗ್ ಮಾಡಬೇಕು. ಇದನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಎಪಿಎಂಸಿ-ಭೂ ಸುಧಾರಣೆ-ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಬುಧವಾರದಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನೋದ್ ಮೊರಾಡಿಯಾ ಅವರು ಮಸೂದೆಯನ್ನು ಹಿಂಪಡೆಯುವ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಮಸೂದೆಯನ್ನು ಅಂಗೀಕರಿಸಿದ ನಂತರ ರಾಜ್ಯದಾದ್ಯಂತ ಮಾಲ್ಧಾರಿ ಸಮುದಾಯದಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಇದರ ನಂತರ ಎಪ್ರೀಲ್‌ನಲ್ಲಿ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು ಮಸೂದೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಮನವಿ ಮಾಡಿದ್ದೇನೆ ಎಂದು ಸಮುದಾಯಕ್ಕೆ ಭರವಸೆ ನೀಡಿದ್ದರು.

ಅಲ್ಲದೆ, ಸರ್ಕಾರದ ವಕ್ತಾರ ಜಿತು ವಘಾನಿ ಅವರು ಮಸೂದೆಯನ್ನು ಜಾರಿಗೊಳಿಸದಿರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಆಗಸ್ಟ್‌ನಲ್ಲಿ ಹೈಕೋರ್ಟ್‌ ಮಸೂದೆಯ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವನ್ನು ಕೇಳಿತ್ತು. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿಯ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಇತರ ನಗರ ನಾಗರಿಕ ಸಂಸ್ಥೆಗಳಿಗೆ ನಿರಂತರವಾಗಿ ಕೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...