Homeಮುಖಪುಟಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

ಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಮಾತು ಮರೆತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಜನಾಕ್ರೋಶ ಭುಗಿಲೆದ್ದಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಅಲ್ಲಿನ ಪರಿಸರವನ್ನು ಗಣಿ, ಕೈಗಾರಿಕೆ ಮಾಫಿಯಾಗಳಿಂದ ಕಾಪಾಡಬೇಕು, ಆರನೇ ಪರಿಚ್ಛೇದದ ಮಾನ್ಯತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಡಿ ನಾಡಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮಾರ್ಚ್ 24 ರಂದು ಪರಿಸರ ಕಾರ್ಯಕರ್ತ ಮತ್ತು ರಾಮನ್ ಮ್ಯಾಗ್ಸಾಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ.

ಚೀನಾ ಜೊತೆಗಿನ ಗಡಿ ಸಂಘರ್ಷ ಶಮನಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿ ಮೂರನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಆ ನಂತರ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಆಯಕಟ್ಟಿನ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕೇಂದ್ರ ಗೃಹ ಸಚಿವಾಲಯವು 2019 ರಲ್ಲಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಬಳಿಕ ಲಡಾಖ್‌ಗೆ ಸಾಂವಿಧಾನಿಕ ಸುರಕ್ಷತೆಗಳನ್ನು ನೀಡಬೇಕು ಎಂಬ ಅಲ್ಲಿನ ಜನರ ಬೇಡಿಕೆಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದೆ.

‘ದಿ ವೈರ್‌’ನೊಂದಿಗೆ ಮಾತನಾಡಿರುವ ಲಡಾಖ್‌ನಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಡಿಎ ಸದಸ್ಯ ಸಜ್ಜದ್ ಹುಸೇನ್, ಲಡಾಖ್‌ಗೆ ಸಂವಿಧಾನ 6ನೇ ಶೆಡ್ಯೂಲ್‌ ಸ್ಥಾನಮಾನ ನೀಡುವುದು ಮತ್ತು ರಾಜ್ಯದ ಸ್ಥಾನಮಾನ ನೀಡುವ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕೇಂದ್ರದೊಂದಿಗಿನ ಮಾತುಕತೆಗಳು ವಿಫಲವಾದ ಕಾರಣ ಮಾರ್ಚ್ 24 ರಿಂದ ಮಾರ್ಚ್ 27 ರವರೆಗೆ ನಾವು ವಾಂಗ್‌ಚುಕ್‌ ಅವರ ಉಪವಾಸ ಸತ್ಯಾಗ್ರಹದ ಜೊತೆ ಸೇರಿಕೊಳ್ಳುತ್ತೇವೆ ಎಂದಿದ್ದಾರೆ.

“ರಾಜ್ಯದ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಲಡಾಖಿಗಳ ಹೃದಯಕ್ಕೆ ಸಾಮಿಪ್ಯ ಇರುವ ವಿಷಯಗಳು. ಇದು ಕೇವಲ ನಮ್ಮ ಬೇಡಿಕೆಯಲ್ಲ. ಇದು ಲಡಾಖ್ ಜನರ ಭಾವನೆ ಮತ್ತು ಆಕಾಂಕ್ಷೆಯಾಗಿದೆ. ನಾವು ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ” ಎಂದು ಪ್ರಮುಖ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಹುಸೇನ್ ಹೇಳಿದ್ದಾರೆ.

ಕಳೆದ 15 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್‌ಗೆ ಬೆಂಬಲವಾಗಿ ಕೆಡಿಎ ಅರ್ಧ ದಿನದ ಬಂದ್ ಕರೆ ನೀಡಿದ ನಂತರ ಮಾರ್ಚ್ 20 ರಂದು ಬುಧವಾರ ಕಾರ್ಗಿಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಲಡಾಖ್‌ನ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾರ್ಗಿಲ್‌ನ ಮುಖ್ಯ ಮಾರುಕಟ್ಟೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್‌ ಅವರ ಪ್ರಮುಖ ಬೇಡಿಕೆಯಾಗಿತ್ತು. ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವದ ಮರುಸ್ಥಾಪನೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ಕೆಡಿಎಯ ಸಹ ಸಂಚಾಲಕ ಮತ್ತು ಜಮ್ಮು ಕಾಶ್ಮೀರದ ಮಾಜಿ ಶಾಸಕ ಅಸ್ಗರ್ ಅಲಿ ಕರ್ಬಲೈ ಅವರು ಫಾತಿಮಾ ಚೌಕ್‌ನಿಂದ ಕಾರ್ಗಿಲ್‌ನ ಹುಸೇನಿ ಪಾರ್ಕ್‌ವರೆಗೆ ರ್‍ಯಾಲಿಯನ್ನು ಮುನ್ನಡೆಸಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮಾತುಕತೆ ವಿಫಲಗೊಂಡ ಬಳಿಕ ಕರ್ಬಲೈ ಅವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.

“ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿದೆ. ಲಡಾಖ್‌ ಜನರ ಧ್ವನಿಯನ್ನು ಬಲ ಪ್ರಯೋಗ ಮಾಡಿ ಹತ್ತಿಕ್ಕಬಹುದು ಎಂದು ಕೇಂದ್ರ ಸರ್ಕಾರ ಅಂದುಕೊಂಡಿದೆ. ಆದರೆ, ಲಡಾಖ್‌ನ ಜನರು ತಮ್ಮ ಹಕ್ಕುಗಳಿಗಾಗಿ ಹೋರಾಟದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಿದ್ದಾರೆ” ಎಂದು ಕರ್ಬಲೈ ಹೇಳಿದ್ದಾರೆ.

ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಯಾಕೆ? 

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಪರಿಸರ ಹೋರಾಟಗಾರ ವಾಂಗ್‌ಚುಕ್ ಅವರು ಮಾರ್ಚ್ 6ರಿಂದ ಕೇವಲ ನೀರು ಮತ್ತು ಉಪ್ಪು ಸೇವಿಸುತ್ತಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮುಂದೆ ಲಡಾಖ್‌ನಲ್ಲಿ ಗಣಿಗಾರಿಕೆ, ಕೈಗಾರಿಕೆ ಸ್ಥಾಪನೆಯಾದೆ ಪರಿಸರಕ್ಕೆ ಉಂಟಾಗಲಿರುವ ಅತೀವ ಹಾನಿಯ ಕುರಿತು ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

2019ರ ಸಂಸತ್ತಿನ ಚುನಾವಣೆ ಮತ್ತು 2020ರ ಜಮ್ಮು ಕಾಶ್ಮೀರದ ಹಿಲ್ ಕೌನ್ಸಿಲ್ ಚುನಾವಣೆಗಳಿಗೆ ಮುಂಚಿತವಾಗಿ ತನ್ನ ಚುನಾವಣಾ ಪ್ರಣಾಳಿಕೆಗಳಲ್ಲಿ ಲಡಾಖ್ ಜನರಿಗೆ ನೀಡಿದ್ದ ಭರವಸೆಗಳನ್ನು ವಾಂಗ್‌ಚುಕ್ ಅವರು ವಿಡಿಯೋ ಸಂದೇಶ ಮೂಲಕ ಬಿಜೆಪಿ ನಾಯಕರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ.

“ಈ ಸರ್ಕಾರವು ಭಾರತವನ್ನು ‘ಪ್ರಜಾಪ್ರಭುತ್ವದ ತಾಯಿ’ ಎಂದು ಕರೆಯುತ್ತದೆ. ಆದರೆ, ಭಾರತವು ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಇತ್ತೀಚಿನ ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಲಡಾಖ್‌ಗೆ 6ರನೇ ಶೆಡ್ಯೂಲ್‌ಗಾಗಿ ಜನಾಂದೋಲನ (People’s Movement for Sixth Schedule for Ladakh) ಎಂಬ ಬ್ಯಾನರ್‌ನಡಿಯಲ್ಲಿ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ವಾಂಗ್‌ಚುಕ್ ಅವರು, ಇಡೀ ದೇಶಕ್ಕೆ ಲಡಾಖ್‌ನ ವಾಸ್ತವತೆಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲಡಾಖ್‌ನ ಕುರುಬರು, ರೈತರು ಸೇರಿದಂತೆ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ದಕ್ಷಿಣ ಭಾರತದ ಕೈಗಾರಿಗಳು ಮತ್ತು ಚೀನಾದ ಆಕ್ರಮಣದಿಂದ ಲಡಾಖ್‌ ಅನ್ನು ರಕ್ಷಿಸಿ ಎಂಬುವುದು ಈ ಜನರ ಕೂಗಾಗಿದೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ.

ಇದನ್ನೂ ಓದಿ : ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...