Homeಮುಖಪುಟಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

ಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ಕಡೆ ರೈತರ ಪ್ರತಿಭಟನೆ, ಬಿಜೆಪಿ ವಿರುದ್ಧದ ಅಭಿಯಾನಗಳು ನಡೆಯುತ್ತಿರುವ ಮಧ್ಯೆ ಉತ್ತರ ಭಾರತದ ಶೀತ ಮರುಭೂಮಿಯಾದ ಲಡಾಖ್‌ನ ರಾಜಧಾನಿ ಲೇಹ್‌ನಲ್ಲಿ ಮೈ ಕೊರೆವ ಚಳಿಯ ಮಧ್ಯೆ ಬಹುತೇಕ ಬುಡಕಟ್ಟು ಪ್ರತಿಭಟನಾಕಾರರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ತಮ್ಮ ಭೂಮಿಯನ್ನು ಆಕ್ರಮಿಸಿಕೊಂಡಿರುವ ಚೀನಾದ ವಿರುದ್ಧ ಲಡಾಖ್‌ನ ಜನರು ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮೌನವಾಗಿದ್ದಾರೆ, ಭಾರತ ಸರ್ಕಾರ ಮೌನವಾಗಿದೆ ಮತ್ತು ಭಾರತದ ಮಾಧ್ಯಮಗಳು ಚೀನಾ 2,000 ಚದರ ಕಿಮೀ ಭಾರತದ ಭೂಮಿಯನ್ನು ಕಬಳಿಸಿದರೂ ಮೌನವಾಗಿವೆ.

ಲಡಾಖ್‌ನಲ್ಲಿರುವ ಲೇಹ್‌ನಲ್ಲಿ, ಹದಿಹರೆಯದವರಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸೇರಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಬಿಜೆಪಿಯು, ಈ ಹಿಂದಿನ ಚುನಾವಣೆ ವೇಳೆ ನೀಡಿದ್ದ ಪ್ರಮುಖ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ, ನಮ್ಮ ಭೂಭಾಗದ ಆಕ್ರಮಣ ನಡೆಯುತ್ತಿದೆ ಎಂದು ಸಾವಿರಾರು ಮಂದಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಲಡಾಖ್‌ ಆಡಳಿತವು ಈ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಚೀನಾದಿಂದ ಭಾರತದ ಭೂಭಾಗದ ಆಕ್ರಮಣ ಮಾಡಲಾಗಿದೆ ಮತ್ತು ದಕ್ಷಿಣದಲ್ಲಿ ಕಾರ್ಪೊರೇಟ್‌ಗಳಿಂದ ಸಾವಿರಾರು ಚದರ ಕಿಲೋಮೀಟರ್‌ಗಳಷ್ಟು ಭೂಮಿಗಳ ಆಕ್ರಮಣ ನಡೆದಿದೆ. ಚಾಂಗ್ಪಾ ಅಲೆಮಾರಿ ಬುಡಕಟ್ಟು ಜನಾಂಗದವರ ದುಃಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಲಡಾಖ್‌ ಜನರ ಬೇಡಿಕೆಯೇನು?

ಲಡಾಖ್‌ಗೆ ರಾಜ್ಯ ಸ್ಥಾನಮಾನ, ಲಡಾಖ್‌ನ್ನು ಆರನೇ ಶೆಡ್ಯೂಲ್‌ಗೆ ಸೇರಿಸುವುದು, ಲಡಾಖ್‌ನ ಸ್ಥಳೀಯರಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಸಂಸದೀಯ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಲಾಗಿದೆ.

ಗಡಿ ಜಾಥಾ ರದ್ದುಗೊಳಿಸಿದ ವಾಂಗ್ಚುಕ್‌

ಲಡಾಖ್‌ನಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಚೀನಾದಿಂದ ಭಾರತದ ಭೂಭಾಗಗಳ ಆಕ್ರಮಣಗಳು ಮತ್ತು ಭಾರತೀಯ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಲಡಾಖ್‌ನ ಸಾವಿರಾರು ಎಕರೆ ಪಶುಪಾಲನಾ ಹುಲ್ಲುಗಾವಲು ಭೂಮಿಯನ್ನು  ನೀಡಿರುವುದನ್ನು, ಅಲ್ಲಿನ ಬುಡಕಟ್ಟು ಜನರಿಂದ ಭೂಮಿಯನ್ನು ಕಿತ್ತುಕೊಂಡಿರುವುದನ್ನು ಖಂಡಿಸಿ ವಾಂಗ್‌ಚುಕ್ ಏಪ್ರಿಲ್ 7ರಂದು ಚೀನಾ ಗಡಿಯಲ್ಲಿರುವ ಚಾಂಗ್‌ಥಾಂಗ್ ಪ್ರದೇಶಕ್ಕೆ ಮೆರವಣಿಗೆಯನ್ನು ಘೋಷಿಸಿದ್ದರು. ವಾಂಗ್ಚುಕ್‌ಗೆ ಅಪೆಕ್ಸ್ ಬಾಡಿ, ಲೇಹ್ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಸಂಘಟನೆಗಳು ಬೆಂಬಲವನ್ನು ಘೋಷಿಸಿದ್ದವು.

ಲಡಾಖ್ ಆಡಳಿತವು ಕಲಂ 144ರಡಿ ನಿಷೇಧಾಜ್ಞೆಯನ್ನು ಹೇರುವ ಮೂಲಕ ಜಾಥಾಕ್ಕೆ ಅನುಮತಿಯನ್ನು ನಿರಾಕರಿಸಿದ ಮತ್ತು ಪ್ರದೇಶದಲ್ಲಿ ಇಂಟರ್ ನೆಟ್‌ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಲಡಾಖ್ ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ ಚುಕ್ ಅವರು ರವಿವಾರ ನಡೆಸಲು ಉದ್ದೇಶಿಸಿದ್ದ ತನ್ನ ಗಡಿ ಜಾಥಾವನ್ನು ರದ್ದುಗೊಳಿಸಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಅದರ ಸೇರ್ಪಡೆಗಾಗಿ ಹೋರಾಡುತ್ತಿರುವ ವಾಂಗ್ಚುಕ್, ಸರಕಾರದ ‘ಅತಿರೇಕದ ಕ್ರಮಗಳು’ ಘರ್ಷಣೆಗಳು ಮತ್ತು ದಂಗೆಗಳಿಗೆ ಕಾರಣವಾಗಬಹುದು. ಈ ಶಾಂತಿಯುತ ಪ್ರತಿಭಟನೆಯನ್ನು ಬುಡಮೇಲುಗೊಳಿಸಲು ಪ್ರಯತ್ನಗಳು ನಡೆಯಬಹುದು ಮತ್ತು ಬಳಿಕ ಹಿಂಸಾಚಾರಕ್ಕಾಗಿ ಪ್ರತಿಭಟನೆಯನ್ನು ದೂಷಿಸಬಹುದು ಹಾಗೂ ಲಡಾಖ್ ನಲ್ಲಿ ಶಾಂತಿಯುತ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಲು ಅದನ್ನು ನೆಪವಾಗಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...