Homeಮುಖಪುಟಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

ಸರ್ಕಾರದ ಕ್ರೌರ್ಯವನ್ನು ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾನನ್ನು ಬಂಧಿಸಬೇಕು. ಸಚಿವ ಸ್ಥಾನದಿಂದ ಅಜಯ್‌‌ ಮಿಶ್ರಾರನ್ನು ಕಿತ್ತೊಗೆಯಬೇಕು ಎಂದು ಆಗ್ರಹಸಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ರವರು ಸ್ವಲ್ಪವು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ಇವರಿಬ್ಬರೂ ಬಂಡವಾಳಶಾಹಿಗಳ ಬೂಟು ನೆಕ್ಕುತ್ತಿದ್ದಾರೆ. ಹಾಗಾಗಿಯೇ ಪ್ರತಿನಿತ್ಯ ರೈತರ ಕೊಲೆಯಾಗುತ್ತಿದೆ” ಎಂದು ಕಿಡಿಕಾರಿದರು.

ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮಕ್ಕೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಈ ಘಟನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಉತ್ತರಪ್ರದೇಶ ಸರ್ಕಾರದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕವು ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಮನವಿಯನ್ನೂ ಕಳಿಸಿದೆ.

ಘಟನೆಯಲ್ಲಿ ನಾಲ್ವರು ರೈತರು ಹತ್ಯೆಯಾಗಿದ್ದಾರೆ. ಇನ್ನೂ ಹಲವು ರೈತ ನಾಯಕರು ಮತ್ತು ಪ್ರತಿಭಟನಾ ನಿರತ ರೈತರು ಗಂಭೀರ ಸ್ವರೂಪದಲ್ಲಿ ಘಾಯಗೊಳಿಸಿರುವ ಹೀನಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಪ್ರತಿಭಟನಾಕಾರರು ಅಗ್ರಹಿಸಿದ್ಧಾರೆ.

ಇತ್ತೀಚೆಗೆ, ಸಚಿವ ಸಚಿವ ಅಜಯ್ ಮಿಶ್ರಾ ತೆನಿ ಅವರು ರೈತರ ಪ್ರತಿಭಟನೆಯ ಕುರಿತು ಬಹಿರಂಗ ಬೆದರಿಕೆ ಹಾಕಿದ್ದರು. ಅವರ ಬೆದರಿಕೆಯನ್ನು ಖಂಚಿಸಿ, ಅವರು ಪ್ರತಿನಿಧಿಸುವ ಕ್ಷೇತ್ರವಾದ ಲಖೀಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಚಿವರ ಬೆಂಗಾವಲು ಪಡೆಯ ವಾಹನ ಹರಿಸುವ ಮೂಲಕ ತಮ್ಮ ಬೆದರಿಕೆಯನ್ನು ಸಚಿವ ಸತ್ಯಗೊಳಿಸಿದ್ದಾರೆ. ಈ ಕೃತ್ಯ ಭಾರತದ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆಯ ಹಕ್ಕಿನ ತೀವ್ರ ಉಲ್ಲಂಘನೆಯೂ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ಧಾರೆ.

ಈ ಘಟನೆ ನಡೆದ ನಂತರವೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಹತ್ಯೆಯಾದ, ಗಾಯಗೊಂಡ ರೈತರನ್ನು ಅಥವಾ ಅವರ ಕುಟುಂಬಗಳನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲೀ ನೀಡಿಲ್ಲ. ಇದು ಹಾಡುಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಇಂತಹ ಗಂಭೀರ ಪ್ರಕರಣದ ಸಂದರ್ಭದಲ್ಲಿ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಬೇಕು.  ಉತ್ತರ ಪ್ರದೇಶದ ಸರ್ಕಾರ ಮತ್ತು ಹಿಂಸೆಗೆ ಕಾರಣರಾದ ಸಚಿವರ ಮೇಲೆ ಕೂಡಲೇ ಕ್ರಮಕೂಗೊಳ್ಳುವ ಭರವಸೆ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ರೈತ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಿಪಿಎಂ ಸಂಘಟನೆಯ ವರಲಕ್ಷ್ಮಿ, ವಿಮಲ ಮುಂತಾದವರು ಭಾಗವಹಿಸಿದ್ದರು.

ವಿಡಿಯೋ ನೋಡಿ


ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...