Homeಕರ್ನಾಟಕನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ಬೀರುವಿನಲ್ಲಿ ಸಿಕ್ಕ ವೋಟರ್ ಐಡಿ ಮತ್ತು 2015ರಲ್ಲಿ ಕಾಲುವೆಯಲ್ಲಿ ಸಿಕ್ಕಿದ್ದ ಅಪರಿಚಿತ ಶವ ಮರ್ಯಾದೆಗೇಡು ಹತ್ಯೆಯಾಗಿರುವುದನ್ನು ದೃಢಪಡಿಸುತ್ತವೆ.

- Advertisement -
- Advertisement -

ಮಂಡ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳು, ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿವೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವಿಚಿತ್ರ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮೇಘನ ಎಂಬ ಹುಡುಗಿಯ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿ, ದೂರು ನೀಡಿದ್ದಾರೆ. ಆದರೆ ಪೊಲೀಸರು ಈ ವಿಷಯದಲ್ಲಿ ಸೂಕ್ತ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದಿವೆ.

ಘಟನೆಯ ಹಿನ್ನೆಲೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೇಘನಾ ಎಂಬ ಹುಡುಗಿಯ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ಎಂಇಟಿ ಕಾಲೇಜಿನಲ್ಲಿ 2014-15 ರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತರ ಮೂಲಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸವರ್ಣಿಯ ಸಮುದಾಯಕ್ಕೆ ಸೇರಿದ ಟಿ.ಕೆ ಸ್ವಾಮಿ ಎಂಬುವವರ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ತದನಂತರ ಅವರಿಬ್ಬರೂ ಮದುವೆಯಾಗಿರುವುದಾಗಿಯೂ, ಆ ಮನೆಯವರಿಗೆ ತನ್ನ ಜಾತಿ ಗೊತ್ತಿರಲಿಲ್ಲ. ಈಗ ಗೊತ್ತಾಗಿ ತನಗೆ ತೊಂದರೆ ಕೊಡುತ್ತಿದ್ದಾರೆ. ಆದರೆ ತಾನು ಮನೆಗೆ ಬರುವುದಿಲ್ಲವೆಂದು ಮೇಘನಾ ಆಕೆಯ ತಾಯಿಗೆ ತಿಳಿಸಿ ನಾಪತ್ತೆಯಾಗಿದ್ದಳು. 5 ವರ್ಷದಿಂದ ಯಾವುದೇ ಸಂಪರ್ಕವಿರಲಿಲ್ಲ ಎಂದು ಆಕೆಯ ತಾಯಿ ಹೇಳಿದ್ದರು.

ಆದರೆ ಇತ್ತೀಚೆಗೆ ಅಕ್ಟೋಬರ್ 14 ರಂದು ಮೇಘನಾರವರ ತಾಯಿ ಮನೆ ಸ್ವಚ್ಛಗೊಳಿಸುತ್ತಿರುವಾಗ ಹಳೆಯ ಬೀರುವಿನಲ್ಲಿ ಟಿ.ಕೆ ಸ್ವಾಮಿಯ ವೋಟರ್ ಐಡಿ ಪತ್ತೆಯಾಗಿದೆ. ಅದರ ಆಧಾರದಲ್ಲಿ ತಿರುಮಲಾಪುರಕ್ಕೆ ತೆರಳಿ ವಿಚಾರಿಸಿದರೆ, ನಿಮ್ಮ ಮಗಳನ್ನು ಸ್ವಾಮಿ ಮನೆಯವರು 5 ವರ್ಷಗಳ ಹಿಂದೆಯೇ ಹತ್ಯೆ ಮಾಡಿದ್ದಾರೆ ಸ್ಥಳೀಯರು ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತಗೊಂಡ ತಾಯಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಹಳೆಯ ಅನುಮಾನಾಸ್ಪದ ಸಾವುಗಳು ಮತ್ತು ಪತ್ತೆಯಾಗದ ಶವಗಳ ದಾಖಲೆ ತೆಗೆದು ಪರಿಶೀಲಿಸಿದಾಗ 2015ರಲ್ಲಿ ಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತನ್ನ ಮಗಳು ಎಂದು ಮೇಘನಾ ತಾಯಿಯು ಗುರುತಿಸಿದ್ದಾರೆ. 2015 ರಲ್ಲಿ ಚಿನಕುರಳಿ ಪಕ್ಕದ ಬ್ಯಾಟರಾಯನಪುರ ನಾಲೆಯಲ್ಲಿ ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ. ಅದನ್ನು ಕೊಲೆ ಎಂದು ಪೊಲೀಸರು ಮಹಜರು ಮಾಡಿದ್ದಾರೆ.

ಹುಡುಗಿ ಮತ್ತು ಹುಡುಗ ಅನ್ಯಜಾತಿಗೆ ಸೇರಿದ್ದರಿಂದ ಹುಡುಗನ ಕುಟುಂಬದವರು ಆಕೆಯನ್ನು ಕೊಂದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಮೃತ ಮೇಘನಾಳ ತಾಯಿಯು ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ, ಬದಲಾಗಿ 5 ವರ್ಷ ಏನು ಮಾಡುತ್ತಿದ್ದೀರಿ? ನಿಮ್ಮ ಮಗಳು ಮದುವೆಯಾಗಿರುವುದಕ್ಕೆ ಸಾಕ್ಷಿ ಏನು? ನಾವು ಆರೋಪಿಗಳನ್ನು ಬಂಧಿಸುವುದಿಲ್ಲ, ಏಕೆಂದರೆ ಅವರು ಲಾಕಪ್ ಡೆತ್ ಆದರೆ ಯಾರು ಹೊಣೆ ಎಂದು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡುರವರು ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “ಸಂತ್ರಸ್ತಳ ತಾಯಿ ದೂರು ನೀಡಿ 15 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ. ನೊಂದವರಿಗೆ ರಕ್ಷಣೆ ನೀಡಿ, ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದರೂ ಸಹ ತನಿಖೆ ವಿಳಂಬವಾಗುತ್ತಿದೆ ಎಂದರೆ ಏನರ್ಥ? ಪೊಲೀಸರು ಹಣದ ಆಮಿಷಕ್ಕೆ ಬಲಿಯಾಗಿದ್ದಾರೆಯೆ ಅಥವಾ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂಬ ಅನುಮಾನ ಬರುತ್ತಿದೆ ಎಂದಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಕುತೂಹಲಕ್ಕಾದರೂ ಪೊಲೀಸರು ತನಿಖೆ ನಡೆಸಬೇಕಿತ್ತು. ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಬೇಕಿತ್ತು. ಆದರೆ ಅವರು ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಇಂತಹ ಅಪರಾಧಗಳು ಹೆಚ್ಚಲು ಕಾರಣವಾಗುತ್ತದೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ನವೆಂಬರ್ 06ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ದಸಂಸ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿವೆ.


ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

Also Read: Honour Killing in Karnataka: Man murders daughter for loving a Dalit man

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...