Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...