Homeಮುಖಪುಟರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

- Advertisement -
- Advertisement -

”ಮೋದಿ ಸರ್‌ನೇಮ್” ಹೇಳಿಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಿದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯನ್ನು ಸೂರತ್ ಸೆಷನ್ಸ್ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರಿಂದ ಅವರ ಲೋಕಸಭಾ ಸದಸ್ಯತ್ವದ ಅಮಾನತು ಮುಂದುವರಿಯಲಿದೆ.

2019ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಾಡಿದ ಭಾಷಣಕ್ಕಾಗಿ ಗಾಂಧಿ ಅವರಿಗೆ ಮಾರ್ಚ್ 23 ರಂದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಲಾಗಿದೆ. ಆದರೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದೆ.

ಸೂರತ್ ನ್ಯಾಯಾಲಯವು ದೋಷಾರೋಪಣೆಗೆ ತಡೆಯಾಜ್ಞೆಯನ್ನು ನಿರಾಕರಿಸಿದ್ದರೂ, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಗಾಂಧಿಯವರ ಅರ್ಜಿಯನ್ನು ಮುಂದಿನ ವಿಚಾರಣೆ ನಡೆಸಲಿದೆ ಎಂದು ಪಿಟಿಐ ವರದಿ ಮಾಡಿದೆ.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯಡಿಯಲ್ಲಿ ಗಾಂಧಿಯವರು ಲೋಕಸಭಾ ಸಂಸದರಾಗಿ ಅನರ್ಹಗೊಂಡರು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅನರ್ಹರಾಗುತ್ತಾರೆ.

ಇದನ್ನೂ ಓದಿ: ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ: ರಾಹುಲ್‌ ಗಾಂಧಿ

2019ರ ಲೋಕಸಭೆ ಚುನಾವಣೆಗೂ ಮುನ್ನ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ”ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಆಗಿರಲಿ, ಎಲ್ಲಾ ಕಳ್ಳರು ತಮ್ಮ ಹೆಸರಿನಲ್ಲಿ ಮೋದಿಯನ್ನು ಏಕೆ ಹೊಂದಿದ್ದಾರೆ?” ಎಂದು ಗಾಂಧಿ ಕೇಳಿದ್ದರು ಎಂದು ಹೇಳಲಾಗಿದೆ.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಆರೋಪಿ ಪರಾರಿಯಾಗಿರುವ ಉದ್ಯಮಿಯಾಗಿದ್ದು, ಲಲಿತ್ ಮೋದಿ ಮಾಜಿ ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯಸ್ಥರಾಗಿದ್ದು, ಕ್ರಿಕೆಟ್ ಆಡಳಿತ ಮಂಡಳಿಯಿಂದ ಆಜೀವ ನಿಷೇಧಕ್ಕೊಳಗಾಗಿದೆ.

ರಾಹುಲ್ ಗಾಂಧಿ ಅವರ ಕಾನೂನು ತಂಡವು ಕಾನೂನಿನಡಿಯಲ್ಲಿ ಇನ್ನೂ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಗುರುವಾರ ಹೇಳಿದ್ದಾರೆ.

ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಗುರುವಾರ, ಪೂರ್ಣೇಶ್ ಮೋದಿ ಅವರನ್ನು ಪ್ರತಿನಿಧಿಸುವ ವಕೀಲರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ಪ್ರಕರಣವು ಸಾಧಾರಣ ಪ್ರಕರಣವಲ್ಲ ಎಂದು ಸೆಷನ್ ಕೋರ್ಟ್ ಹೇಳಿದೆ ಎಂದು ಎಎನ್‌ಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...