Homeಮುಖಪುಟಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

ಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ರವರು 2024ರಲ್ಲಿ ಬಿಜೆಪಿ ಮಣಿಸಲು ವಿರೋಧ ಪಕ್ಷಗಳ ಬೃಹತ್ ಸಭೆ ಆಯೋಜಿಸಿದ್ದು ಹಲವು ಪ್ರತಿಪಕ್ಷಗಳ ಮುಖಂಡರನ್ನು ಪಾಟ್ನಾದ ಸಭೆಗೆ ಆಹ್ವಾನಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ನಿತೀಶ್ ಕುಮಾರ್ ಕಳೆದ ವರ್ಷ ಮೈತ್ರಿ ಮುಗಿದುಕೊಂಡು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿ ಸೇರಿ ಸಿಎಂ ಆಗಿದ್ದಾರೆ. ಅಲ್ಲದೇ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದಾರೆ. ಆ ಭಾಗವಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿ ಪಕ್ಷಗಳ ಮುಖಂಡರ ಮಹತ್ವದ ಸಭೆ ಕರೆದಿದ್ದಾರೆ.

”ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸುವ ತಂತ್ರ ರೂಪಿಸಲಷ್ಟೇ ಸಭೆಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಸೀಟುಗಳ ಹಂಚಿಕೆಯಾಗಲೀ ಅಥವಾ ನಾಯಕತ್ವ ವಿಷಯವನ್ನು ಸಭೆಯಲ್ಲಿ ಚರ್ಚಿಸದಿರಲು ನಿರ್ಧರಿಸಲಾಗಿದೆ” ಎಂದು ಮೂಲಗಳು ಹೇಳಿವೆ.

”ಮಣಿಪುರ ಗಲಭೆ ಹಾಗೂ ಇದನ್ನು ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ. ಇಂತಹ ಇನ್ನೂ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಕಟ್ಟಿಹಾಕುವ ಬಗೆ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿವೆ” ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ವ್ಯಕ್ತಿ ತಿಳಿಸಿದ್ದಾರೆ.

ಪಾಟ್ನಾ ಸಭೆ ಕುರಿತು ಬಿಜೆಪಿ ಪ್ರತಿಕ್ರಿಯೆ: ”ತಮ್ಮ ಸ್ಥಾನಮಾನದ ಕುರಿತೇ ವಿರೋಧಪಕ್ಷಗಳಲ್ಲಿ ಪರಸ್ಪರ ಗೊಂದಲಗಳಿವೆ. ಈ ಕೂಟದ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬುದೇ ಇನ್ನೂ ತೀರ್ಮಾನವಾಗಿಲ್ಲ” ಎಂದು ವ್ಯಂಗ್ಯವಾಡಿತ್ತು.

ಬಿಜೆಪಿಗೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ತಿರುಗೇಟು: ”ವಿರೋಧಪಕ್ಷಗಳಿಗೆ ನಾಯಕತ್ವದ ಮುಖ ಅಗತ್ಯವಿಲ್ಲ. ಇದು ಒಗ್ಗಟ್ಟಿನ ಹೋರಾಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಎಲ್ಲರೂ ಚರ್ಚಿಸಿ ನಿರ್ಧರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ಈ ಬಗ್ಗೆ ಸಿಪಿಐ ಮುಖಂಡ ಡಿ. ರಾಜಾ ಮಾತನಾಡಿ, ”ಜಾತ್ಯತೀತ ಪಕ್ಷಗಳು ಒಂದಾಗಿ ಬಿಜೆಪಿಯನ್ನು ಮಣಿಸಬೇಕಿದೆ. ಸ್ಥಾನಗಳನ್ನು ಗೆಲ್ಲುವುದಷ್ಟೇ ಈ ಹೋರಾಟದ ಮುಖ್ಯ ಉದ್ದೇಶವಲ್ಲ. ಪ್ರಜಾಪ್ರಭುತ್ವ, ಸಂವಿಧಾನ, ದೇಶದ ಜಾತ್ಯತೀತ ಸತ್ವ ಮತ್ತು ಸ್ವತಂತ್ರ ಸಂಸತ್ತಿನ ಸಾರ್ವಭೌಮತ್ವವನ್ನು ಕಾಪಾಡುವುದೇ ಮುಖ್ಯ ಉದ್ದೇಶವಾಗಿದೆ” ಎಂದಿದ್ದಾರೆ.

”ಚುನಾವಣೆ ಘೋಷಣೆಯಾದ ನಂತರ ಸೀಟುಗಳ ಹಂಚಿಕೆ ಕುರಿತು ಆಯಾ ರಾಜ್ಯ ಮಟ್ಟದಲ್ಲಿ ಚರ್ಚೆಗಳು ನಡೆಯಲಿವೆ. ಇದನ್ನು ಅಲ್ಲಿನ ಪಕ್ಷಗಳ ಹಿಡಿತವನ್ನು ಪರಿಗಣಿಸಿ ನಿರ್ಧರಿಸಲಾಗುವುದು. ಈ ವಿಷಯದಲ್ಲಿ ಜಾತ್ಯತೀತ ನಿಲುವುಳ್ಳ ಪಕ್ಷಗಳು ಇನ್ನಷ್ಟು ಉದಾರವಾಗಿ ಹಾಗೂ ಪರಸ್ಪರ ಮಾತುಕತೆ ಮೂಲಕ ಹಂಚಿಕೆ ಮಾಡಿಕೊಳ್ಳಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಳಿನ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖಂಡ ಶರದ್ ಪವಾರ್ ಭಾಗವಹಿಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಸಿಪಿಐ ಪಕ್ಷ ಮುಖಂಡ ಡಿ.ರಾಜ, ಸಿಪಿಎ(ಎಂ) ಮುಖಂಡ ಸೀತರಾಂ ಯೆಚೂರಿ, ಸಿಪಿಐ(ಎಂಎಲ್‌)ಲಿಬರೇಷನ್ ಪಕ್ಷದ ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಹಲವರು ಭಾಗವವಹಿಸುವ ನಿರೀಕ್ಷೆ ಇದೆ. ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಪೂರ್ವನಿರ್ಧರಿತ ಕಾರ್ಯಕ್ರಮ ಇರುವುದರಿಂದ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ವಿರೋಧ ಪಕ್ಷಗಳ ಜೊತೆ ತಮ್ಮ ಪಕ್ಷ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆಗಳು ನಡೆಯುವುದಿಲ್ಲ. ಬದಲಿಗೆ ಬಿಜೆಪಿ ಸೋಲಿಸಲು ಇರುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಸಭೆಗೆ ಬಿಎಸ್‌ಪಿ, ಬಿಆರ್‌ಎಸ್‌, ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹಲವು ವಿಪಕ್ಷಗಳು ಭಾಗವಹಿಸುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...