HomeಮುಖಪುಟMatch is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ” ಎಂದಿದ್ದಾರೆ.

“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ 1 ವರ್ಷ ಅಲ್ಲ, ಬದಲಾಗಿ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಉತ್ತರಗಳನ್ನು ನೀಡಬೇಕಾದವರು ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಇದು ‘ಮ್ಯಾಚ್ ಫಿಕ್ಸಿಂಗ್’ ಆಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.

ಫಲಿತಾಂಶ ಪ್ರಕಟಗೊಂಡ 45 ದಿನಗಳ ಒಳಗೆ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸದಿದ್ದರೆ, ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ದೃಶ್ಯಗಳನ್ನು ನಾಶಪಡಿಸುವಂತೆ ಚುನಾವಣಾ ಆಯೋಗವು ತನ್ನ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. “ದುರುದ್ದೇಶಪೂರಿತ ನಿರೂಪಣೆಗಳನ್ನು ರಚಿಸಲು ಚುನಾವಣಾ ಆಯೋಗ ತನ್ನ ಎಲೆಕ್ಟ್ರಾನಿಕ್ ಡೇಟಾವನ್ನು ಬಳಸುವ ಭಯವಿದೆ ಎಂದು ಅವರು ಹೇಳಿದ್ದಾರೆ.

ಮೇ 30ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ಬಹು ರೆಕಾರ್ಡಿಂಗ್ ಸಾಧನಗಳಾದ ಛಾಯಾಗ್ರಹಣ, ವಿಡಿಯೋಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೂಲಕ ದಾಖಲಿಸಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಕಾನೂನುಗಳು ಅಂತಹ ಧ್ವನಿಮುದ್ರಣಗಳನ್ನು ಕಡ್ಡಾಯಗೊಳಿಸದಿದ್ದರೂ, ಆಯೋಗವು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅವುಗಳನ್ನು ಆಂತರಿಕ ನಿರ್ವಹಣಾ ಸಾಧನವಾಗಿ ಬಳಸುತ್ತದೆ.

ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...