Homeಮುಖಪುಟಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನು ಅರ್ಜಿ ವಜಾಗೊಳಿಸಿದ ಮಥುರಾ ಕೋರ್ಟ್

ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನು ಅರ್ಜಿ ವಜಾಗೊಳಿಸಿದ ಮಥುರಾ ಕೋರ್ಟ್

- Advertisement -
- Advertisement -

UAPA ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನು ಅರ್ಜಿಯನ್ನು ಮಥುರಾ ನ್ಯಾಯಾಲಯ ವಜಾಗೊಳಿಸಿದೆ. ಸಿದ್ದಿಕಿ ಕಪ್ಪನ್ ಮತ್ತು ಇತರರು ಕಾನೂನು ಉಲ್ಲಂಘನೆ ಮಾಡಿದ್ದು ಶಾಂತಿ ಕದಡುವ ಪ್ರಯತ್ನ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ನ್ಯಾಯಾಧೀಶ ಅನಿಲ್ ಕುಮಾರ್ ಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ. 2020 ಸೆಪ್ಟೆಂಬರ್‌ನಲ್ಲಿ ಹತ್ರಾಸ್‌ ಗ್ಯಾಂಗ್‌ ರೇಪ್ ವರದಿ ಮಾಡಲು ತೆರಳುತ್ತಿದ್ದ ವೇಳೆ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಸಿದ್ದಿಕಿ ಕಪ್ಪನ್ ವಿರುದ್ಧ ದಾಖಲಿಸಿದ್ದ ಜಾಮೀನು ನೀಡಬಹುದಾದ ಪ್ರಕರಣಗಳನ್ನು ಮಥುರಾ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿತ್ತು. ತಮ್ಮ ವಿರುದ್ಧದ ಪ್ರಕರಣಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ತಮಗೆ ಜಾಮೀನು ನೀಡಬೇಕೆಂದು ಅವರು   ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.

FIR ನಲ್ಲಿ ಹೇಳಲಾಗಿರುವ ಆರೋಪಗಳು ಸುಳ್ಳಾಗಿದ್ದು ಘಟನೆಯನ್ನು ತಿರುಚಲಾಗಿದೆ. ಕೇವಲ ಮಾಧ್ಯಮಗಳ ವರದಿಯ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಾಧ್ಯಮಗಳಲ್ಲಿ ಹೇಳಲಾದ ಅಂಶಗಳನ್ನು ಹೊರತುಪಡಿಸಿ FIR ನಲ್ಲಿ ಇನ್ನೇನೂ ಇಲ್ಲ ಎಂದು ಸಿದ್ದಿಕಿ ಕಪ್ಪನ್ ಪರ ನ್ಯಾಯವಾದಿಗಳು ಕೋರ್ಟ್‌ನಲ್ಲಿ ವಾದಿಸಿದ್ದರು.

ಇದನ್ನೂ ಓದಿ: ಯುಎಪಿಎ ಕಾಯ್ದೆಯಡಿ ಬಂಧಿತ ಪತ್ರಕರ್ತ ಸಿದ್ದಿಕಿ ಕಪ್ಪನ್ ತಾಯಿ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...