Homeದಲಿತ್ ಫೈಲ್ಸ್ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್...

ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ

- Advertisement -
- Advertisement -

ಮಥುರಾದ ಕರ್ನವಾಲ್‌ನಲ್ಲಿರುವ ದಲಿತ ಕುಟುಂಬದ ಇಬ್ಬರು ಸಹೋದರಿಯರು ಶುಕ್ರವಾರ ಮತ್ತೊಮ್ಮೆ ತಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾದರು. ಪ್ರಬಲ ಜಾತಿಗೆ ಸೇರಿದ ಕನಿಷ್ಠ 15 ಜನರು ರಸ್ತೆ ಅಪಘಾತದಲ್ಲಿ ಉಂಟಾದ ಜಗಳದಲ್ಲಿ ದಲಿತ ಸಹೋದರಿಯರು ಮತ್ತು ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ, ಪಾರ್ಲರ್‌ನಿಂದ ಬರುತ್ತಿದ್ದ ನವ ವದುಗಳ ಮೇಲೆ ಕೆಸರು ಎರಚಿ ವಿಕೃತಿ ಮೆರೆದಿದ್ದರು. ದಾಳಿಯಿಂದ ಹೆದರಿದ್ದ ವರನ ಕಡೆಯವರು ಮದುವೆ ರದ್ದುಗೊಳಿಸಿದ್ದರು.

ಫೆಬ್ರವರಿ 21 ಕ್ಕೆ ಹೋಲಿಸಿದರೆ ಮದುವೆ ಸಿದ್ಧತೆಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಗೈರುಹಾಜರಾಗಿದ್ದ ಪೊಲೀಸ್ ಸಿಬ್ಬಂದಿ ನಿನ್ನೆ ನಡೆದ ‘ಬರಾತ್’ಗೆ ಪೂರ್ಣ ಬೆಂಗಾವಲು ನೀಡಿದರು. ಸಮಾಜ ಕಲ್ಯಾಣ ಸಚಿವ (ಸ್ವತಂತ್ರ ಉಸ್ತುವಾರಿ) ಅಸಿಮ್ ಅರುಣ್ ಅವರು ಕೂಡ ಸಹೋದರಿಯರ ವಿವಾಹದಲ್ಲಿ ಭಾಗವಹಿಸಿದ್ದರು.

ಕಳೆದ ಗುರುವಾರ, ರಾಜ್ಯಸಭಾ ಸದಸ್ಯ ಮತ್ತು ಸಮಾಜವಾದಿ ಪಕ್ಷದ ನಾಯಕ ರಾಮ್‌ಜಿಲಾಲ್ ಸುಮನ್ ನೇತೃತ್ವದ ನಿಯೋಗವು ಕುಟುಂಬಕ್ಕೆ ₹2 ಲಕ್ಷದ ಚೆಕ್ ನೀಡಲು ಕರ್ನವಾಲ್‌ನಲ್ಲಿತ್ತು. ಕಾಂಗ್ರೆಸ್ ಮತ್ತು ಆಜಾದ್ ಸಮಾಜ ಪಕ್ಷದ ನಾಯಕರು ಸಹ ದಲಿತ ಸಹೋದರಿಯರ ಮದುವೆಗೆ ತಮ್ಮ ಕೊಡುಗೆಗಳನ್ನು ನೀಡಿದರು.

“ಫೆಬ್ರವರಿ 21 ರಂದು, ಈ ಘಟನೆಯಿಂದಾಗಿ ಪದಮ್ ಸಿಂಗ್ ಅವರ ಹೆಣ್ಣುಮಕ್ಕಳ ವಿವಾಹಗಳನ್ನು ರದ್ದುಗೊಳಿಸಲಾಯಿತು ಎಂಬುದು ದುರದೃಷ್ಟಕರ. ಬಜೆಟ್ ಅಧಿವೇಶನ ನಡೆಯುತ್ತಿರುವಾಗ, 15 ಆರೋಪಿಗಳನ್ನು ಬಂಧಿಸುವಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ನನ್ನನ್ನು ಇಲ್ಲಿಗೆ ಕಳುಹಿಸಿದರು. ನಾನು ಮದುವೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದೆ, ಇಂದು ಇಲ್ಲಿದ್ದೇನೆ” ಎಂದು ಸಚಿವ ಅರುಣ್ ಹೇಳಿದರು.

ಶನಿವಾರ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಿವಾಹ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಎಸ್‌ಪಿ (ನಗರ) ಅರವಿಂದ್ ಕುಮಾರ್ ಕೂಡ ಗ್ರಾಮದಲ್ಲಿದ್ದರು.

ಘಟನೆ ಹಿನ್ನೆಲೆ:

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಈ ಘಟನೆಯಲ್ಲಿ ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿದ್ದು, ಹಲವಾರು ಅತಿಥಿಗಳಿಗೆ ಗಾಯಗೊಂಡಿದ್ದರು.

ಬ್ಯೂಟಿ ಪಾರ್ಲರ್‌ನಿಂದ ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಮೋಟಾರ್‌ಸೈಕಲ್‌ನಲ್ಲಿದ್ದ ಕರ್ಣವಾಲ್ ಗ್ರಾಮದ ನಿವಾಸಿಗಳಾದ ಲೋಕೇಶ್, ರೋಹ್ತಾಶ್ ಮತ್ತು ಸತೀಶ್ ಕಾರಿನ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿದರು. ಮೂವರು ಪುರುಷರು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಕೆಸರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ.

ವಧುವಿನ ಕುಟುಂಬ ಸದಸ್ಯರಿಗೆ ದಾಳಿಯ ಬಗ್ಗೆ ತಿಳಿದಾಗ, ಅವರು ಸ್ಥಳಕ್ಕೆ ಧಾವಿಸಿದರು. ಶಂಕಿತ ದಾಳಿಕೋರರು ಸಹ ಪ್ರತಿಯಾಗಿ ತಮ್ಮ ಸಂಬಂಧಿಕರನ್ನು ಕರೆದರು. ನಂತರ ನಡೆದ ಘರ್ಷಣೆಯಲ್ಲಿ, ವಧುವಿನ ತಂದೆ ಸೇರಿದಂತೆ ಹಲವಾರು ಜನರು ಗಾಯಗೊಂಡರು, ಅವರ ತಲೆಗೆ ಗಾಯವಾಗಿತ್ತು.

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...