ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಶಾಹಿ ಮಸೀದಿಯು ಮಥುರಾದ ದೇವಾಲಯದ ಪಕ್ಕವೆ ಇರುವುದರಿಂದ ಬಿಜೆಪಿ ಬೆಂಬಲಿಗರ ಕುಮ್ಮಕ್ಕಿನಿಂದ ಮಸೀದಿಯು ಈ ಹಿಂದೆ ದೇವಸ್ಥಾನವಿದ್ದ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮಥುರಾ ಶಾಹಿ ಮಸೀದಿ
ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತಿರುವ ಸಮೀಕ್ಷೆಯ ವಿರುದ್ಧ ಟ್ರಸ್ಟ್ ಶಾಹಿ ಮಸೀದಿ ಈದ್ಗಾದ ನಿರ್ವಹಣಾ ಸಮಿತಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರ ನಂತರರ ವಾರದಲ್ಲಿ ಮುಂದೂಡುವುದಾಗಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ. ಮಥುರಾ ಶಾಹಿ ಮಸೀದಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಹಾಗಾಗಿ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆದ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಮಧ್ಯಂತರ ಆದೇಶವು ಮುಂದುವರಿಯಲಿದೆ ಎಂದು ಪೀಠ ಹೇಳಿದೆ. ಕಳೆದ ವರ್ಷ ಜನವರಿ 16 ರಂದು ಡಿಸೆಂಬರ್ 14, 2023 ರಂದು ಹೈಕೋರ್ಟ್ ನೀಡಿದ್ದ ಆದೇಶದ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಸುಪ್ರೀಂ ಕೋರ್ಟ್‌ನಲ್ಲಿ ಈಗ ಮೂರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲವೂ ನ್ಯಾಯಾಲಯದೊಳಗಿನ ಮೇಲ್ಮನವಿಯ ಪ್ರಕರಣಗಳಾಗಿವೆ. ಮತ್ತೊಂದು, ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ, 1991 ರ ಪ್ರಕರಣವಾಗಿದೆ ಎಂದು ಸಿಜೆಐ ಹೇಳಿದ್ದು, ಅವುಗಳನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುವ ವಾರದಲ್ಲಿ ಪಟ್ಟಿ ಮಾಡುವುದಾಗಿ ಹೇಳಿದೆ.
ಅದಕ್ಕೂ ಹಿಂದೆ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿತ್ತು ಮತ್ತು ಅದರ ಮೇಲ್ವಿಚಾರಣೆಗೆ ನ್ಯಾಯಾಲಯ ಆಯುಕ್ತರ ನೇಮಕಕ್ಕೆ ಒಪ್ಪಿಕೊಂಡಿತ್ತು. ಬಿಜೆಪಿ ಪರ ಅರ್ಜಿದಾರರು, ಮಸೀದಿಯ ಆವರಣದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು ಎಂದು ವಾದಿಸಿ ಈ ಪ್ರಕರಣ ದಾಖಲಿಸಿದ್ದರು. ಇದನ್ನು ವಿರೋಧಿಸಿ ಮುಸ್ಲಿಮರು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬಿಜೆಪಿ ಪರ ಅರ್ಜಿದಾರರು, ಮಥುರಾದಲ್ಲಿ, ಶಾಹಿ ಈದ್ಗಾ ಮಸೀದಿಯನ್ನು ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಭೂಮಿಯ ಒಂದು ಭಾಗದಲ್ಲಿ ನಿರ್ಮಿಸಲಾಗಿದ್ದು, ಅದನ್ನು ಸ್ಥಳಾಂತರಿಸುವಂತೆ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗ (III) ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು.
1991 ರ ಪೂಜಾ ಸ್ಥಳಗಳ ಕಾಯ್ದೆಯು ದೇಶದ ಸ್ವಾತಂತ್ರ್ಯದ ದಿನದಂದು ಅಸ್ತಿತ್ವದಲ್ಲಿದ್ದ ಯಾವುದೇ ದೇವಾಲಯದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವುದನ್ನು ನಿಷೇಧಿಸುತ್ತದೆ. ಅದಾಗ್ಯೂ, ಈ ಕಾಯ್ದೆಯು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವನ್ನು ಮಾತ್ರ ಅದರ ವ್ಯಾಪ್ತಿಯಿಂದ ವಿನಾಯಿತಿ ನೀಡಿತ್ತು.
ಇದನ್ನೂಓದಿ: ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ
ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ


