Homeಮುಖಪುಟಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಅಮಾನತುಗೊಳಿಸಿದೆ.

ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ಯಾವುದೇ ಸಮೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ‘ಹೈಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ಆದರೆ, ಕಮಿಷನರ್ ನೇಮಕಕ್ಕೆ ಮಧ್ಯಂತರ ತಡೆ ನೀಡಲಾಗುವುದು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಕಳೆದ ತಿಂಗಳು ನೀಡಿದ್ದ ಅನುಮತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಇದೀಗ ತಡೆ ನೀಡಿದೆ.

ಈದ್ಗಾ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟಿನಲ್ಲಿ ಹತ್ತಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆ ಪ್ರದೇಶದಲ್ಲಿ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ ಎಂದು ಕೆಲವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ; ಯುಎಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಬಿದ್ದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...