Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...