Homeಕರ್ನಾಟಕಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಹೋರಾಟಕ್ಕೆ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ 'ಸಂಯುಕ್ತ ಹೋರಾಟ - ಕರ್ನಾಟಕ' ಬೆಂಬಲ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮೇ 20ರಂದು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಬಲ ನೀಡಲಿದ್ದು, ರಾಜ್ಯದ ಗ್ರಾಮೀಣ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕರು, ರೈತರು ತಮ್ಮ ಕೆಲಸಗಳನ್ನು ನಿಲ್ಲಿಸಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ದ ಸಂಯೋಜಕ ಟಿ. ಯಶವಂತ ಅವರು ಹೇಳಿದರು. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮೇ 20 ಸಾರ್ವತ್ರಿಕ ಮುಷ್ಕರ

‘ಸಂಯುಕ್ತ ಹೋರಾಟ ಕರ್ನಾಟಕ’ ಎಂಬುದು ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಮೇ 20ರಂದು ದೇಶದಾದ್ಯಂತ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಭಾಗವಹಿಸಲಿದ್ದೇವೆ ಎಂದು ಅವರು ತಿಳಿಸಿದರು.

ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “2020ರ ಈಚೆಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂದುವರಿದ ಹೋರಾಟ ನಡೆಯುತ್ತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜೆಸಿಟಿಯು ಸಾರ್ವತ್ರಿಕ ಮುಷ್ಕರಕ್ಕೆ ಜಂಟಿಯಾಗಿ ತೀರ್ಮಾನಿಸಿವೆ. ರೈತರು ನಡೆಸಿದ್ದ ಒಂದು ವರ್ಷಗಳ ಕಾಲದ ಹೋರಾಟದ ವೇಳೆ, ಕೇಂದ್ರ ಸರ್ಕಾರ ರೈತರಿಗೆ ನೀಡಿದ ಮಾತನ್ನು ಇನ್ನೂ ಈಡೇಡಿಸಿಲ್ಲ. ನಮ್ಮ ಈ ಹೋರಾಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನಡೆಯುತ್ತಿದೆ” ಎಂದರು.

“ಬಿಜೆಪಿ ತಂದ ಕಾನೂನನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಚಾಚು ತಪ್ಪದೆ ಜಾರಿ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ವಿದ್ಯುತ್ ನೀತಿಯನ್ನು ವಿರೋಧ ಮಾಡಿದ್ದ ಕಾಂಗ್ರೆಸ್ ಈಗ ಅದನ್ನು ಜಾರಿ ಮಾಡುತ್ತಿದೆ. ಭೂ ಮಸೂದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರೂ ಅದನ್ನು ಇನ್ನೂ ಮಾಡಿಲ್ಲ. ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ನಿಷೇಧ ಮತ್ತು ತಿದ್ದುಪಡಿ ಕಾಯ್ದೆಯಿಂದ ರೈತರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಸ್ವಾಮಿನಾಥನ್ ವರದಿ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಆದರೆ ಇಲ್ಲಿನ ಸರ್ಕಾರ ಅದರ ಬಗ್ಗೆ ಮಾತನಾಡುತ್ತಲೆ ಇಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಬದಲಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರಬಹುದು, ಆದರೆ ನೀತಿಗಳು ಹಾಗೆ ಇವೆ. ಮೇ 20ರಂದು ನಡೆಯಲಿರುವ ಮುಷ್ಕರದಲ್ಲಿ ರಾಜ್ಯದ ಎಲ್ಲಾ ಕಡೆ ಲಕ್ಷಾಂತರ ಜನರು ಬೀದಿಗೆ ಇಳಿಯುತ್ತಾರೆ. ಬಂಧನಕ್ಕೆ ಒಳಗಾಗುತ್ತಾರೆ. ಜೈಲ್ ಭರೋ ನಡೆಯುತ್ತದೆ. ಕೇಂದ್ರ ಮತ್ತು ಸರ್ಕಾರ ಈಗಾದರೂ ಕಾನೂನನ್ನು ವಾಪಾಸು ತೆಗೆದುಕೊಂಡರೆ ನಾವು ಹೋರಾಟದ ಬಗ್ಗೆ ಮರುಪರಿಶೀಲನೆ ಮಾಡುತ್ತೇವೆ.” ಎಂದು ಅವರು ಹೇಳಿದರು.

ಕಾರ್ಮಿಕ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, “ಸಂಪತ್ತು ಸೃಷ್ಟಿಸುವ ರೈತ ಮತ್ತು ಕಾರ್ಮಿಕರಿಗಾಗಿ ಇದ್ದ ಕಾನೂನುಗಳನ್ನು ವ್ಯಾಪಾರವನ್ನು ಸುಲಭ ಮಾಡಲು ಬೇಕಾಗಿ ಸರ್ಕಾರ ಬದಲಾವಣೆ ಮಾಡುತ್ತಿವೆ. ಅದರ ಬದಲಾಗಿ ನಾಲ್ಕು ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ಜಾರಿ ಮಾಡುತ್ತಿದೆ. ಈ ಬದಲಾವಣೆಯಿಂದ 80% ಕಾರ್ಮಿಕರು ಯಾವುದೇ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಬರುವುದಿಲ್ಲ. ಸಂಘ ಕಟ್ಟುವ ಹಕ್ಕು, ಸಾಮೂಹಿಕ ಚೌಕಾಶಿಯ, ಮುಷ್ಕರದ ಹಕ್ಕನ್ನು ಈ ಕೋಡ್‌ಗಳ ಕಿತ್ತುಕೊಳ್ಳುತ್ತವೆ” ಎಂದು ಹೇಳಿದರು.

“ಈ ಕಾನೂನಿನ ಪ್ರಕಾರ ಮುಷ್ಕರಕ್ಕೆ 60 ದಿನಗಳ ಮುಂಚೆ ನೋಟಿಸ್ ನೀಡಬೇಕು. ಈ ಹಿಂದೆ 14 ದಿನಗಳ ಮುಂಚೆ ನೋಟಿಸ್ ನೀಡಿದರೆ ಹೇಳಿದರೆ ಸಾಕಿತ್ತು. ಈ ವೇಳೆ ಮುಷ್ಕರಕ್ಕೆ ಹೋಗುವ ಕಾರ್ಮಿಕರಿಗೆ ಸೆರೆಮನೆ ವಾಸ ಶಿಕ್ಷೆ, ದಂಡ ಹಾಕಿ ಹಕ್ಕು ಕೇಳುವ ಕಾರ್ಮಿಕರನ್ನು ಬೆದರಿಸಲಾಗುತ್ತದೆ. 70% ಕಾರ್ಮಿಕರು ಈಗ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಇಎಸ್ಐ ಮತ್ತು ಪಿಎಫ್ಐ ಐಚ್ಛಿಕವಾಗಿ ಮಾಡಲಾಗಿದೆ. ಕಟ್ಟಡ ಕಾರ್ಮಿಕರ ಸೆಸ್‌ಗಳನ್ನು ರದ್ದು ಮಾಡಲಾಗಿದೆ. ಈ ಕಾನೂನಿನ ಮೂಲಕ ಕಾರ್ಮಿಕರ ಎಲ್ಲಾ ಸವಲತ್ತುಗಳನ್ನು ಕಿತ್ತುಕೊಂಡಿದ್ದಾರೆ.” ಎಂದು ಅವರು ಹೇಳಿದರು.

“ಹೊಸ ಕಾರ್ಮಿಕ ಕೋಡ್‌ನಲ್ಲಿ ಕೆಲಸದ ಅವಧಿಯನ್ನು 8ರಿಂದ 12ಕ್ಕೆ ಹೆಚ್ಚಿಸುತ್ತಿದ್ದಾರೆ. ಅದಾಗ್ಯೂ ಓವರ್‌ ಟೈಮ್ ಕೆಲಸಕ್ಕೆ ಹೆಚ್ಚುವರಿ ವೇತನ ಕೊಡುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಲೇಬರ್ ಕೋಡ್ ಕಾರ್ಮಿಕರ ಮರಣ ಶಾಸನ. ಇದು ಜಾರಿಗೆ ಬಂದರೆ ರಾಜ-ಮಹಾರಾಜರ ಕಾಲದಲ್ಲಿ ಇದ್ದಂತೆ ಕಾರ್ಮಿಕರು ದಾಸ್ಯಕ್ಕೆ ಒಳಗಾಗುತ್ತಾರೆ” ಎಂದು ಅವರು ಎಚ್ಚರಿಸಿದರು.

“ರಾಜ್ಯದ ಸಿದ್ದರಾಮಯ್ಯ ಸರ್ಕಾರದ ಮೇಲೆ ಕಾರ್ಮಿಕ ಸಂಘಟನೆಗಳಿಗೆ ಹೆಚ್ಚು ತೀರಾ ಬೇಸರವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟ್‌ಗಳ ಪರವಾಗಿದೆ ಎಂಬುವು ಎಲ್ಲರಿಗೂ ತಿಳಿದಿರುವಂತದ್ದೆ. ಅವರಿಂದ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಹೇಳುವುದನ್ನು ಮಾಡುತ್ತಿರುವುದು ನಮಗೆ ತೀರಾ ಬೇಸರದ ವಿಚಾರ. ಅದಾಗ್ಯೂ, ಒಂದು ದಿನದ ಮುಷ್ಕರಕ್ಕೆ ಈ ಹೋರಾಟ ನಿಲ್ಲುವುದಿಲ್ಲ.‌ ಬೆವರು ಸುರಿಸಿ ದುಡಿಯುವ ಜನರ ಕೋಪ ಒಮ್ಮೆ ಸ್ಪೋಟ ಆಯಿತು ಎಂದರೆ ಅದನ್ನು ನಿಮಗೆ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಅವರು ಎಚ್ಚರಿಕೆ ನೀಡಿದರು.

ಕಾರ್ಮಿಕ ಮುಖಂಡ ಕೆ.ವಿ.ಭಟ್ ಮಾತನಾಡಿ, “ಕೇಂದ್ರ ಕಾರ್ಮಿಕ ಜಂಟಿ ಸಮಿತಿ ದೇಶದಲ್ಲಿ ಕಳೆದ 30 ವರ್ಷಗಳಿಂದ ಒಟ್ಟಾಗಿ ಹೋರಾಟ ಮಾಡುತ್ತಲೇ ಬಂದಿದೆ. ಆ ಎಲ್ಲಾ ಹೋರಾಟಗಳ ಮುಂದುವರಿಕೆಯಾಗಿ ಈ ಮುಷ್ಕರ ನಡೆಯುತ್ತಿದೆ. ಕೇಂದ್ರ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಕರಣ ಮಾಡಲು ಮತ್ತು ಅದನ್ನು ಬಿಡಿಗಾಸಿಗೆ ಮಾರಾಟ ಮಾಡಲು ಹೊರಟಿದೆ. ಇದನ್ನು ಕೈ ಬಿಡಬೇಕು ಎಂಬುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ಮೇಲೆ ಬೆಲೆ ಏರಿಕೆ ಮಾಡುತ್ತಿವೆ. ಎರಡು ಸರ್ಕಾರಗಳು ಅದಕ್ಕೆ ಕಡಿವಾಣ ಹಾಕಬೇಕು ಎಂಬುವುದು ನಮ್ಮ ಬೇಡಿಕೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಿಂದ ಕಟ್ಟಿರುವ ವಿದ್ಯುತ್ ವಲಯವನ್ನು ಬಿಡಿಗಾಸಿಗೆ ಖಾಸಗಿಗೆ ವಹಿಸಲಾಗುತ್ತಿದೆ. ಕೇಂದ್ರ ಸರ್ಕಾರ ತನ್ನ ನೀತಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರದೊಂದಿಗೆ ತಿಕ್ಕಾಟ ನಡೆಸುತ್ತಿದೆ. ತನ್ನ ನೀತಿ ಜಾರಿ ಮಾಡಿದರೆ ಮಾತ್ರ ಅನುದಾನ ನೀಡುತ್ತೇವೆ ಎಂದು ಹಿಂಬಾಗಿಲ ಮೂಲಕ ಕಾನೂನು ಜಾರಿಗೆ ತರುವ ಪ್ರಯತ್ನ ನಡೆಸುತ್ತಿದೆ” ಎಂದು ಹೇಳಿದರು.

ಈ ಹಿಂದೆ ಕೇಂದ್ರದ ನೀತಿ, ನಿಲುವುಗಳನ್ನು ವಿರೋಧ ಮಾಡಿಕೊಂಡು ಬಂದ ರಾಜ್ಯ ಸರ್ಕಾರ ಈಗ ವಚನ ಭ್ರಷ್ಟವಾಗಿದೆ. ಈ ಎಲ್ಲಾ ಬೇಡಿಕೆಗಾಗಿ ನಮ್ಮ ಹೋರಾಟ ನಡೆಯುತ್ತಿದ್ದು, ಅದರ ಭಾಗವಾಗಿ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾ ಸಮಾವೇಶ ನಡೆಯುತ್ತಿವೆ ಎಂದು ಅವರು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಉಭಯ ದೇಶಗಳ ರೈತರು ಮತ್ತು ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. “ದೇಶದಲ್ಲಿ ರೈತರ ಭೂಮಿಯನ್ನು, ಕಾರ್ಮಿಕರಿಂದ ಅವರ ಬದುಕುವ ಹಕ್ಕು ಮತ್ತು ಅವರ ಹೋರಾಟದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ದುಡಿವ ಜನರ ಮೇಲೆ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ದಾಳಿ ಮಾಡುತ್ತಿವೆ. ಕೇಂದ್ರ ಸರ್ಕಾರಕ್ಕಿಂತ ನಮಗೆ ನಿರೀಕ್ಷೆಗಳಿದ್ದ ರಾಜ್ಯ ಸರ್ಕಾರದ ಬಗ್ಗೆ ಹೆಚ್ಚು ಭ್ರಮನಿರಸನ ಆಗಿದ್ದೇವೆ” ಎಂದು ಹೇಳಿದರು. ಮೇ 20 ಸಾರ್ವತ್ರಿಕ ಮುಷ್ಕರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...