Homeಕರ್ನಾಟಕಮೇ ತಿಂಗಳಲ್ಲಿ ಬೃಹತ್ ಸಮಾವೇಶಕ್ಕೆ ಯೋಜನೆ ರೂಪಿಸುತ್ತಿರುವ ಜೆಡಿಎಸ್!

ಮೇ ತಿಂಗಳಲ್ಲಿ ಬೃಹತ್ ಸಮಾವೇಶಕ್ಕೆ ಯೋಜನೆ ರೂಪಿಸುತ್ತಿರುವ ಜೆಡಿಎಸ್!

- Advertisement -
- Advertisement -

ಕೇಂದ್ರದ ಆಡಳಿತರೂಢ ಎನ್‌ಡಿಎ ಮೈತ್ರಿಯ ಪಕ್ಷವಾದ ಜೆಡಿಎಸ್‌ ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಈ ಸಮಾವೇಶದಲ್ಲಿ ಪಕ್ಷವು ಯುವ ಜೆಡಿಎಸ್ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮೇ ವೇಳೆಗೆ ಬೃಹತ್

ಈ ಬಗ್ಗೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಮಾಹಿತಿ ನೀಡಿದ್ದು, “ನಾವು ಮೇ ತಿಂಗಳಲ್ಲಿ ಬೃಹತ್ ಸಮಾವೇಶ ನಡೆಸಲು ಯೋಜಿಸುತ್ತಿದ್ದೇವೆ. ಇದು ಹಾಸನದಲ್ಲಿ ಕಾಂಗ್ರೆಸ್ ಆಯೋಜಿಸಿದ ಸಮಾವೇಶದಂತೆಯೇ ಇರುತ್ತದೆ” ಎಂದು ಎಂದು ಶನಿವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ವಿಧಾನಗಳ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೇ ವೇಳೆಗೆ ಬೃಹತ್

“ಸಮಾವೇಶವನ್ನು ಎಲ್ಲಿ ಆಯೋಜಿಸಬೇಕೆಂದು ನಾವು ಇನ್ನೂ ನಿರ್ಧರಿಸಿಲ್ಲ. ಕೆಲವರು ಇದನ್ನು ಮಂಡ್ಯ, ಮೈಸೂರು ಅಥವಾ ತುಮಕೂರಿನಲ್ಲಿ ನಡೆಸಬೇಕೆಂದು ಸೂಚಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಪಕ್ಷವು ಯುವ ಜೆಡಿಎಸ್ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಆಂತರಿಕ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಅದರ ನಂತರ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದ್ದು, ಅದನ್ನು ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು” ಎಂದು ಅವರು ತಿಳಿಸಿದ್ದಾರೆ ಎಂದು ಡಿಎಚ್ ಪತ್ರಿಕೆ ವರದಿ ಮಾಡಿದೆ.

ಇದನ್ನೂಓದಿ:  ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ ದಲಿತ ಯುವಕನಿಗೆ ಮೇಲಧಿಕಾರಿಯಿಂದ ಹಲ್ಲೆ

ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ ದಲಿತ ಯುವಕನಿಗೆ ಮೇಲಧಿಕಾರಿಯಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...