HomeಮುಖಪುಟINDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

INDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ INDIA ಬಣದ ಜೊತೆ ಮೈತ್ರಿ ಮಾಡಿಕೊಳ್ಳುವ ವದಂತಿಗಳನ್ನು ತಳ್ಳಿಹಾಕಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, ತಮ್ಮ ಪಕ್ಷವು ಸ್ವಂತ ಬಲದಿಂದ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ,  ಬಿಎಸ್ಪಿ ಕಾರ್ಯಕರ್ತರು ಇಂತಹ ವದಂತಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಯಾವತಿ, ಮುಂಬರುವ ಲೋಕಸಭೆ ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ಪದೇ ಪದೇ ಘೋಷಿಸುತ್ತಿದ್ದರೂ, ಪ್ರತಿದಿನ ಮೈತ್ರಿ ಬಗ್ಗೆ ವದಂತಿಗಳು ಹರಡುತ್ತಿವೆ. ಬಿಎಸ್‌ಪಿ ಇಲ್ಲದೆ ಕೆಲವು ಪಕ್ಷಗಳು ಚೆನ್ನಾಗಿ ನಡೆಯುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಮಾಜದ ಹಿತಾಸಕ್ತಿ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಬಡವರು, ಶೋಷಿತರು ಮತ್ತು ನಿರ್ಲಕ್ಷ್ಯಕ್ಕೊಳಗಾದವರನ್ನು ಗಮನದಲ್ಲಿಟ್ಟುಕೊಂಡು ತನ್ನ ಜನರ ಬಲದೊಂದಿಗೆ ಲೋಕಸಭೆ ಚುನಾವಣೆಯನ್ನು ಬಿಎಸ್ಪಿಯು ಏಕಾಂಗಿಯಾಗಿ ಎದುರಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

ಬಿಎಸ್‌ಪಿ 2019ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಈ ಮೊದಲು ಬಿಎಸ್ಪಿ INDIA ಬಣದ ಜೊತೆ ಸೇರಿಕೊಂಡರೆ ಎಸ್ಪಿ ಮೈತ್ರಿಯಿಂದ ಹೊರಗುಳಿಯಲಿದೆ ಎಂಬ ಬಗ್ಗೆ ಕೂಡ ಸುದ್ದಿಯಾಗಿತ್ತು.

ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿಕೆ:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಿರುವ ಐಕ್ಯ ಹೋರಾಟಕ್ಕೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸೇರಬೇಕು, ಅವರಿಗೆ ಇಂಡಿಯಾ ಬಣದ ಬಾಗಿಲು ತೆರೆದಿದೆ ಎಂದು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಭಾನುವಾರ ಹೇಳಿದ್ದರು. ಬಿಎಸ್‌ಪಿಯ ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ, ಕಾಂಗ್ರೆಸ್-ಎಸ್‌ಪಿ ಒಕ್ಕೂಟವು ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಇಂಡಿಯಾ ಬ್ಲಾಕ್‌ಗೆ ಸೇರುವ ಕುರಿತು ಮಾತುಕತೆ ನಡೆಸುತ್ತಿದೆ. ಕೆಲವು ಪಕ್ಷಗಳು  ಮೈತ್ರಿ ಕೂಟದ ಜೊತೆ ಸೇರುತ್ತಿದೆ ಮತ್ತು ಕೆಲವು ಸೇರುವ ನಿರೀಕ್ಷೆಗಳಿದೆ. ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಆದರೆ, ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಬಗೆಹರಿಯಲಿದೆ ಎಂದು ಪಾಂಡೆ ಹೇಳಿದ್ದರು.

ಲೋಕಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆ ಬಿಎಸ್ಪಿ INDIA ಮೈತ್ರಿ ಕೂಟ ಅಥವಾ ಎನ್‌ಡಿಎ ಮೈತ್ರಿ ಪಕ್ಷಗಳ ಜೊತೆ ಸೇರಿಕೊಂಡಿಲ್ಲ. ಎರಡೂ ಮೈತ್ರಿ ಪಕ್ಷಗಳಿಂದ ದೂರ ಉಳಿದುಕೊಂಡಿದೆ. ಈ ಮೊದಲು ಬಿಜೆಪಿ ಜೊತೆ ಬಿಎಸ್ಪಿ ಮೈತ್ರಿ ಬಗ್ಗೆ ಊಹಾಪೋಹಗಳು ಕೂಡ ಭುಗಿಲೆದ್ದಿದ್ದವು. ಬಳಿಕ INDIA ಮೈತ್ರಿ ಕೂಟದ ಜೊತೆ ಸೇರುವ ಬಗ್ಗೆಯೂ ಸುದ್ದಿಯಾಗಿತ್ತು. ಇದರ ಬೆನ್ನಲ್ಲಿ ಸ್ಪಷ್ಟನೆ ನೀಡಿದ್ದ ಬಿಎಸ್ಪಿ ವರಿಷ್ಠೆ ಮಾಯಾವತಿ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...