Homeಮುಖಪುಟಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಿದ ಮಾಯಾವತಿ

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಸೋಮವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಬಿಎಸ್‌ಪಿಯ ಎಲ್ಲ ಪ್ರಮುಖ ಹುದ್ದೆಗಳಿಂದ ಅವರನ್ನು ತೆಗೆದುಹಾಕಲಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

“ಅತ್ಯಂತ ಗೌರವಾನ್ವಿತ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ, ಸ್ವಾಭಿಮಾನ ಚಳವಳಿಯ ಹಿತಾಸಕ್ತಿ ಮತ್ತು ಕಾನ್ಶಿರಾಮ್ ಅವರ ಶಿಸ್ತಿನ ಸಂಪ್ರದಾಯವನ್ನು ಅನುಸರಿಸಿ, ಆಕಾಶ್ ಆನಂದ್ ಅವರನ್ನು ಅವರ ಮಾವನಂತೆ ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ಮಾಯಾವತಿ ಎಕ್ಸ್‌ನಲ್ಲಿ ಘೋಷಿಸಿದರು.

ಮಾಯಾವತಿ ಭಾನುವಾರ ಆನಂದ್ ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದುಹಾಕಿದರು. ಅವರ ತಂದೆ ಆನಂದ್ ಕುಮಾರ್ ಮತ್ತು ರಾಜ್ಯಸಭಾ ಸಂಸದ ರಾಮ್‌ಜಿ ಗೌತಮ್ ಅವರನ್ನು ಅವರ ಸ್ಥಾನದಲ್ಲಿ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಿದರು.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೂಡ ತಮ್ಮ ಜೀವಿತಾವಧಿಯಲ್ಲಿ ಉತ್ತರಾಧಿಕಾರಿಯನ್ನು ಹೆಸರಿಸುವುದಿಲ್ಲ ಎಂದು ಹೇಳಿದರು.

ಸೋಮವಾರ ಆಕಾಶ್ ಆನಂದ್ ಅವರು ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ಪ್ರತಿಯೊಂದು ನಿರ್ಧಾರವನ್ನು ಗೌರವಿಸುತ್ತೇನೆ. ಅವರನ್ನು ‘ಪತ್ತರ್ ಕಿ ಲೇಕರ್’ ಅಥವಾ ಕಲ್ಲಿನಲ್ಲಿ ಕೆತ್ತಿದವರಂತೆ ಪರಿಗಣಿಸುತ್ತೇನೆ ಎಂದು ಹೇಳಿದರು.

ಈ ನಿರ್ಧಾರವು ತನ್ನ ಮೇಲೆ ಭಾವನಾತ್ಮಕ ಪರಿಣಾಮ ಬೀರಿದೆ ಎಂದು ಅವರು ಹೇಳಿದರು. ಆದರೆ, ಅದನ್ನು ಸವಾಲಾಗಿ ತೆಗೆದುಕೊಂಡಿದ್ದ, ತನ್ನ ಮುಂದೆ ದೀರ್ಘ ಹೋರಾಟವಿದೆ ಎಂದು ಪ್ರತಿಪಾದಿಸಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆನಂದ್, “ಪಕ್ಷದ ಈ ನಿರ್ಧಾರದಿಂದಾಗಿ ನನ್ನ ರಾಜಕೀಯ ಜೀವನ ಮುಗಿದಿದೆ ಎಂದು ವಿರೋಧ ಪಕ್ಷದ ಕೆಲವರು ಭಾವಿಸುತ್ತಿದ್ದಾರೆ. ಬಹುಜನ ಚಳುವಳಿಯು ವೃತ್ತಿಜೀವನವಲ್ಲ, ಬದಲಾಗಿ ಕೋಟ್ಯಂತರ ದಲಿತರು, ಶೋಷಿತರು, ವಂಚಿತರು ಮತ್ತು ಬಡ ಜನರ ಸ್ವಾಭಿಮಾನಕ್ಕಾಗಿ ಹೋರಾಟವಾಗಿದೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದಾರೆ.

ಮಾಯಾವತಿಯವರ ನಾಯಕತ್ವದಲ್ಲಿ ತ್ಯಾಗ, ನಿಷ್ಠೆ ಮತ್ತು ಸಮರ್ಪಣೆಯ ಅಮೂಲ್ಯ ಪಾಠಗಳನ್ನು ಕಲಿತಿದ್ದೇನೆ, ಈ ತತ್ವಗಳನ್ನು ಕೇವಲ ಒಂದು ಕಲ್ಪನೆಯಾಗಿ ಪರಿಗಣಿಸುವುದಿಲ್ಲ. ಆದರೆ, ಜೀವನ ವಿಧಾನವೆಂದು ಆಕಾಶ್ ಆನಂದ್ ಹೇಳಿದರು.

ಮಾಯಾವತಿ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವು ಬದ್ಧವಾಗಿದೆ ಎಂದು ಅವರು ಒಪ್ಪಿಕೊಂಡರು. ನಾನು ಪ್ರತಿಯೊಂದನ್ನು ಗೌರವಿಸಿ, ಬೆಂಬಲಿಸುತ್ತೇನೆ ಎಂದರು.

“ಇದು ಒಂದು ಕಲ್ಪನೆ, ಚಳುವಳಿ, ಇದನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಲಕ್ಷಾಂತರ ಆಕಾಶ್ ಆನಂದರು ಈ ಜ್ಯೋತಿಯನ್ನು ಉರಿಯುತ್ತಲೇ ಇಡಲು ಮತ್ತು ಅದಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಲು ಯಾವಾಗಲೂ ಸಿದ್ಧರಿದ್ದಾರೆ” ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...