Homeಮುಖಪುಟಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

ಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

ಸಿಬಿಐ, ಇಡಿ, ಐಟಿಯನ್ನು ಬಿಜೆಪಿ ದುರುಪಯೋಗಪಡಿಸಿಕೊಂಡು ಮಾಯಾವತಿಯವರನ್ನು ಬೆದರಿಸುತ್ತಿದೆ. ಹಾಗಾಗಿ ಅವರು ಬಿಜೆಪಿಗೆ ಹೆದರಿ, ಬಲವಂತವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

- Advertisement -
- Advertisement -

ಗೋವಾದಲ್ಲಿ ಬಿಜೆಪಿಯು ಕಾಂಗ್ರೆಸ್‌ನ 15 ಶಾಸಕರಲ್ಲಿ 10 ಮಂದಿಯನ್ನು ಮೂರನೇ ಎರಡರ ಆಧಾರದ ಮೇಲೆ ತನ್ನ ಪಕ್ಷಕ್ಕೆ ವಿಲೀನಗೊಳಿಸಿತು. ಆಂದ್ರಪ್ರದೇಶದಲ್ಲಿ ಟಿಡಿಪಿಯ 4 ರಾಜ್ಯಸಭಾ ಸಂಸದರು ಬಿಜೆಪಿಯೊಂದಿಗೆ ವಿಲೀನಗೊಂಡರು. ರಾಜಸ್ಥಾನದಲ್ಲಿ ಬಿಎಸ್ಪಿಯ 6 ಶಾಸಕರು ಇಡೀ ಪಕ್ಷವನ್ನು ಕಾಂಗ್ರೆಸ್ ಒಳಗೆ ವಿಲೀನಗೊಳಿಸಿದ್ದಾರೆ. ಬಿಜೆಪಿಯ ವಿಲೀನ ಸರಿಯಾಗಿದ್ದಾಗ, ಕಾಂಗ್ರೆಸ್‌ ವಿಲೀನ ಹೇಗೆ ತಪ್ಪಾಗಿದೆ? ನೀವು ಅದನ್ನು ಏನೆಂದು ಕರೆಯುತ್ತೀರಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಪ್ರಶ್ನಿಸಿದ್ದಾರೆ.

ಮಾಯಾವತಿಯವರನ್ನು ಬಿಜೆಪಿ ಮುಂದೆ ಬಿಟ್ಟಿದೆ ಮತ್ತು ಬಿಜೆಪಿಯ ಆಜ್ಞೆಯ ಮೇರೆಗೆ ಅವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿಬಿಐ, ಇಡಿ, ಐಟಿಯನ್ನು ಬಿಜೆಪಿ ದುರುಪಯೋಗಪಡಿಸಿಕೊಂಡು ಮಾಯಾವತಿಯವರನ್ನು ಬೆದರಿಸುತ್ತಿದೆ. ಹಾಗಾಗಿ ಅವರು ಬಿಜೆಪಿಗೆ ಹೆದರಿ, ಬಲವಂತವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಬಿಜೆಪಿಯ ಚಮತ್ಕಾರ ಇಲ್ಲಿ ನಡೆಯಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯಸಭೆಯೊಳಗೆ 4 ಸಂಸದರು ರಾತ್ರೋರಾತ್ರಿ ಬಿಜೆಪಿಗೆ ವಿಲೀನಗೊಂಡರು, ಆ ವಿಲೀನ ಸರಿಯಾಗಿದೆ. ಅದೇ ರೀತಿ 6 ಶಾಸಕರು ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ವಿಲೀನಗೊಂಡರು. ಈ ವಿಲೀನ ತಪ್ಪಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ? ರಾಜ್ಯಸಭೆಯಲ್ಲಿ ವಿಲೀನಗೊಳ್ಳುವುದು ಸರಿ, ವಿಧಾನಸಭೆಯಲ್ಲಿ ವಿಲೀನಗೊಳ್ಳುವುದು ತಪ್ಪೇ ಎಂದು ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಅಧಿವೇಶನ ಘೋಷಿಸಿದ ನಂತರ ಕುದುರೆ ವ್ಯಾಪಾರದ ದರ ಹೆಚ್ಚಾಗಿದೆ: ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...