Homeಕರ್ನಾಟಕರಾಮನವಮಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆಗೆ ನಿಷೇಧ

ರಾಮನವಮಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆಗೆ ನಿಷೇಧ

- Advertisement -
- Advertisement -

ರಾಜ್ಯ ರಾಜಧಾನಿ ಬೆಂಗಳೂರಿಗರಿಗೆ ಮಹತ್ವದ ಆದೇಶವೊಂದನ್ನು ಹೊರಡಿಸಲಾಗಿದೆ. ರಾಮ ನವಮಿಯಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಿ ಆದೇಶವೊಂದನ್ನು ಬಿಬಿಎಂಪಿ ಹೊರಡಿಸಿದೆ.

ಗುರುವಾರ (ಮಾ. 30) ರಾಮನವಮಿ ಹಬ್ಬದ ನಿಮಿತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧ ಮಾಡಲಾಗಿದೆ.

ಈ ಬಗ್ಗೆ ಬಿಬಿಎಂಪಿ ಆಯುಕ್ತರು ಪ್ರಕಟಣೆ ಹೊರಡಿಸಿದ್ದು, ”ರಾಮನವಮಿ ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

ಬಿಬಿಎಂಪಿ ವ್ಯಾಪ್ತಿ- ಗುರುವಾರದಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಇದೇ ರೀತಿ ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಆಯಾ ಜಿಲ್ಲೆಗಳ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಗೆ ನಿಷೇಧ ಹೇರಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...