Homeಮುಖಪುಟಕೇರಳದಲ್ಲಿ ಸದ್ದು ಮಾಡಿದ 'MEC-7' : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

- Advertisement -
- Advertisement -

ಉತ್ತರ ಕೇರಳದಲ್ಲಿ ಹಲವು ಶಾಖೆಗಳನ್ನು ಹೊಂದಿರುವ ದೈಹಿಕ ವ್ಯಾಯಾಮ ಕ್ಲಬ್ ‘MEC-7’ ಪ್ರಸ್ತುತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಕೇರಳದ ಆಡಳಿತಾರೂಢ ಸಿಪಿಐ(ಎಂ)ನ ತಳಿಪರಂಬ ಪ್ರದೇಶ ಸಮಿತಿ ಸಮ್ಮೇಳನದಲ್ಲಿ ಪಕ್ಷದ ಕೋಝಿಕೋಡ್ ಜಿಲ್ಲಾ ಕಾರ್ಯದರ್ಶಿ ಪಿ.ಮೋಹನನ್ ಅವರು MEC-7 ಜಮಾತ್-ಎ-ಇಸ್ಲಾಮಿ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಪರ್ಕ ಹೊಂದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು. ಆ ಬಳಿಕ MEC-7 ಸುತ್ತ ಚರ್ಚೆ ಹೆಚ್ಚಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ (ಎಪಿ ವಿಭಾಗ) ಕೂಡ MEC-7 ವಿರುದ್ದ ಹೇಳಿಕೆ ನೀಡಿದೆ.

“MEC-7 ಹಿಂದೆ ದೇಶ ವಿರೋಧಿ ಶಕ್ತಿಗಳಿವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಆರೋಪಿಸಿದ್ದು, ರಾಜ್ಯ ಸರ್ಕಾರ ಈ ಗುಂಪಿನ ಕುರಿತು ಕೇಂದ್ರ ಸರ್ಕಾರಕ್ಕೆ ಏಕೆ ವರದಿ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ. MEC-7 ಜಮಾತೆ ಇಸ್ಲಾಮಿಯೊಂದಿಗೆ ಸಂಪರ್ಕ ಹೊಂದಿದೆ ಎಂದು ಆರೋಪಿಸಿರುವ ಸಮಸ್ತ (ಎಪಿ ವಿಭಾಗ) ಸುನ್ನಿಗಳು ಅದರಿಂದ ದೂರ ಇರುವಂತೆ ಎಚ್ಚರಿಕೆ ನೀಡಿದೆ. ಇತರ ಗುಂಪುಗಳು ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿವೆ. ಈ ಬೆನ್ನಲ್ಲೇ ಕೇರಳ ಪೊಲೀಸ್ ಇಲಾಖೆಯ ವಿಶೇಷ ವಿಭಾಗ ಈ ಕ್ಲಬ್ ಬಗ್ಗೆ ತನಿಖೆ ಪ್ರಾರಂಭಿಸಿದೆ ಎಂದು ಕೆಲ ವರದಿಗಳು ಹೇಳಿವೆ.

ತಮ್ಮ ವಿರುದ್ದದ ಎಲ್ಲಾ ಆರೋಪಗಳನ್ನು MEC-7 ತಂಡ ಅಲ್ಲಗಳೆದಿದ್ದು, “ದೈಹಿಕ ವ್ಯಾಯಾಮಗಳನ್ನು ಮಾಡಿಸುವ ಮೂಲಕ ಆರೋಗ್ಯ ವೃದ್ದಿಯ ಕೆಲಸ ಮಾಡಿಸುವುದು ಮಾತ್ರ ನಮ್ಮ ಗುರಿ” ಎಂದಿದೆ.

“MEC-7 ಎಲ್ಲರಿಗೂ ಮುಕ್ತ”

MEC-7 ಎಂದು ಕರೆಯಲ್ಪಡುವ ‘ಮಲ್ಟಿ-ಎಕ್ಸರ್ಸೈಸ್ ಕಾಂಬಿನೇಶನ್’ (Multi-Exercise Combination) ಎಂಬ ತಂಡವನ್ನು ಮಾಜಿ ಮಿಲಿಟರಿ ಅಧಿಕಾರಿ ಸಲಾಹುದ್ದೀನ್. ಪಿ 2012ರಲ್ಲಿ ಸ್ಥಾಪಿಸಿದರು. ಇದು ಯೋಗ, ಧ್ಯಾನ ಸೇರಿದಂತೆ ಏಳು ಪ್ರಕಾರದ ವ್ಯಾಯಾಮಗಳನ್ನು ಸುಮಾರು 21-25 ನಿಮಿಷಗಳ ಕಾಲ ಮಾಡುವ ಗುಂಪಾಗಿದೆ. ಆರಂಭದ ಹತ್ತು ವರ್ಷಗಳ ಕಾಲ ಕೊಂಡೊಟ್ಟಿಯಲ್ಲಿ ಒಂದು ಗುಂಪಿಗೆ ಮಾತ್ರ MEC-7 ಸೀಮಿತವಾಗಿತ್ತು. ನಂತರ, ಇದು ಕೇರಳದ ವಿವಿಧ ಭಾಗಗಳಿಗೆ ವಿಸ್ತರಿಸಿತು.

“MEC-7 ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದೆ ಎನ್ನುವುದು ಅದರ ವಿರುದ್ದ ಆರೋಪಗಳು ಕೇಳಿ ಬರಲು ಕಾರಣ. ಆದರೆ, ನಮ್ಮ ತಂಡ ಧರ್ಮ, ಜಾತಿ, ಲಿಂಗ ರಹಿತವಾಗಿ ಆಸಕ್ತಯುಳ್ಳ ಎಲ್ಲರಿಗೂ ಮುಕ್ತವಾಗಿದೆ” ಎಂದು MEC-7 ಕ್ಲಬ್ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಸಿಪಿಐ(ಎಂ), ಆರ್‌ಎಸ್‌ಎಸ್‌ ಸೇರಿದಂತೆ ಎಲ್ಲಾ ಹಿನ್ನೆಲೆಯ ಜನರು ನಮ್ಮ ವ್ಯಾಯಾಮ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ನಾವು ಯಾವುದೇ ರಾಜಕೀಯ ಚರ್ಚೆ ನಡೆಸುವುದಿಲ್ಲ. ನಮ್ಮ ಗುರಿ ಕೇವಲ ಆರೋಗ್ಯದ ವಿಚಾರ ಮಾತ್ರ” ಎಂದು ಕೋಝಿಕ್ಕೋಡ್‌ನ ಸ್ಥಳೀಯ ನಿವಾಸಿ ಎಸ್‌.ಪಿ ರಶೀದ್ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ರಶೀದ್ ಒಂಬತ್ತು ತಿಂಗಳ ಹಿಂದೆ MEC-7ಗೆ ಸೇರಿಕೊಂಡಿದ್ದು, ಪ್ರಸ್ತುತ ಅವರು ವಾಸಿಸುತ್ತಿರುವ ಚೆರುವನ್ನೂರಿನಲ್ಲಿ ಇತರರಿಗೆ ತರಬೇತಿ ನೀಡುತ್ತಿದ್ದಾರೆ.

“ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನೀವು MEC-7ಗೆ ಸೇರಬಹುದು. ಯಾರೂ ಬರುವಂತೆ ಒತ್ತಡ ಹೇರುವುದಿಲ್ಲ. ನಿಮಗೆ ಕಷ್ಟವಾದರೆ ಬರುವುದನ್ನು ನಿಲ್ಲಿಸಬಹುದು. ಅಂತಿಮವಾಗಿ, ನೀವು ಆರೋಗ್ಯಕರ ಜೀವನವನ್ನು ಬಯಸುತ್ತೀರೋ ಇಲ್ಲವೋ ಎಂಬುವುದು ನಿಮ್ಮ ಆಯ್ಕೆಯಾಗಿದೆ. ನಮ್ಮ ತಂಡ ಸೇರಲು ಯಾವುದೇ ಪ್ರವೇಶ ಶುಲ್ಕ ಮತ್ತು ಪ್ರಕ್ರಿಯೆ ಇಲ್ಲ” ಎಂದು ರಶೀದ್ ಹೇಳಿದ್ದಾರೆ.

“ಕೆಲವು ತಿಂಗಳ ತರಬೇತಿಯ ನಂತರ, MEC-7 ತುಂಬಾ ಪ್ರಯೋಜನಕಾರಿ ಎಂದು ನಾನು ಕಂಡುಕೊಂಡೆ. ಹಾಗಾಗಿ, ನಾನು ಕೋಝಿಕ್ಕೋಡ್‌ನಲ್ಲಿರುವ ನನ್ನ ಪ್ರದೇಶದ ಬಳಿ ಒಂದು ಗುಂಪನ್ನು ಪ್ರಾರಂಭಿಸಿದೆ. ಈಗ ನನ್ನೊಂದಿಗೆ ಸುಮಾರು 100 ಮಂದಿ ವ್ಯಾಯಾಮದಲ್ಲಿ ಭಾಗವಹಿಸುತ್ತಿದ್ದಾರೆ” ಎಂದು ರಶೀದ್ ತಿಳಿಸಿದ್ದಾರೆ.

“ಸಿಪಿಐ(ಎಂ) ಮುಸ್ಲಿಮರ ವಿರುದ್ಧ ಪೂರ್ವಗ್ರಹ ಪೀಡಿತವಾಗಿದೆ”

ಸಿಪಿಐ(ಎಂ) ನಾಯಕ ಮೋಹನನ್ ಅವರ MEC-7 ಕುರಿತ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಕೂಟಗಳ ಬಗ್ಗೆ ಸಿಪಿಐ(ಎಂ) ಪೂರ್ವಾಗ್ರಹ ಪೀಡಿತ ದೃಷ್ಟಿಕೋನವನ್ನು ಪ್ರಸಾರ ಮಾಡುವ ಮೂಲಕ ಸಂಘ ಪರಿವಾರದ ಸಂಘಟನೆಗಳ ಕಾರ್ಯಸೂಚಿಗೆ ನೆರವು ನೀಡುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

“ರಾಜ್ಯದಲ್ಲಿ ಆರ್‌ಎಸ್‌ಎಸ್‌ನ ಶಾಖೆಗಳು ನಿರಾತಂಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಅದರ ಬಗ್ಗೆ ಯಾವುದೇ ತಕರಾರು ಇಲ್ಲದಿರುವಾಗ ವ್ಯಾಯಾಮದ ಗುಂಪೊಂದು ಕೆಂಗಣ್ಣಿಗೆ ಗುರಿಯಾಗಿರುವುದು ಏಕೆ? ಎಂದು ರಾಜ್ಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಅಭಿನ್ ವರ್ಕಿ ಪ್ರಶ್ನಿಸಿದ್ದಾರೆ. ಡಿಸೆಂಬರ್ 17 ರಂದು ಮಲಪ್ಪುರಂನಲ್ಲಿ MEC-7 ಗುಂಪಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿನ್ ವರ್ಕಿ, “MEC-7 ವಿರುದ್ದ ವಿವಾದ ಅನಗತ್ಯ” ಎಂದಿದ್ದಾರೆ.

ಇದಕ್ಕೂ ಎರಡು ದಿನಗಳ ಮೊದಲು, ಡಿಸೆಂಬರ್ 15 ರಂದು, ಕಾಂಗ್ರೆಸ್‌ನ ಪಾಲಕ್ಕಾಡ್ ಸಂಸದ ವಿಕೆ ಶ್ರೀಕಂದನ್ MEC-7 ಪಟ್ಟಾಂಬಿ ಗುಂಪನ್ನು ಉದ್ಘಾಟಿಸಿ ಬೆಂಬಲ ವ್ಯಕ್ತಪಡಿಸಿದ್ದರು.

ಸಿಪಿಐ(ಎಂ)ನ ಮೋಹನನ್ ಅವರ ಹೇಳಿಕೆಯನ್ನು ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್‌) ರಾಜ್ಯ ಉಪಾಧ್ಯಕ್ಷ ಸತ್ತಾರ್ ಪಂದಲ್ಲೂರ್ ವಿರೋಧಿಸಿದ್ದು, “ಮುಸ್ಲಿಮರು ಅಥವಾ ಮುಸ್ಲಿಮರ ಗುಂಪುಗಳನ್ನು ಅನುಮಾನದ ಕಣ್ಣಿನಿಂದ ನೋಡುವುದು ಸ್ವೀಕಾರ್ಹವಲ್ಲ” ಎಂದಿದ್ದಾರೆ.

ಸಿಪಿಐ(ಎಂ) ತೊರೆದು ಕಾಂಗ್ರೆಸ್‌ ಸೇರಿದ ಮುಸ್ಲಿಂ ಮುಖಂಡ

ಅಲ್ಪಸಂಖ್ಯಾತರ ಮೇಲೆ ಅನುಮಾನ ವ್ಯಕ್ತಪಡಿಸಿ ಮೋಹನನ್ ಹೇಳಿಕೆ ನೀಡಿದ್ದಾರೆ ಎಂದಿರುವ ಸಿಪಿಐ(ಎಂ) ನಡುವನ್ನೂರು ಶಾಖೆಯ ಕಾರ್ಯದರ್ಶಿ ಅಕ್ಬರ್ ಅಲಿ ಅವರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಕ್ಬರ್ ಅವರು ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನ ಮಾಜಿ ನಾಯಕರೂ ಆಗಿದ್ದರು.

ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿದ್ದು, “ಸಿಪಿಐ(ಎಂ) MEC-7 ಅನ್ನು ವಿರೋಧಿಸುವುದಿಲ್ಲ” ಎಂದು ಹೇಳಿದ್ದಾರೆ.

“ಜಮಾತ್-ಎ-ಇಸ್ಲಾಮಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಮತ್ತು ಸಂಘ ಪರಿವಾರ ಸೇರಿದಂತೆ ಧಾರ್ಮಿಕ ದ್ವೇಷವನ್ನು ಹರಡುವ ಗುಂಪುಗಳಿವೆ. ಈ ಸಂಸ್ಥೆಗಳು ತಮ್ಮ ಕೋಮುವಾದಿ ಕಾರ್ಯಸೂಚಿಯನ್ನು ಉತ್ತೇಜಿಸಲು MEC-7ನಂತಹ ಗುಂಪುಗಳಿಗೆ ನುಸುಳುತ್ತವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು. ನನ್ನ ಹೇಳಿಕೆಯ ಉದ್ದೇಶವೂ ಇದೇ ಆಗಿತ್ತು” ಎಂದು ಮೋಹನನ್ ಅವರು ಡಿಸೆಂಬರ್ 15ರಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಮಸ್ತ (ಎಪಿ ವಿಭಾಗ) ಕೂಡ ತನ್ನ ಹೇಳಿಕೆಯನ್ನು ಬದಲಿಸಿದ್ದು, ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸುವ ಉದ್ದೇಶವಿಲ್ಲ ಎಂದು ಸಮರ್ಥಿಸಿಕೊಂಡಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಮಸ್ತ (ಎಪಿ ವಿಭಾಗ) ನಾಯಕ ಅಬ್ದುಲ್ ಹಕ್ಕಿಂ ಅಝ್ಹರಿ, “ನಮ್ಮ ಸಂಘಟನೆ ಮಹಿಳೆಯರ ದೇಹದ ಅಸಭ್ಯ ಪ್ರದರ್ಶನವನ್ನು ಮಾತ್ರ ವಿರೋಧಿಸಿದೆ” ಎಂದು ಹೇಳಿದ್ದಾರೆ.

ಮೋಹನನ್ ಅವರು ತನ್ನ ಹೇಳಿಕೆಯನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಸುರೇಂದ್ರನ್, “ಸಿಪಿಐ(ಎಂ) ಧಾರ್ಮಿಕ ಉಗ್ರಗಾಮಿಗಳಿಗೆ ಹೆದರಿ ತನ್ನ ನಿಲುವು ಬದಲಿಸಿದೆ” ಎಂದು ಹೇಳಿದ್ದಾರೆ. ಮೋಹನನ್ ಎತ್ತಿರುವ ವಿಚಾರ ಗಂಭೀರವಾಗಿದ್ದು, ತನಿಖೆ ನಡೆಸಬೇಕು ಎಂದು ಅವರು ತಮ್ಮ ಆಗ್ರವನ್ನು ಪುನರುಚ್ಚರಿಸಿದ್ದಾರೆ.

ಕೃಪೆ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...