Homeಚಳವಳಿಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

ಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 70 ವರ್ಷ ವಯಸ್ಸಿನ ಕೈದಿಗಳನ್ನು ಬಿಡುಗಡೆ ಮಾಡಲು ಏಕರೂಪದ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪಾಟ್ಕರ್‌‌ ಪರವಾಗಿ ವಕೀಲ ಎಸ್‌.ಬಿ ತಾಲೇಕರ್ ಸಲ್ಲಿಸಿದ ಅರ್ಜಿಯಲ್ಲಿ, ಕೈದಿಗಳ ವರ್ಗೀಕರಣ ಮತ್ತು ಅವರ ಬಿಡುಗಡೆಯ ವಿಷಯ ಹೆಚ್ಚಾಗಿ ಸಾಮಾಜಿಕ ಪರಿಸ್ಥಿತಿಗಳು ಮತ್ತು ಆಡಳಿತಾತ್ಮಕ ಅನುಕೂಲತೆಯನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ.

ಪಾಟ್ಕರ್ ತಮ್ಮ ಮನವಿಯಲ್ಲಿ ವೃದ್ಧಾಪ್ಯ ಮತ್ತು ವೈರಸ್‌ಗೆ ತುತ್ತಾಗುವ ಸಾಧ್ಯತೆ ಹೇಗೆ ಒಂದು ಪ್ರಮುಖ ಅಂಶವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ. ವಯಸ್ಸಾದ ಕೈದಿಗಳು ಹೆಚ್ಚು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ವಿಶೇಷವಾಗಿ 70 ವರ್ಷ ಮೇಲ್ಪಟ್ಟವರಿಗೆ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಿವೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಅರ್ಜಿಯಲ್ಲಿ, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶದಂತಹ ರಾಜ್ಯಗಳ ಉದಾಹರಣೆಗಳನ್ನು ನೀಡಲಾಗಿದೆ. ಈ ರಾಜ್ಯಗಳು, ಮೇ 8ರಂದು ಸುಪ್ರೀಂಕೋರ್ಟ್‌ ನೀಡಿದ ಆದೇಶದ ಪ್ರಕಾರ ವೃದ್ಧಾಪ್ಯದಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ದೊರೆಸ್ವಾಮಿಯವರಿಗೆ ಸಂತಾಪಸೂಚಕ ನಿರ್ಣಯ ಮಂಡಿಸುವ ಅರ್ಹತೆ ಉಳಿಸಿಕೊಂಡಿದೆಯೇ?

“ಎಚ್‌ಪಿಸಿಯ (ಉನ್ನತಾಧಿಕಾರ ಸಮಿತಿಗಳು) ವಿಭಿನ್ನ ವಿಧಾನಗಳಿಂದ  ವಿಭಿನ್ನ ರಾಜ್ಯಗಳಲ್ಲಿ ಏಕರೂಪತೆಯಿಲ್ಲ. ವೃದ್ಧರನ್ನು ಹೊಂದಿರುವ ಕಾರಾಗೃಹಗಳಲ್ಲಿ ದಟ್ಟಣೆಯನ್ನು ಕಡಿಮೆ  ಮಾಡಲು ರಾಜ್ಯಗಳು ಯಾವುದೇ ಏಕರೂಪದ ಮಾನದಂಡಗಳನ್ನು ಹೊಂದಿಲ್ಲ” ಎಂದು ಪಾಟ್ಕರ್ ತಮ್ಮ ಅರ್ಜಿಯಲ್ಲಿ ವಿವರಿಸಿದ್ದಾರೆ.

ಮೇ 8, 2021ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ಕಳೆದ ವರ್ಷ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಾಪಿಸಿದ ಉನ್ನತಾಧಿಕಾರ ಸಮಿತಿಗಳು ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವುದನ್ನು ಪರಿಗಣಿಸಬೇಕು ಎಂದು ಆದೇಶಿಸಿತ್ತು. ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಸಮಯದಲ್ಲಿ ಜೈಲುಗಳಲ್ಲಿನ ಜನದಟ್ಟಣೆಯನ್ನು ಈ ಪೀಠ ಪರಿಶೀಲನೆ ಮಾಡಿತ್ತು.

ಇದಾದ ನಂತರವೂ ಉನ್ನತಾಧಿಕಾರ ಸಮಿತಿಗಳು  ಈ ವಿಷಯವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ, ಕೈದಿಗಳನ್ನು ಸೋಂಕಿಗೆ ಒಳಪಡಿಸುವ ಆಧಾರದ ಮೇಲೆ ವರ್ಗೀಕರಿಸುವ ಕೆಲಸ ಮಾಡಿಲ್ಲ. ಜೈಲುಗಳಂತಹ ಪರಿಸರದಲ್ಲಿ ಕೊರೋನಾ ಸೋಂಕಿಗೆ ಹೆಚ್ಚು ಗುರಿಯಾಗಬಹುದಾದ ಕೈದಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಮೇಧಾ ಪಾಟ್ಕರ್‌‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...