Homeಮುಖಪುಟಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

ಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

- Advertisement -
- Advertisement -

ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಮಾಧ್ಯಮಗಳಿಗೆ ಜಾಹೀರಾತು ನೀಡುವುದನ್ನು ಎರಡು ವರ್ಷಗಳ ಕಾಲ ತಡೆಹಿಡಿಯಬೇಕೆಂಬ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಶಿಫಾರಸ್ನನ್ನು ಅಸೋಸಿಯೇಷನ್ ​​ಆಫ್ ರೇಡಿಯೋ ಆಪರೇಟರ್ಸ್ ಫಾರ್ ಇಂಡಿಯಾ (AROI) ವಿರೋಧಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊರೊನಾ ಕಾಲದಲ್ಲಿ ಸರ್ಕಾರ ಮಾಡಬೇಕಾದ 5 ಅಂಶಗಳ ಪಟ್ಟಿಯೊಂದಿಗೆ ಪತ್ರ ಬರೆದಿದ್ದರು. ಅವುಗಳಲ್ಲಿ ಒಂದು  ಜಾಹೀರಾತುಗಳನ್ನು ಕಡಿತಗೊಳಿಸುವ ಮೂಲಕ ಹಣವನ್ನು ಉಳಿಸುವುದಾಗಿತ್ತು.

ದೇಶದ ಖಾಸಗಿ ಎಫ್‌ಎಂ ಚಾನೆಲ್‌ಗಳ ಸಂಸ್ಥೆಯಾದ AROI ಸೊನಿಯಾ ಗಾಂಧಿಯವರ ಈ ಅಂಶವನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಕಳೆದ ವರ್ಷ ರೇಡಿಯೊಗೆ, ವಿಶೇಷವಾಗಿ ಸಣ್ಣ ಪಟ್ಟಣಗಳಲ್ಲಿನ ರೇಡಿಯೊ ಕೇಂದ್ರಗಳಿಗೆ, ಸರ್ಕಾರದ ಜಾಹೀರಾತಿನಲ್ಲಿ ಭಾರಿ ಕುಸಿತ ಕಂಡುಬಂದಿದೆ” ಎಂದು ಅಸೋಸಿಯೇಷನ್ ​​ಹೇಳಿದೆ.

ರೇಡಿಯೊ ವಲಯವು ಈಗಾಗಲೇ ಆಳವಾದ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಕಳೆದ ವರ್ಷದಲ್ಲಿ ರೇಡಿಯೊ ಉಧ್ಯಮದ ಜಾಹೀರಾತು ಆದಾಯವು 20% ರಷ್ಟು ಕುಸಿಯುವ ಮೂಲಕ ಕಠಿಣ ಹಂತದಲ್ಲಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ನಂತರ ಜಾಹೀರಾತು ಆದಾಯವು 80% ಕುಸಿದಿದೆ ಎನ್ನಲಾಗಿದೆ.

“ಭಾರತದಾದ್ಯಂತ 380 ಖಾಸಗಿ ಎಫ್‌ಎಂ ಕೇಂದ್ರಗಳ ಮೂಲಕ ಕೋವಿಡ್ -19 ವಿರುದ್ಧದ ಸಮರಕ್ಕೆ ಪೂರ್ಣ ಹೃದಯದಿಂದ ಬೆಂಬಲಿಸುತ್ತಿದೆ ಹಾಗೂ ರೇಡಿಯೊದಲ್ಲಿ ಜಾಹೀರಾತನ್ನು ಸಾಮಾನ್ಯ ಮಟ್ಟಕ್ಕೆ ಮರುಸ್ಥಾಪಿಸುವಂತೆ ಸರ್ಕಾರವನ್ನು ಕೋರಿದೆ” ಎಂದು AROI ಹೇಳಿಕೆಯಲ್ಲಿ ತಿಳಿಸಿದೆ.

“ಶ್ರೀಮತಿ ಸೋನಿಯಾ ಗಾಂಧಿಯವರು, ಅವರ ಸಲಹೆಯನ್ನು ದಯವಿಟ್ಟು ಪರಿಶೀಲಿಸಲು ಹಾಗೂ ಹಿಂತೆಗೆದುಕೊಳ್ಳಲು ನಾವು ವಿನಂತಿಸುತ್ತೇವೆ ಮತ್ತು ಆ ಮೂಲಕ ಪ್ರಜಾಪ್ರಭುತ್ವದ ನಿರ್ಣಾಯಕ ಸ್ತಂಭಗಳಲ್ಲಿ ಒಂದಾದ ಮಾಧ್ಯಮಕ್ಕೆ ತನ್ನ ಬೆಂಬಲವನ್ನು ಕೋರುತ್ತೇವೆ” ಎಂದು ಸಂಘ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷರ ಸಲಹೆಯನ್ನು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​(NBA) ಆಕ್ಷೇಪ ವ್ಯಕ್ತಪಡಿಸಿಸಿದೆ, ಅವರ ಸಲಹೆಯನ್ನು “ನಿರಾಶಾದಾಯಕ” ಎಂದು ಬಣ್ಣಿಸಿದೆ.

“ಮಾಧ್ಯಮ ಸಿಬ್ಬಂದಿಗಳು, ತಮ್ಮ ಜೀವ ಭಯವಿಲ್ಲದೆ, ಸಾಂಕ್ರಾಮಿಕ ರೋಗದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಮೂಲಕ ತಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಮಯದಲ್ಲಿ, ಕಾಂಗ್ರೆಸ್ ಅಧ್ಯಕ್ಷೆಯ ಈ ರೀತಿಯ ಹೇಳಿಕೆ ಹೆಚ್ಚು ನಿರಾಶಾದಾಯಕವಾಗಿದೆ” ಎಂದು NBA ಅಧ್ಯಕ್ಷ ರಜತ್ ಶರ್ಮಾ ಹೇಳಿದ್ದಾರೆ.

ಆರ್ಥಿಕ ಹಿಂಜರಿತದಿಂದಾಗಿ ಜಾಹೀರಾತು ಆದಾಯದಲ್ಲಿ ಕುಸಿತ ಕಂಡುಬಂದಿದೆ ಹಾಗೂ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಮಾಧ್ಯಮವೂ ಆರ್ಥಿಕ ಹೊಡೆತಗಳನ್ನು ಅನುಭವಿಸುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...