Homeಅಂತರಾಷ್ಟ್ರೀಯCNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ.

ಪ್ಯಾಲೆಸ್ತೀನ್‌ನ ತಯಾಸಿರ್ ಗ್ರಾಮದ ಬಳಿ ಇಸ್ರೇಲಿ ವಸಾಹತುಗಾರರು ನಡೆಸಿದ ದಾಳಿ ಮತ್ತು ಅಕ್ರಮ ಹೊರಠಾಣೆ ನಿರ್ಮಾಣದ ನಂತರದ ಪರಿಸ್ಥಿತಿಯ ಬಗ್ಗೆ ಗುರುವಾರ (ಮಾ.26) ವರದಿ ಮಾಡುತ್ತಿದ್ದ ಸಿಎನ್‌ಎನ್ ತಂಡವನ್ನು ಇಸ್ರೇಲಿ ಸೈನಿಕರು ಬಂಧಿಸಿದ್ದಾರೆ ಎಂದು ಶನಿವಾರ (ಮಾ.28) ಎಫ್‌ಪಿಎ ಹೇಳಿದೆ.

ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ಆಕ್ರಮಣಕಾರಿ ಧೋರಣೆ ತೋರಿದ್ದು, ಪತ್ರಕರ್ತರು ತಮ್ಮ ಗುರುತನ್ನು ತಿಳಿಸಿದ ನಂತರವೂ ಅವರತ್ತ ಬಂದೂಕು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಸ್ರೇಲಿ ರಕ್ಷಣಾ ಪಡೆಯ (ಐಡಿಎಫ್‌) ಸೈನಿಕನೊಬ್ಬ ಸಿಎನ್‌ಎನ್‌ ಫೋಟೋ ಜರ್ನಲಿಸ್ಟ್ ಸಿರಿಲ್ ಥಿಯೋಫಿಲೋಸ್ ಅವರ ಕುತ್ತಿಗೆ ಪಟ್ಟಿ ಹಿಡಿದು ನೆಲಕ್ಕೆ ತಳ್ಳಿದ್ದಲ್ಲದೆ, ಅವರ ಕ್ಯಾಮರಾವನ್ನೂ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.

ಸಿಎನ್‌ಎನ್ ತನ್ನದೇ ವರದಿಯಲ್ಲಿ ಈ ಘಟನೆಯ ವಿವರಗಳನ್ನು ದೃಢಪಡಿಸಿದ್ದು, ಫೋಟೋ ಜರ್ನಲಿಸ್ಟ್ ಅನ್ನು ಸಿರಿಲ್ ಥಿಯೋಫಿಲೋಸ್ ಎಂದು ಹೇಳಿದೆ.

ಸಿಎನ್‌ಎನ್‌ ತಂಡವು ತಯಾಸಿರ್ ಗ್ರಾಮದಲ್ಲಿ ವಸಾಹತುಗಾರರ ಹಿಂಸಾಚಾರವನ್ನು ದಾಖಲಿಸುತ್ತಿತ್ತು. ವರದಿಗಾರ ಜೆರೆಮಿ ಡೈಮಂಡ್ ಪ್ರಕಾರ, ಸೈನಿಕರು ವಸಾಹತುಗಾರರನ್ನು ತಡೆಯುವ ಬದಲು ಪತ್ರಕರ್ತರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿರುವ ಎಫ್‌ಪಿಎ “ಇದು ಅಚಾತುರ್ಯದಿಂದ ನಡೆದ ದಾಳಿಯಲ್ಲ. ಪತ್ರಕರ್ತರು ಎಂದು ಗೊತ್ತಾದ ಮೇಲೂ ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಹಲ್ಲೆ ನಡೆಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದಿದೆ.

ಇಸ್ರೇಲಿ ಸೈನಿಕರ ಬಲಪ್ರಯೋಗವು ಅತಿಯಾದದ್ದು ಮತ್ತು ಅಪಾಯಕಾರಿಯಾಗಿತ್ತು. ಪತ್ರಕರ್ತರು ಮತ್ತು ನಾಗರಿಕರತ್ತ ಬಂದೂಕುಗಳನ್ನು ತೋರಿಸುವುದು, ಕ್ಯಾಮರಾಮ್ಯಾನ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಸಿಬ್ಬಂದಿಯನ್ನು ಬಂಧಿಸಿರುವುದು ಎಲ್ಲಾ ಮಿತಿಗಳನ್ನು ಮೀರಿದ ಕ್ರಮಗಳಾಗಿವೆ ಎಂದು ಹೇಳಿದೆ.

ಇಂತಹ ವರ್ತನೆಯು ಮಾಧ್ಯಮಗಳ ಬಗ್ಗೆ ಇರುವ ಆಳವಾದ ಆತಂಕಕಾರಿ ದ್ವೇಷದ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದೆ.

ಇಸ್ರೇಲಿ ಮಿಲಿಟರಿಯು ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದು, ಸೈನಿಕರ ಈ ವರ್ತನೆಯು ಐಡಿಎಫ್ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಹೇಳಿದೆ.

“ಈ ಘಟನೆಯಲ್ಲಿ ಸೈನಿಕರ ನಡವಳಿಕೆ ಮತ್ತು ಹೇಳಿಕೆಗಳು ಐಡಿಎಫ್ ಅನ್ನು ಪ್ರತಿನಿಧಿಸುವುದಿಲ್ಲ. ಇದು ಐಡಿಎಫ್ ಸೈನಿಕರಿಂದ ನಿರೀಕ್ಷಿಸುವ ಶಿಸ್ತಿಗೆ ವಿರುದ್ಧವಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಐಡಿಎಫ್‌ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾದವ್ ಶೋಶಾನಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದು, “ನಾನು ಖಾಸಗಿಯಾಗಿ ಕ್ಷಮೆಯಾಚಿಸಿದ್ದೇನೆ. ಮತ್ತೆ ಹೇಳುತ್ತಿದ್ದೇನೆ, ಇದು ಸಂಭವಿಸಬಾರದಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕೆಲಸ, ಅದರಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದೂ ಸೇರಿದೆ” ಎಂದಿದ್ದಾರೆ.

ಈ ತಿಂಗಳಲ್ಲಿ ಸಿಎನ್‌ಎನ್‌ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ದಾಳಿ ನಡೆಸಿದ ಎರಡನೇ ಪ್ರಕರಣ ಇದಾಗಿದೆ.

ಕೆಲವು ದಿನಗಳ ಹಿಂದೆ ರಂಝಾನ್ ತಿಂಗಳಲ್ಲಿ, ಪೂರ್ವ ಜೆರುಸಲೇಂನ ಓಲ್ಡ್‌ ಸಿಟಿಯ ಗೋಡೆಗಳ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಬಗ್ಗೆ ವರದಿ ಮಾಡುತ್ತಿದ್ದಾಗ ಪತ್ರಕರ್ತರ ಮೇಲೆ ದಾಳಿ ಮಾಡಲಾಗಿತ್ತು.

ಇಸ್ರೇಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಅಪ್ರೊಚೋದಿತ ದಾಳಿಯಿಂದ ಸಿಎನ್‌ಎನ್ ಪ್ರೊಡ್ಯೂಸರ್ ಒಬ್ಬರ ಮಣಿಕಟ್ಟು ಮುರಿದಿತ್ತು.

ಅಕ್ಟೋಬರ್ 2025ರಲ್ಲಿ ಗಾಝಾ ಕದನ ವಿರಾಮವಾದರೂ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಸೈನಿಕರು ದೌರ್ಜನ್ಯ ಮುಂದುವರಿಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದಾಗಿನಿಂದ, ಇಸ್ರೇಲಿ ವಸಾಹತುಗಾರರಿಂದ ಪ್ಯಾಲೆಸ್ತೀನಿಯರ ಮೇಲೆ ಪ್ರಾಣಹಾನಿ ಉಂಟುಮಾಡುವ ಹೊಸ ಸರಣಿ ದಾಳಿಗಳು ನಡೆಯುತ್ತಿವೆ. ಇಸ್ರೇಲಿ ಸೈನಿಕರು ಇದನ್ನು ತಡೆಯುವ ಬದಲು, ದಾಳಿಕೋರರನ್ನು ಪ್ರಚೋದಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...