Homeಮುಖಪುಟಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು ತಮ್ಮ ಆಡಳಿತವನ್ನು ಹೊಗಳದ ಮಾದ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಬಿಬಿಸಿಯ ಭಾರತೀಯ ನ್ಯೂಸ್ ರೂಂ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎಂಬ ಸುದ್ದಿ ವರದಿಗಳಿಗೆ ಅವರು ಪ್ರತಿಕ್ರಿಯಿಸಿದ ಪಿಣರಾಯ್‌ ವಿಜಯನ್‌, ಬ್ರಿಟನ್ ಮೂಲದ ಸುದ್ದಿಸಂಸ್ಥೆ ಬಿಬಿಸಿ ಭಾರತದಲ್ಲಿನ ತನ್ನ ಕಚೇರಿಗೆ ಬೀಗ ಹಾಕಬೇಕಾಯಿತು. ಆದಾಯ ತೆರಿಗೆ ಇಲಾಖೆಯ ನಿರಂತರ ಪ್ರತೀಕಾರದ ಕ್ರಮಗಳಿಂದಾಗಿ ಬಿಬಿಸಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು, ಬಿಜೆಪಿ ಆಡಳಿತವನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ. ಚುನಾವಣೆಯು ಅಂತಹ ಸಮಸ್ಯೆಗಳನ್ನು ಪರಿಹರಿಸಲು ಇರುವ ಒಂದು ಸದವಕಾಶವಾಗಿದೆ ಎಂದು ಹೇಳಿದ್ದಾರೆ.

ಸರ್ವಾಧಿಕಾರಿ ಆಡಳಿತಗಳು ಯಾವಾಗಲೂ ಮಾಧ್ಯಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತವೆ ಮತ್ತು ಭಾರತದ ತುರ್ತು ಪರಿಸ್ಥಿತಿಯ ಸ್ಮರಣೀಯ ಲಕ್ಷಣಗಳು ಬಿಜೆಪಿ ಆಡಳಿತದಲ್ಲಿ ಮರುಕಳಿಸುತ್ತಿವೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರವಾಗಿ ಕುಸಿಯುತ್ತಿದೆ. ಪ್ಯಾರಿಸ್ ಮೂಲದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ 2023ರ ವರದಿಯ ಪ್ರಕಾರ, ಭಾರತದ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕವು 180 ದೇಶಗಳಲ್ಲಿ 150ರಿಂದ 161ಕ್ಕೆ ಇಳಿದಿದೆ ಎಂದು  ಹೇಳಿದ್ದಾರೆ.

ಸಂಘಪರಿವಾರದ ವಿರುದ್ಧ ವರದಿ ಮಾಡುವ ಧೈರ್ಯ ತೋರುವ ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದಕ್ಕೆ ರಾಷ್ಟ್ರ ಸಾಕ್ಷಿಯಾಗಿದೆ. ವಿಜಯನ್ ಅವರು 2020ರಲ್ಲಿ ದೆಹಲಿ ಗಲಭೆಗಳ ಬಗ್ಗೆ ಪ್ರಸಾರ ಮಾಡಿದ್ದಕ್ಕೆ ಕೇರಳದ ಎರಡು ಸುದ್ದಿವಾಹಿನಿಗಳ ಪರವಾನಗಿಯನ್ನು ರದ್ದುಗೊಳಿಸಿದ ಘಟನೆಯನ್ನು ಉಲ್ಲೇಖಿಸಿದ್ದಾರೆ. ಸರ್ವಾಧಿಕಾರಿ ಸರ್ಕಾರಗಳು ಮಾಧ್ಯಮಗಳನ್ನು ತನ್ನ ಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸದಾ ಪ್ರಯತ್ನಿಸುತ್ತವೆ. ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರ್ದಾಕ್ಷಿಣ್ಯವಾಗಿ ಗುರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...