Homeಚಳವಳಿಸರ್ಕಾರದ ಮುಂದಿನ ಗುರಿ ಮಾಧ್ಯಮಗಳು, ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ: ರಾಕೇಶ್ ಟಿಕಾಯತ್

ಸರ್ಕಾರದ ಮುಂದಿನ ಗುರಿ ಮಾಧ್ಯಮಗಳು, ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ: ರಾಕೇಶ್ ಟಿಕಾಯತ್

- Advertisement -
- Advertisement -

’ಒಕ್ಕೂಟ ಸರ್ಕಾರ ಎಲ್ಲವನ್ನೂ ಮಾರುತ್ತಿದೆ. ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳು . ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ’ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಅಧ್ಯಕ್ಷ ರಾಕೇಶ್ ಟಿಕಾಯತ್, ಮಾಧ್ಯಮ ಸಂಸ್ಥೆಗಳು ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದ್ದಾರೆ.

“ಎಲ್ಲರೂ ನಮ್ಮೊಂದಿಗೆ ಸೇರಿಕೊಳ್ಳಬೇಕು. ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳಾಗಿರುತ್ತದೆ, ನೀವು ಉಳಿಸಲು ಬಯಸಿದರೆ ನಮ್ಮೊಂದಿಗೆ ಸೇರಿಕೊಳ್ಳಿ. ಇಲ್ಲದಿದ್ದರೇ ನೀವು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತಿರಿ” ಎಂದು ರಾಯ್‌ಪುರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

 

ಛತ್ತಿಸ್‌ಗಢದ ರಾಜೀಮ್ ನಗರದ ಕಿಸಾನ್ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ತೆರಳುತ್ತಿದ್ದ ರೈತ ಮುಖಂಡ ರಾಕೇಶ್  ಟಿಕಾಯತ್, “ಛತ್ತೀಸ್‌ಗಢದ ರೈತರ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸುತ್ತೇವೆ. ಮೊದಲು ಕೇಂದ್ರದಲ್ಲಿ ಕುಳಿತಿರುವ ಸರ್ಕಾರದ ಬಗ್ಗೆ ಗಮನ ಹರಿಸಬೇಕು. ಈ ಕಾನೂನುಗಳನ್ನು ಜಾರಿ ಮಾಡಿದ ಬಳಿಕ ಅರ್ಧ ದೇಶವನ್ನು ಮಾರಾಟ ಮಾಡಿದೆ. ಅವರು ಮಧ್ಯಪ್ರದೇಶದಲ್ಲಿ ಎಪಿಎಂಸಿ ಮಂಡಿಗಳನ್ನು ಮಾರಿದ್ದಾರೆ. ಅವರ ಕಡೆಗೆ ಗಮನ ಕೊಡಿ. 182 ಮಂಡಿಗಳನ್ನು ಮಾರಾಟ ಮಾಡಲಾಗಿದೆ” ಎಂದಿದ್ದಾರೆ.

ಮುಂದುವರಿದು, ’ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳಾಗಿವೆ. ನೀವು ಉಳಿಸಲು ಬಯಸಿದರೆ ನಮ್ಮೊಂದಿಗೆ ಸೇರಿಕೊಳ್ಳಿ. ಇಲ್ಲದಿದ್ದರೇ ನೀವು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತಿರಿ” ಎಂದು ಮಾಧ್ಯಮ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ 10 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ವಿವಾದಿತ ಕಾನೂನುಗಳು ಜಾರಿಯಾಗಿ ಒಂದು ವರ್ಷವಾದ ಹಿನ್ನೆಲೆ ಸೋಮವಾರ (ಸೆ.27) ಭಾರತ್ ಬಂದ್ ನಡೆಸಿದ್ದಾರೆ. 10 ತಿಂಗಳಲ್ಲ ಇನ್ನೂ 10 ವರ್ಷವಾದರೂ ಪ್ರತಿಭಟನೆ ನಡಸಲು ಸಿದ್ಧ ಎಂದು ರಾಕೇಶ್ ಟಿಕಾಯತ್ ಹೇಳಿದ್ದರು.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...