ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ … Continue reading ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ