Homeಮುಖಪುಟರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಪೊಲೀಸರು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು.

- Advertisement -
- Advertisement -

ಅಂದು ಸೆಪ್ಟೆಂಬರ್ 6, ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿ, ಡ್ರಗ್ ಕೇಸ್‌ನಲ್ಲಿ ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿ ಎನ್‌ಸಿಬಿ ಕಚೇರಿಗೆ ಆಗಮಿಸಿದ್ದರು. ಆಕೆ ಬರುತ್ತಿದ್ದಂತೆ ಮಾಧ್ಯಮಗಳ ವರ್ತನೆ ನಿಜಕ್ಕೂ ವಾಕರಿಕೆ ಬರುವಂತಿತ್ತು.

ಸುದ್ದಿ ಸಂಸ್ಥೆಗಳ ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದಿದ್ದರು. ಆಕೆಯನ್ನು ಕಚೇರಿಯ ಒಳಗೆ ಹೋಗಲು ಸಹ ಅವಕಾಶ ನೀಡದೇ ಸುತ್ತುವರೆದಿದ್ದವು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಎಲ್ಲಾ ಮಿತಿಗಳನ್ನು ಉಲ್ಲಂಘಿಸಿದ್ದವು.

ಅಂದು ನಟಿ ರಿಯಾಳ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವುದು ಕೂಡಾ ದೌರ್ಜನ್ಯ ಎಂದು ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಅವರಿಗೆ ಬೇಕಾಗಿದ್ದು ಆಕೆ ಛಾಯಾಚಿತ್ರಗಳು, ದೃಶ್ಯಾವಳಿಗಳು ಮಾತ್ರ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದು, ತಾವು ಆಕೆಯ ಮೇಲೆ ದೌರ್ಜನ್ಯ ಮಾಡುತ್ತಿದ್ದೇವೆ ಅನ್ನಿಸಿರಲಿಲ್ಲ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಆದರೆ ಮರುದಿನ ಇದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸುದ್ದಿಯಾಯಿತು. ಹಲವು ಮಂದಿ ಮಾಧ್ಯಮಗಳ ನಡೆಯನ್ನು ಖಂಡಿಸಿದರು. ಆಕೆಯ ಮೇಲಾದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದರು.

ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ನಟಿ ಸ್ವರಾ ಭಾಸ್ಕರ್, ತಾಪ್ಸಿ ಪನ್ನು ಸೇರಿದಂತೆ ಅನೇಕ ಮಂದಿ ಟ್ವೀಟ್ ಮಾಡಿ ಸರ್ಕಾರವನ್ನು ಟೀಕಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕೆಯ ಪರಿಸ್ಥಿತಿಯನ್ನು ವ್ಯಂಗ್ಯಚಿತ್ರಗಳ ಮೂಲಕ ತೋರಿಸಲಾಗಿತ್ತು.

Vultures': Mir Suhail's Scathing Cartoon on Rhea Media Trial Storms Internet | Clarion India

ಅಂದು ಮುಂಬೈ ಪೊಲೀಸರು ಆಕೆಯ ಸಹಾಯಕ್ಕೆ ಬಂದಿರಲಿಲ್ಲ. ಮಾಧ್ಯಮಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದರೆ ಆಕೆಯ ಮೇಲೆ ಮಾಧ್ಯಮಗಳು ದೌರ್ಜನ್ಯ ನಡೆಸುತ್ತಿರಲಿಲ್ಲ.

ಇಂದು ರಿಯಾ ಕಳೆದ 28 ದಿನಗಳ ನಂತರ ಜಾಮೀನು ಪಡೆದು ಬೈಕುಲಾ ಜೈಲಿನಿಂದ ಹೊರಬಂದಿದ್ದಾರೆ. ಕಳೆದ ತಿಂಗಳು ತಾವು ನಿರ್ಲಕ್ಷ್ಯ ವಹಿಸಿದಕ್ಕೆ ನಡೆದ ಘಟನೆ ಕುರಿತು ಎಚ್ಚರ ವಹಿಸಿರುವ ಮುಂಬೈ ಪೊಲೀಸರು ಇಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಟ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಕೂಡಲೇ, ಎಚ್ಚೆತ್ತ ಮುಂಬೈ ಪೊಲೀಸರು ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಸೆಲೆಬ್ರಿಟಿ, ವಕೀಲರನ್ನು ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

“ನೀವು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ನೀವು ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಬಾರದು. ನಿಮ್ಮ ಜೀವ, ಆ ವ್ಯಕ್ತಿಯ ಜೀವ ಅಥವಾ ಪಾದಚಾರಿಗಳ ಜೀವವನ್ನು ಅಪಾಯಕ್ಕೆ ತಳ್ಳಬಾರದು. ಇದು ಅಪರಾಧವಾಗಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟೇ ಅಲ್ಲದೆ ಚಾಲಕನ ವಿರುದ್ಧ ಮಾತ್ರವಲ್ಲ ಆತನನ್ನು ಬೆನ್ನಟ್ಟಲು ಪ್ರಚೋದಿಸುವ ವ್ಯಕ್ತಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಂಬೈ ಪೊಲೀಸ್ ಉಪ ಆಯುಕ್ತ ಸಂಗ್ರಾಮ್ ಸಿಂಗ್ ನಿಶಂದರ್ ತಿಳಿದ್ದಾರೆ.

ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನ್ನ ಡ್ರಗ್ಸ್ ತನಿಖೆಯನ್ನು ವಿಸ್ತರಿಸಿ ವಿಚಾರಣೆಗೆ ಕರೆದಿದ್ದರಿಂದ ನಟರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರನ್ನು ಕೂಡ ಮಾಧ್ಯಮಗಳು ಬೆನ್ನಟ್ಟಿದ್ದ ಫೋಟೋಗಳು ಮತ್ತು ವೀಡಿಯೊಗಳು ವೈರಲ್ ಆಗಿದ್ದವು.

ಇಂತಹ ಘಟನೆಗಳ ನಂತರವಾದರೂ ಮಾಧ್ಯಮಗಳು ತಮ್ಮ ಮಿತಿಯನ್ನು ಅರಿತುಕೊಳ್ಳುತ್ತವೆಯೋ ಇಲ್ಲವೋ, ಆದರೆ ಸರ್ಕಾರ, ಪೊಲೀಸ್ ಇಲಾಖೆ ಇಂತಹ ಘಟನೆಗಳು ಜರುಗದಂತೆ ನಿಗಾ ವಹಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು ಮುಂಬೈ ಪೊಲೀಸರ ನಡೆಯನ್ನು ಶ್ಲಾಘಿಸಿದ್ದಾರೆ.


ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...