Homeಕರ್ನಾಟಕಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

- Advertisement -
- Advertisement -

ಧರ್ಮಸ್ಥಳ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸದಂತೆ ಯೂಟ್ಯೂಬ್ ಚಾನೆಲ್‌ಗೆ ವಿಧಿಸಿದ್ದ ನಿರ್ಬಂಧವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ನಾಳೆ (ಆ.8) ಅರ್ಜಿ ವಿಚಾರಣೆ ನಡೆಸಲಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳ ದೇವಾಲಯದ ಅಧೀನ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಡಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ (ಆ.7) ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಎಸ್‌ಸಿ ಶರ್ಮಾ ಮತ್ತು ವಿನೋದ್ ಚಂದ್ರನ್ ಅವರ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದ ಹರ್ಷೇಂದ್ರ ಕುಮಾರ್ ಪರ ವಕೀಲ, “ಹಲವಾರು ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ” ಎಂದು ಹೇಳಿದರು.

“8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿವೆ. ಆದ್ದರಿಂದ, ಅರ್ಜಿಯನ್ನು ನಾಳೆ ವಿಚಾರಣೆಗೆ ಪರಿಗಣಿಸಿ” ಎಂದು ವಕೀಲ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಈ ವಿಷಯವನ್ನು ಈಗಾಗಲೇ ನಾಳೆಗೆ ಪಟ್ಟಿ ಮಾಡಲಾಗಿದೆ” ಎಂದರು.

ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್‌ಐಟಿ ತಂಡ ನಡೆಸುತ್ತಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್ ಡಿ ಬೆಂಗಳೂರಿನ ನ್ಯಾಯಾಲಯ ಮೊರೆ ಹೋಗಿದ್ದರು.

ನ್ಯಾಯಾಲಯ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಮಾಧ್ಯಮಗಳು ಧರ್ಮಸ್ಥಳ ದೇವಾಲಯ ಮತ್ತು ಅದರ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ನಿರ್ಬಂಧ (ಗ್ಯಾಗ್ ಆರ್ಡರ್) ವಿಧಿಸಿತ್ತು. ಈ ನಿರ್ಬಂಧವನ್ನು ಆಗಸ್ಟ್ 1ರಂದು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಬೆಂಗಳೂರು ನ್ಯಾಯಾಲಯದ ಆದೇಶದ ರದ್ದುಗೊಳಿಸುವ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು,”ವಿಚಾರಣಾ ನ್ಯಾಯಾಲಯವು ಯಾವುದೇ ಆಪಾದಿತ ಮಾನನಷ್ಟ ವಿಷಯವನ್ನು ಆಧರಿಸಿ ಆದೇಶ ನೀಡಿಲ್ಲ. ‘ಕಡ್ಡಾಯ ವ್ಯಾಪಕ ತಡೆಯಾಜ್ಞೆ ನೀಡಿದೆ’ ಎಂಬುವುದನ್ನು ಗಮನಿಸಿತ್ತು. ಈ ಆದೇಶವು ಎಷ್ಟು ವಿಶಾಲವಾಗಿದೆಯೆಂದರೆ, ಪ್ರತಿವಾದಿ ಹರ್ಷೇಂದ್ರ ಕುಮಾರ್ ಡಿ, ಅವರ ಕುಟುಂಬ ಅಥವಾ ಧರ್ಮಸ್ಥಳ ಸ್ಥಳದ ವಿರುದ್ಧ ಯಾವುದೇ ವಿಷಯಗಳನ್ನು ಮಾತನಾಡದಂತೆ ಬೆದರಿಕೆಯೊಡ್ಡುತ್ತದೆ” ಎಂದಿತ್ತು.

ನಿರ್ದಿಷ್ಟವಾಗಿ ‘ಕುಡ್ಲ ರಾಂಪೇಜ್’ ಯೂಟ್ಯೂಬ್ ಚಾನೆಲ್‌ ಮೇಲಿನ ನಿರ್ಬಂಧ ತೆರವು ಪ್ರಶ್ನಿಸಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಹರ್ಷೇಂದ್ರ ಕುಮಾರ್ ಪರ ವಕೀಲರು 8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ ಎಂದು ಸಿಜೆಐ ಪೀಠದ ಮುಂದೆ ಹೇಳಿದ್ದಾರೆ. ಹಾಗಾಗಿ, ಕುಡ್ಲ ರಾಂಪೇಜ್ ವಿರುದ್ದ ಮಾತ್ರ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರಾ? ಎಲ್ಲಾ ಮಾಧ್ಯಮಗಳ ವಿರುದ್ದ ಅರ್ಜಿ ಸಲ್ಲಿಸಿದ್ದಾರಾ? ಎಂಬುವುದು ನಮಗೆ ಸ್ಪಷ್ಟವಾಗಿಲ್ಲ.

Courtesy : livelaw.in

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...