Homeಮುಖಪುಟಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿದರು. ರೈತರ ಒಂದು ಗುಂಪು ಉದ್ದೇಶಿತ ಮಾರ್ಗ ಬಿಟ್ಟು ಕೆಂಪು ಕೋಟೆಗೆ ರ್ಯಾಲಿ ನಡೆಸಿತು. ಅಲ್ಲದೇ ಕೋಟೆಯ ಮೇಲೆ ಹತ್ತಿದ ರೈತರು ರೈತ ಧ್ವಜ ಮತ್ತು ಸಿಖ್ ರಿಗೆ ಪವಿತ್ರ ಎಂದು ಭಾವಿಸುವ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು. ಆದರೆ ಕೆಲ ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಆರೋಪಿಸಿ ಸುಳ್ಳು ಸುದ್ದಿ ಮಾಡಿವೆ.

ಟೈಮ್ಸ್ ನೌ ಆಂಗ್ಲ ಮಾಧ್ಯಮ “ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ, ರೈತರು ಭಾರತದ ರಾಷ್ಟ್ರ ಚಿಹ್ನೆಗಳಿಗೆ ಅವಮಾನ ಮಾಡಿದ್ದಾರೆ” ಎಂದು ಸುದ್ದಿ ಮಾಡಿದೆ. ಆದರೆ ಈ ಪ್ರತಿಪಾದನೆ ತಪ್ಪಾಗಿದೆ. ಇಂದು ಕೆಂಪು ಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜ ಎತ್ತರದಲ್ಲಿ ಹಾರಾಡುತ್ತಿದೆ. ಅದಕ್ಕೆ ರೈತರು ಯಾವುದೇ ಹಾನಿ ಮಾಡಿಲ್ಲ. ಬದಲಿಗೆ ಅದರ ಪಕ್ಕದಲ್ಲಿದ್ದ ಚಿಕ್ಕ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜಗಳನ್ನು ಹಾರಿಸಿದ್ದಾರೆ.

Photo Courtesy: Wikipedia

ಈ ಮೇಲಿನ ಹಳೆಯ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾವು ಗಮನಿಸಬಹುದು. ಹಾಗೆಯೇ ಇಂದು ರೈತರು ನಿಶಾನ್ ಸಾಹಿಬ್ ಧ್ವಜ ಹಾರಿಸಲಾದ ಕಂಬ ಖಾಲಿ ಇರುವುದನ್ನೂ ಗಮನಿಸಿ. ರಾಷ್ಟ್ರಧ್ವಜಕ್ಕಿಂತ ಕೆಳಭಾಗದ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ. ಈ ಕೆಳಗಿನ ಚಿತ್ರ ನೋಡಿ. (ರಾಷ್ಟ್ರಧ್ವಜಕ್ಕಿಂತ ಕೆಳಭಾಗದಲ್ಲಿ ಬೇರೆ ಧ್ವಜಗಳನ್ನು ಹಾರಿಸುವುದು ಕಾನೂನು ಸಮ್ಮತ. ಬೇರೆ ದೇಶದ ಪ್ರಧಾನಿಗಳು ಬಂದಾಗ ರಾಷ್ಟ್ರಧ್ವಜದ ಪಕ್ಕದಲ್ಲೇ ವಿದೇಶದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ.)

ಇನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಂಪು ಕೋಟೆಯ ಮೇಲೆ ಖಾಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅದು ಸಂಪೂರ್ಣ ಸುಳ್ಳಾಗಿದೆ. ಇಂದು ರೈತರು ತ್ರಿವರ್ಣ ಧ್ವಜಕ್ಕಿಂತ ಕೆಳಭಾಗದಲ್ಲಿ ರೈತಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ.

ನಿಶಾನ್ ಸಾಹಿಬ್ ಎಂಬುದು ಸಿಖ್ಖರ ಪವಿತ್ರ ಧ್ವಜ ಎಂದು ಹೆಸರು ಪಡೆದಿದೆ. ಖಾಲ್ಸಾದ ನೆನಪಿಗಾಗಿ ಅದನ್ನು ಪ್ರತಿ ಗುರುದ್ವಾರದ ಆವರಣದಲ್ಲಿ ಹಾರಿಸಲಾಗುತ್ತದೆ. ಇನ್ನು ಖಾಲ್ಸಾಗೂ ಖಾಲಿಸ್ತಾನ್ ಚಳವಳಿಗೂ ಯಾವುದೇ ಸಂಬಂಧವಿಲ್ಲ. ಅಮೃತಸರದ ಹರ್‌ಮಂದಿರ್ ಸಾಹಿಬ್ ಕಾಂಪ್ಲೆಕ್ಸ್ ಗುರುದ್ವಾರದ ಎದುರು ನಿಶಾನ್ ಸಾಹಿಬ್ ಹಾರಾಡುವುದನ್ನು ಈ ಕೆಳಗಿನ ಚಿತ್ರದಲ್ಲಿ ನೋಡಬಹುದು.

Photo Courtesy: Wikipedia

ನಿಶಾನ್ ಸಾಹಿಬ್ ತ್ರಿಕೋನಾಕಾರದ ಬಾವುಟವಾಗಿದೆ ಮತ್ತು ಖಾಲಿಸ್ತಾನ ಬಾವುಟಕ್ಕೂ ಅದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಖಾಲಿಸ್ತಾನಿ ಧ್ವಜ ಆಯಾತಾಕಾರದಲ್ಲಿದ್ದು ಅದರ ಬಾವುಟವನ್ನು ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಖಾಲಿಸ್ತಾನಿ ಧ್ವಜ. Photo Courtesy: Gurvinder Singh

ನಿಶಾನ್ ಸಾಹಿಬ್ ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಅಪಾರ ಮಹತ್ವದ್ದಾಗಿದೆ. ಒಟ್ಟಿನಲ್ಲಿ ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ. ಮತ್ತು ರೈತರು ಕೆಳಗಡೆ ಹಾರಿಸಿದ ಧ್ವಜ ಖಾಲಿಸ್ತಾನಿ ಧ್ವಜ ಅಲ್ಲ. ಹಾಗೂ ರೈತ ಹೋರಾಟಕ್ಕೂ ಖಾಲಿಸ್ತಾನಿಗಳಿಗೂ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...