Homeಮುಖಪುಟರಾಜಸ್ಥಾನ: ಮತ್ತೋರ್ವ ನೀಟ್ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ

ರಾಜಸ್ಥಾನ: ಮತ್ತೋರ್ವ ನೀಟ್ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ರಾಜಸ್ಥಾನದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು,  ಮತ್ತೋರ್ವ ನೀಟ್ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ  ಸಿಕಾರ್‌ನಲ್ಲಿ ನಡೆದಿದೆ.

ವೈದ್ಯಕೀಯ ಕೋರ್ಸ್‌ ಪ್ರವೇಶಾತಿಗೆ ನೀಟ್ ಪರೀಕ್ಷೆ ಆಕಾಂಕ್ಷಿಯಾಗಿದ್ದ ರೈಸಾನಾ ಗ್ರಾಮದ ಕೌಶಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕೌಶಲ್ ಕುಮಾರ್  ಸಿಕಾರ್‌ನಲ್ಲಿರುವ  ಪ್ರತಿಷ್ಠಿತ ಅಲೆನ್  ಕೋಚಿಂಗ್ ಸೆಂಟರ್‌ನಲ್ಲಿ ನೀಟ್‌ಗೆ ಕೋಚಿಂಗ್ ತೆಗೆದುಕೊಳ್ಳುತ್ತಿದ್ದರು.

ಕಳೆದ ಕೆಲವು ವರ್ಷಗಳಿಂದ ರಾಜಸ್ಥಾನದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜಸ್ಥಾನದ ಕೋಚಿಂಗ್ ಹಬ್ ಎಂದು ಕರೆಯಲ್ಪಡುವ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ ಹೆಚ್ಚಳವಾಗಿದ್ದು, 2023ರಲ್ಲಿ ರಾಜಸ್ಥಾನದ ಕೋಟಾದಲ್ಲಿ 22 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರಲ್ಲಿ ಆ.27ರಂದು ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಜೆಇಇ,  ನೀಟ್, ಯುಪಿಎಸ್ಸಿಯಂತಹ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ವಾರ್ಷಿಕ  2.5 ಲಕ್ಷ  ವಿದ್ಯಾರ್ಥಿಗಳು ಕೋಟಕ್ಕೆ  ಬಂದು  ತರಬೇತಿ  ಕೇಂದ್ರಗಳಿಗೆ ದಾಖಲಾಗುತ್ತಾರೆ. ಕಳೆದ ಕೆಲ ವರ್ಷಗಳಲ್ಲಿ ವಿದ್ಯಾರ್ಥಿಗಳು ಇದೇ ಪ್ರದೇಶಗಳಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿದ್ದಂತೆ ವಿದ್ಯಾರ್ಥಿಗಳು ಖಿನ್ನತೆ, ಒತ್ತಡಕ್ಕೆ ಒಳಗಾಗಿದ್ದಾರೆಯೇ ಎಂಬುವುದನ್ನು ಪತ್ತೆ ಹಚ್ಚಲು ವಾರ್ಡನ್‌ಗಳು, ಮೆಸ್ ಕೆಲಸಗಾರರು ಮತ್ತು  ಆಹಾರ ಪೂರೈಕೆದಾರರನ್ನು ನಿಯೋಜಿಸಲಾಗುತ್ತಿದೆ. ಈ ಮಧ್ಯೆ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿ: ಯುಪಿ ಉಪಚುನಾವಣೆ: ಮತದಾರರಿಗೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ; ಶಿವಪಾಲ್ ಯಾದವ್‌ 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...