Homeಮುಖಪುಟಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದುದರ ಪರಿಣಾಮವಾಗಿ ಭಾರತಕ್ಕೆ ಮರಳಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಭಾರತದ ವಿವಿಗಳಲ್ಲಿ ಸೀಟು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಭಾರತದ ವೈದ್ಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಉಂಟಾಗುವುದರಿಂದ ಆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಇಲ್ಲಿನ ನೀಟ್‌ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿದ ಮತ್ತು ಅಗ್ಗದ ವೈದ್ಯಕೀಯ ವೆಚ್ಚದ ಕಾರಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್‌ನಂತಹ ರಾಷ್ಟ್ರಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಕಳಪೆ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ನಾವು ಪ್ರವೇಶ ನೀಡಿದ್ದೆ ಆದರೆ ಅದು ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಗುಣಮಟ್ಟ ಕಾಪಾಡುವ ಕುರಿತು ನಿರ್ದೇಶನ ನೀಡಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಈ ವಿದ್ಯಾರ್ಥಿಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದರೂ ಸಹ ಆ ಕಾಲೇಜುಗಳ ಶುಲ್ಕವನ್ನು ಭರಿಸಲು ಅವರು ಶಕ್ತರಾಗಿಲ್ಲ ಎಂದೂ ಸಹ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಜಸ್ಟೀಸ್ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯ ನೇತೃತ್ವದ ಪೀಠವು ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹಲವಾರು ವಿರೋಧಭಾಸಗಳಿರುವುದು ಮೇಲ್ನೋಟಕ್ಕೆ ಕಂಡುಬರುವಂತಿದೆ ಎಂದು ಹಲವರು ಪ್ರಶ್ನಿಸಿದ್ದಾರೆ. ಒಂದು ಕಡೆ ನೀಟ್‌ನಲ್ಲಿ ಉತ್ತಮ ಅಂಕ ಗಳಿಸಿಲ್ಲ ಎಂದು ಹೇಳುವ ಸರ್ಕಾರ ಮ್ಯಾನೇಜ್‌ಮೆಂಟ್ ಕೋಟಾಗಳಿಗೆ ಕಳಪೆ ನೀಟ್ ಅಂಕಗಳನ್ನು ಮಾನದಂಡವಾಗಿ ನಿರ್ಧರಿಸಿರುವುದು ಏಕೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಉಕ್ರೇನ್‌ನಿಂದ ಮರಳಿದ ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕೇಂದ್ರ ಸರ್ಕಾರ ವಿದೇಶಗಳಲ್ಲಿ ಅಗ್ಗದ ಶಿಕ್ಷಣ ದೊರೆಯುತ್ತದೆ ಎಂದು ಹೇಳಿದೆ. ಆದರೆ ಭಾರತದಲ್ಲಿಯೇ ನಮಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ಕೊಡಲು ಅದು ಏಕೆ ಮುಂದಾಗುತ್ತಿಲ್ಲ? ಖಾಸಗೀ ಕಾಲೇಜುಗಳು ಅಧಿಕ ಶುಲ್ಕ ವಸೂಲಿ ಮಾಡಲು ಏಕೆ ಅವಕಾಶ ನೀಡುತ್ತಿದೆ? ನೀಟ್ ಪರೀಕ್ಷೆಯಲ್ಲಿ ನಮಗಿಂತಲೂ ಕಡಿಮೆ ಅಂಕ ಪಡೆದವರು ಮ್ಯಾನೇಜ್‌ಮೆಂಟ್ ಕೋಟಾದಲ್ಲಿ ವೈದ್ಯಕೀಯ ಸೀಟು ಪಡೆಯುತ್ತಿರುವಾಗ, ನಮಗೆ ಸೀಟು ನೀಡಿದರೆ ಶಿಕ್ಷಣದ ಗುಣಮಟ್ಟ ಕಡಿಮೆಯಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಕಡಿಮೆ ವೆಚ್ಚಕ್ಕೆ ವೈದ್ಯಕೀಯ ಶಿಕ್ಷಣ ಸಿಕ್ಕಿದ್ದರೆ ನಾವು ಯಾರೂ ವಿದೇಶಗಳಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಅಲ್ಲದೆ ನಾವು ಉಕ್ರೇನ್‌ನಿಂದ ಶಿಕ್ಷಣ ಮೊಟಕುಗೊಳಿಸಿ ವಾಪಸ್ ಬರಲು ಯುದ್ಧ ಕಾರಣವೆ ಹೊರತು ನಾವಲ್ಲ. ಹಾಗಾಗಿ ನಾವು ಇಲ್ಲಿಯ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸುವುದು ನಮ್ಮ ಹಕ್ಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...