Homeಮುಖಪುಟಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

- Advertisement -
- Advertisement -

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಶನಿವಾರ (ಜನವರಿ 31) ಬೆಳಿಗ್ಗೆ 6.30 ರ ಸುಮಾರಿಗೆ ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದಿದ್ದರು. ಅಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಿಗಾದಲ್ಲಿರಿಸಲಾಗಿತ್ತು. ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರನ್ನು ಪರೀಕ್ಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಏಮ್ಸ್ ಮೂಲಗಳ ಪ್ರಕಾರ, ವಾಂಗ್‌ಚುಕ್ ಅವರು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದು, ದೇಹದ ಹಲವಾರು ಭಾಗಗಳಲ್ಲಿ ನೋವಿನ ಬಗ್ಗೆಯೂ ಹೇಳಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ, ಅವರನ್ನು ಬಿಗಿ ಭದ್ರತೆಯಲ್ಲಿ ಜೋಧ್‌ಪುರ ಕೇಂದ್ರ ಕಾರಾಗೃಹಕ್ಕೆ ವಾಪಸ್ ಕರೆದೊಯ್ಯಲಾಗಿದೆ.

ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಅವರ ಪತ್ನಿ ಕಳವಳ ವ್ಯಕ್ತಪಡಿಸಿದ್ದು, ಅವರ ಆರೋಗ್ಯ ಸ್ಥಿತಿ ನಿರಂತರವಾಗಿ ಹದಗೆಡುತ್ತಿರುವುದನ್ನು ಉಲ್ಲೇಖಿಸಿ ಹಿರಿಯ ವಕೀಲ ಕಪಿಲ್ ಸಿಬಲ್ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ (ಜನವರಿ 29) ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠವು, ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರಿಂದ ವಾಂಗ್‌ಚುಕ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಜೈಲು ಆಡಳಿತಕ್ಕೆ ನಿರ್ದೇಶನ ನೀಡಿತ್ತು.

ಜೈಲಿನಲ್ಲಿ ನೀಡಲಾಗುವ ಕುಡಿಯುವ ನೀರಿನ ಗುಣಮಟ್ಟದಿಂದಾಗಿ ವಾಂಗ್‌ಚುಕ್ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವಕೀಲ ಸಿಬಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪದೇ ಪದೇ ದೂರು ನೀಡಿದ್ದರೂ, ಅವರ ಚಿಕಿತ್ಸೆಗೆ ಯಾವುದೇ ತಜ್ಞರು ಅಲ್ಲಿ ಲಭ್ಯವಿಲ್ಲ ಎಂದಿದ್ದರು.

ವಾಂಗ್‌ಚುಕ್‌ ಅವರಿಗೆ ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ ನಡೆಸಬೇಕು ಮತ್ತು ಅವರ ಕುಟುಂಬವು ಪೂರೈಸುವ ಶುದ್ಧ ಕುಡಿಯುವ ನೀರನ್ನು ಅನುಮತಿಸಬೇಕು ಎಂದು ಸಿಬಲ್ ನ್ಯಾಯಾಲಯವನ್ನು ಕೋರಿದ್ದರು.

ಫೆಬ್ರವರಿ 2 ರೊಳಗೆ ವಾಂಗ್‌ಚುಕ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ವಾಂಗ್‌ಚುಕ್ ಪತ್ನಿಯ ಅರ್ಜಿ ವಿಚಾರಣೆ ವೇಳೆ ರಾಜಸ್ಥಾನ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್, ವಾಂಗ್‌ಚುಕ್ ನಿಯಮಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಜೈಲು ವೈದ್ಯರು 21 ಬಾರಿ ತಪಾಸಣೆ ನಡೆಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ ಲೇಹ್‌ನಲ್ಲಿ ಪ್ರತಿಭಟನೆಗಳು ನಡೆದ ನಂತರ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ.

ಲೇಹ್‌ನ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು ನಾಲ್ವರು ಸಾವನ್ನಪ್ಪಿದ್ದರು. ಕಠಿಣ ಕಾನೂನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿತರಾಗಿರುವ ವಾಂಗ್‌ಚುಕ್ 100 ದಿನಗಳಿಗೂ ಹೆಚ್ಚು ಸಮಯವನ್ನು ಜೈಲಿನಲ್ಲಿ ಕಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...