Homeಕರ್ನಾಟಕಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

- Advertisement -
- Advertisement -

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಸರ್ಕಾರದ ಬದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೋರಿದ್ದು, ನೆರೆಯ ತಮಿಳುನಾಡು ಜೊತೆ ಮಾತುಕತೆಯನ್ನು ತಳ್ಳಿಹಾಕಿದ್ದಾರೆ.

ಕಾನೂನು ಕುರಿತು ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ಕರೆಯುವುದಾಗಿ ಬೊಮ್ಮಾಯಿ ಮಂಗಳವಾರ ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ಷೇಪ ಎತ್ತಿದ್ದು, ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಬೊಮ್ಮಾಯಿ ಅವರ ಘೋಷಣೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್, ಅಣೆಕಟ್ಟು ಕಟ್ಟಲು ಒಂದೇ ಒಂದು ಇಟ್ಟಿಗೆ ಇಡಲೂ ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

“ಕರ್ನಾಟಕ ಸರ್ಕಾರ ಯೋಜನೆಗಾಗಿ 1,000 ಕೋಟಿ ರೂಪಾಯಿಯಲ್ಲ; 5,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟರೂ ಒಂದು ಇಟ್ಟಿಗೆ ಇಡಲು ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ವಾಸ್ತವ ಸ್ಥಿತಿಗತಿ ಎಲ್ಲರಿಗೂ ಗೊತ್ತಿದ್ದು, ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಬೇಕಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ವಿಸ್ತೃತ ಯೋಜನಾ ವರದಿ (ಡಿಪಿಆರ್) ಅನುಮೋದನೆ, ಪರಿಸರಕ್ಕೆ ಸಂಬಂಧಿಸಿದ ಅನುಮತಿಯನ್ನು ಕೇಂದ್ರ ಸರ್ಕಾರದಿಂದ ಪಡೆದ ನಂತರ ಕಾಮಗಾರಿಗೆ ಚಾಲನೆ ನೀಡುವುದು ಕರ್ನಾಟಕದ ಮುಂದಿರುವ ಕೆಲಸ ಎಂದು ಬೊಮ್ಮಾಯಿಯವರು ತಿಳಿಸಿದ್ದು, ಕಾನೂನು ಪರಿಣಾಮಗಳ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಬಹುಶಃ ಈ ವಾರವೇ ಸರ್ವಪಕ್ಷ ಸಭೆಯನ್ನು ಕರೆಯಲಾಗುವುದು ಎಂದಿದ್ದಾರೆ.

ನ್ಯಾಯಮಂಡಳಿ ಸೂಚನೆಯಂತೆ ತಮಿಳುನಾಡಿಗೆ ಬಾಕಿ ನೀರು ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸ್ಪಷ್ಟ. ಅದರ ಹೊರತು ನಮಗೆ ಬೇರೆ ಯಾವುದೇ ಜವಾಬ್ದಾರಿ ಇಲ್ಲ. ಆದರೆ ತಮಿಳುನಾಡು ವಿವಿಧ ಅರ್ಜಿಗಳನ್ನು ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ತಜ್ಞರಿಂದ ಮಾಹಿತಿ ಪಡೆದು ಮೇಕೆದಾಟು ಕೆಲಸವನ್ನು ಆದಷ್ಟು ಬೇಗ ಪ್ರಾರಂಭಿಸಲು ನಾವೆಲ್ಲರೂ ನಿರ್ಧರಿಸೋಣ ಎಂದು ಸ್ಪಷ್ಟಪಡಿಸಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡಿನ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯ ಪೀಠವು ಈ ಹಿಂದೆ ಯೋಜನೆಗೆ ತಡೆ ನೀಡಿದೆ. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಯಾವುದೇ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದ್ದು, ಅಲ್ಲಿ ರಾಜಕೀಯ ಪ್ರಾಮುಖ್ಯತೆ ಪಡೆಯುತ್ತಿದೆ ಎಂದಿರುವ ಬೊಮ್ಮಾಯಿ, ‘ಕುಡಿಯುವ ನೀರಿಗೂ ಅವರು ವಿರೋಧಿಸುತ್ತಾರೆ, ಹೀಗಾಗಿ ಅವರ ಕೆಲವು ಯೋಜನೆಗಳಿಗೆ ನಾವೂ ಆಕ್ಷೇಪ ವ್ಯಕ್ತಪಡಿಸಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

ಕೇಂದ್ರ ಸಚಿವರು ಪ್ರಸ್ತಾಪಿಸಿದಂತೆ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಮಾತುಕತೆ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. “ಡಿಪಿಆರ್ ಅನುಮೋದನೆ ಮತ್ತು ಪರಿಸರ ಅನುಮತಿ ಪಡೆಯುವುದು ನಮ್ಮ ಮುಂದಿರುವ ಏಕೈಕ ಕಾರ್ಯಸೂಚಿಯಾಗಿದೆ” ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿರುವುದನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯನವರು, “2018ರಲ್ಲಿ ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವ ಹಕ್ಕಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯ ವರ್ಷದಲ್ಲಿ 177.75 ಟಿಎಂಸಿ ನೀರಿನ ಜತೆಗೆ ಕಳೆದ ಏಳು ವರ್ಷಗಳಲ್ಲಿ 582 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಬಂದಿದೆ. ತಮಿಳುನಾಡಿಗೆ ಹರಿದು ಸಮುದ್ರ ಸೇರುವ ಹೆಚ್ಚುವರಿ ನೀರು ನಮ್ಮದು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು, ಕರ್ನಾಟಕಕ್ಕೂ ಒಂದು ಪ್ರಮಾಣದ ನೀರು ಹಂಚಿಕೆಯಾಗಿದೆ. ಹೆಚ್ಚುವರಿ ನೀರು ಕರ್ನಾಟಕಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ ಎಂದರು.

ಅದನ್ನು ತಿರಸ್ಕರಿಸಿದ ಸಿದ್ದರಾಮಯ್ಯ, ಯೋಜನೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇಲ್ಲ. “ನನ್ನ ಪ್ರಕಾರ ತಮಿಳುನಾಡು ರಾಜಕೀಯ ಮತ್ತು ವೋಟ್‌ಗಾಗಿ ಯೋಜನೆಯನ್ನು ವಿರೋಧಿಸುತ್ತಿದೆ. ಕಾನೂನು, ಸಾಂವಿಧಾನಿಕವಾಗಿ ಅವರಿಗೆ ಯಾವುದೇ ಹಕ್ಕಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...