Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...