Homeಮುಖಪುಟಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಕೈ ತಪ್ಪಿದ ಟಿಕೆಟ್: ಮಂಗಳೂರಿನ ಬಿಜೆಪಿ ಕಾರ್ಯಕ್ರಮ ಮುಂದೂಡಿಕೆ

ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಕೈ ತಪ್ಪಿದ ಟಿಕೆಟ್: ಮಂಗಳೂರಿನ ಬಿಜೆಪಿ ಕಾರ್ಯಕ್ರಮ ಮುಂದೂಡಿಕೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ, ಅವರು ಭಾಗವಹಿಸಬೇಕಿದ್ದ ಮಂಗಳೂರಿನ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಇಂದು (ಮಾರ್ಚ್‌ 4) ಮಂಗಳೂರಿನ ಸಂಘನಿಕೇತನದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ಆಹ್ವಾನಿಸಲಾಗಿತ್ತು. ಅವರು ಭಾಗಿಯಾಗುವುದು ಖಚಿತವಾಗಿತ್ತು. ಆದರೆ, ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ಬಗ್ಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಮೊದಲ ಹಂತದಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಒಬ್ಬರು. ನವದೆಹಲಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿರುವ ಮೀನಾಕ್ಷಿ ಲೇಖಿ ಬದಲು, ಈ ಬಾರಿ ಮಾಜಿ ಕೇಂದ್ರ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರಿಗೆ ಟಿಕೆಟ್ ನೀಡಲಾಗಿದೆ.

ರಾಜ್‌ದೀಪ್ ರಾಯ್, ಹೋರೆನ್ ಸಿಂಗ್ ಬೇ, ಪಲ್ಲಬ್ ಲೋಚನ್ ದಾಸ್, ರಾಮೇಶ್ವರ್ ತೇಲಿ, ಗುಹರಾಮ್ ಅಜ್ಗಲ್ಲಿ, ಸುನಿಲ್ ಕುಮಾರ್ ಸೋನಿ, ಚುನ್ನಿ ಲಾಲ್ ಸಾಹು, ಮೋಹನ್ ಮಾಂಡವಿ, ಮಾಜಿ ಕೇಂದ್ರ ಸಚಿವ ಹರ್ಷವರ್ಧನ್, ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಮೀನಾಕ್ಷಿ ಲೇಖಿ, ರಮೇಶ್ ಬಿಧುರಿ ಸೇರಿದಂತೆ ಒಟ್ಟು 33 ಹಾಲಿ ಸಂಸದರಿಗೆ 2024ರ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹರ್ಷವರ್ಧನ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಅತ್ತ ಪಶ್ಚಿಮ ಬಂಗಾಳದ ಅಸನ್ಸೋಲ್‌ ಕ್ಷೇತ್ರದ ಟಿಕೆಟ್ ಪಡೆದಿದ್ದ ಭೋಜ್‌ಪುರಿ ನಟ, ಗಾಯಕ ಪವನ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪವನ್ ಸಿಂಗ್ ವಿರುದ್ದ ಚಿತ್ರಗಳಲ್ಲಿ ಬೆಂಗಾಲಿ ಮಹಿಳೆಯರನ್ನು ಕೀಳಾಗಿ ತೋರಿಸಿದ ಆರೋಪವಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತವು ದ್ವೀಪ ರಾಷ್ಟ್ರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಬಯಸುತ್ತಿದೆ: ಮಾಲ್ಡೀವ್ಸ್ ಸಚಿವ

0
ಮಾಲ್ಡೀವ್ಸ್‌ನೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ರಚಿಸಲು ಭಾರತವು ಪ್ರಯತ್ನಗಳನ್ನು ಪ್ರಾರಂಭಿಸಿದೆ ಎಂದು ಮಾಲ್ಡೀವ್ಸ್ ಸಚಿವ ಮೊಹಮ್ಮದ್ ಸಯೀದ್ ಹೇಳಿದ್ದಾರೆ. ಮಾಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಥಿಕ ಅಭಿವೃದ್ಧಿ ಮತ್ತು ವ್ಯಾಪಾರ ಸಚಿವ ಸಯೀದ್, "ಎಫ್‌ಟಿಎಗೆ...