Homeಮುಖಪುಟಮೀರತ್‌| ಬೈಕ್ ಮಾರಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮೀರತ್‌| ಬೈಕ್ ಮಾರಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

- Advertisement -
- Advertisement -

ದಾರಿ ತಪ್ಪಿದ ತನ್ನ ಸ್ನೇಹಿತರೊಂದಿಗೆ ಸುಖಾಸುಮ್ಮನೆ ಸುತ್ತಾಡುತ್ತಾನೆ ಎಂದು ಕುಟುಂಬದ ಸದಸ್ಯರು ಬೈದು, ಬುಲೆಟ್ ಬೈಕ್ ಮಾರಿದ್ದಕ್ಕೆ ಮನನೊಂದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ತನ್ನ ಸಹಚರರೊಂದಿಗೆ ಸುತ್ತಾಡುವುದನ್ನು ತಡೆಯಲು ತನ್ನ ತಾಯಿ ಮತ್ತು ಅಣ್ಣ ತನ್ನ ಮೋಟಾರ್ ಸೈಕಲ್ ಅನ್ನು ಮಾರಿದ ನಂತರ, ಹದಿಹರೆಯದ ಬಾಲಕ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾನೆ.

ವೈದ್ಯಕೀಯ ಕಾಲೇಜಿನಲ್ಲಿ ನರ್ಸ್ ಆಗಿರುವ ಬಾಲಕನ ತಾಯಿ ಜನವರಿ 12 ರ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಹಿರಿಯ ಮಗನೊಂದಿಗೆ ಮನೆಗೆ ಮರಳಿದರು. ಅವರು ಬಂದಾಗ, ಕಿರಿಯ ಮಗ ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ, ಅವನು ತನ್ನ ಕೋಣೆಗೆ ಹೋಗಿ ಗುಂಡು ಹಾರಿಸಿಕೊಂಡಿದ್ದಾನೆ.

ಕುಟುಂಬ ಸದಸ್ಯರು ಕೋಣೆಗೆ ಪ್ರವೇಶಿಸಲು ಪ್ರಯತ್ನಿಸಿದ್ದು, ಕಿಟಕಿ ಒಡೆದು ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನನ್ನು ಕಂಡಿದ್ದಾರೆ. ಕೂಡಲೇ ಅವನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಿ ಅವನು ಸತ್ತನೆಂದು ಘೋಷಿಸಲಾಯಿತು.

ಆತ್ಮಹತ್ಯೆಗೆ ಮುನ್ನ, ಹುಡುಗ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿ ‘ಸಾವಿನ ನಂತರ ಆತ್ಮಕ್ಕೆ ಏನಾಗುತ್ತದೆ’ ಎಂದು ಆನ್‌ಲೈನ್‌ನಲ್ಲಿ ಹುಡುಕಿದ್ದ ಎಂದು ವರದಿಯಾಗಿದೆ.

ಬುಲಂದ್‌ಶಹರ್ ಮೂಲದ ಈ ಕುಟುಂಬವು ಆರು ತಿಂಗಳ ಹಿಂದೆ ಅಪೆಕ್ಸ್ ಕಾಲೋನಿಯಲ್ಲಿ ಮನೆ ಖರೀದಿಸಿ ಮೀರತ್‌ಗೆ ಸ್ಥಳಾಂತರಗೊಂಡಿತ್ತು. ಒಂದು ವರ್ಷದ ಹಿಂದೆ ಅನಾರೋಗ್ಯದಿಂದ ಪತಿಯನ್ನು ಕಳೆದುಕೊಂಡ ತಾಯಿ, ತನ್ನ ಇಬ್ಬರು ಗಂಡು ಮಕ್ಕಳಾದ 17 ವರ್ಷದ ಹಿರಿಯ ಮಗ ಮತ್ತು ಮೃತ ಬಾಳಕನ್ನು ಏಕಾಂಗಿಯಾಗಿ ಬೆಳೆಸುತ್ತಿದ್ದರು.

ಪೊಲೀಸರು ಸ್ಥಳದಿಂದ ಪಿಸ್ತೂಲ್ ವಶಪಡಿಸಿಕೊಂಡರು. ತನಿಖೆಯ ಸಮಯದಲ್ಲಿ, ಕುಟುಂಬವು ಹದಿಹರೆಯದವರನ್ನು ಅವನ ವರ್ತನೆಗಾಗಿ ಹಲವು ಬಾರಿ ಗದರಿಸಿತ್ತು. ಕೆಟ್ಟ ಜನರೊಂದಿಗೆ ಸಂವಹನ ನಡೆಸುವುದನ್ನು ಮಿತಿಗೊಳಿಸಲು ಅವನ ಬುಲೆಟ್ ಬೈಕ್ ಅನ್ನು ಮಾರಾಟ ಮಾಡಿತ್ತು ಎಂದು ತಿಳಿದುಬಂದಿದೆ.

ಮೀರತ್ ಗ್ರಾಮೀಣ ಎಸ್‌ಪಿ ರಾಕೇಶ್ ಕುಮಾರ್ ಅವರು, ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕುಟುಂಬವು ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದರು.

HELPLINE NUMBER:

ಇದನ್ನೂ ಓದಿ; ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...