Homeದಲಿತ್ ಫೈಲ್ಸ್ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

- Advertisement -
- Advertisement -

ಆಗಸ್ಟ್ 2023 ರಲ್ಲಿ ಪ್ರಬಲ ಜಾತಿ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 21 ವರ್ಷದ ದಲಿತ ಮಹಿಳೆಯನ್ನು ನಂತರ ಸ್ಥಳೀಯ ಪಂಚಾಯತ್‌ನಲ್ಲಿ ರಾಜಿ ಮಾಡಿಕೊಳ್ಳಲು ಒತ್ತಾಯಿಸಲಾಯಿಸಿದ ಬಳಿಕ, ದೂರು ನೀಡಿದಂತೆ ₹2.5 ಲಕ್ಷಗಳನ್ನು ನೀಡಲಾಗಿತ್ತು.

ಆದರೆ, ಈ ರಾಜಿ-ಪಂಚಾಯ್ತಿಂದ ಆಕೆಯ ಸಂಕಷ್ಟ ಅಂತ್ಯವಾಗಲಿಲ್ಲ. ಕಿರುಕುಳ ಮತ್ತು ಸಾಮಾಜಿಕ ದಬ್ಬಾಳಿಕೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಕುಟುಂಬ ಊರನ್ನೇ ಬಿಟ್ಟು ಬೇರೆಡೆ ಜೀವನ ಕಂಡುಕೊಂಡಿದ್ದರು. ದೂರದ ಊರಲ್ಲಿ ಸದ್ದಿಲ್ಲದೆ ಆಕೆಯ ಮದುವೆ ಏರ್ಪಡಿಸಿದಾಗ, ಆರೋಪಿಯು ಅದರ ಬಗ್ಗೆ ತಿಳಿದುಕೊಂಡು ಲೈಂಗಿಕ ದೌರ್ಜನ್ಯದ ವೀಡಿಯೊವನ್ನು ವರನ ಕುಟುಂವಕ್ಕೆ ಕಳುಹಿಸಿದ್ದಾನೆ. ಪರಿಣಾಮ, ಆಕೆಯ ನಿಶ್ಚಿತಾರ್ಥದ ನಂತರ ಮದುವೆಯನ್ನು ರದ್ದುಗೊಳಿಸಲಾಯಿತು.

ಮದುವೆ ರದ್ದಾದ ಬಳಿಕ ಆಕೆಯ ಕುಟುಂಬದ ಸ್ಥಿತಿ ಇನ್ನೂ ಕೆಟ್ಟದಾಗಿದೆ; ಆರೋಪಿಯ ಕುಟುಂಬವು ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತು. ಆಗ ಸಂತ್ರಸ್ತೆ ತಂದೆ, ಒತ್ತಡ ಮತ್ತು ಬೆದರಿಕೆಗಳನ್ನು ಸಹಿಸಲಾರದೆ, ಹಾಪುರ್ ಪೊಳಿಸ್ ವರಿಷ್ಠಾಧಿಕಾರಿ ಕುನ್ವರ್ ಜ್ಞಾನಂಜಯ್ ಸಿಂಗ್ ಅವರನ್ನು ಭೇಟಿಯಾದರು. ಅಪರಾಧ ನಡೆದ ಸುಮಾರು ಎರಡು ವರ್ಷಗಳ ನಂತರ ಕಳೆದ ಗುರುವಾರ ಎಫ್‌ಐಆರ್ ದಾಖಲಿಸಲಾಯಿತು.

“ನನ್ನ ಮಗಳ ಮೇಲೆ ದೌರ್ಜನ್ಯ ನಡೆಸಿದ ನಂತರ, ಪಂಚಾಯತ್ ಕರೆಯಲಾಯಿತು, ಅಲ್ಲಿ ನಾವು ₹2.5 ಲಕ್ಷ ಗಳಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯಿಸಲಾಯಿತು. ನಾವು ಗ್ರಾಮವನ್ನು ಬಿಟ್ಟು ಬೇರೆ ಸ್ಥಳಕ್ಕೆ ಹೋದೆವು. ಇತ್ತೀಚೆಗೆ ನನ್ನ ಮಗಳ ಮದುವೆಯನ್ನು ಒಬ್ಬ ವ್ಯಕ್ತಿಯೊಂದಿಗೆ ಏರ್ಪಡಿಸಿದೆವು, ಆದರೆ ಆರೋಪಿಯು ನಿಶ್ಚಿತಾರ್ಥದ ದಿನ ಅಶ್ಲೀಲ ವೀಡಿಯೊ ಕಳುಹಿಸಿದನು. ಇದರಿಂದಾಗಿ ಆಕೆಯ ಮದುವೆಯನ್ನು ರದ್ದುಗೊಳಿಸಲಾಯಿತು; ಈಗ ನಾವು ಏನು ಮಾಡಬೇಕು” ಎಂದು ಪ್ರಶ್ನಿಸಿದ್ದಾರೆ.

ಆರೋಪಿಯ ಕುಟುಂಬವು ತನ್ನ ಮೇಲೆ ಇತ್ತೀಚೆಗೆ ಹಲ್ಲೆ ನಡೆಸಿ ಬಟ್ಟೆ ಬಿಚ್ಚಿತು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. “ಅವರು ಹಣವನ್ನು ಹಿಂತಿರುಗಿಸುವಂತೆ ನಮ್ಮ ಬಳಿಗೆ ಬಂದು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ನನ್ನ ಹೆಂಡತಿ ಅವರನ್ನು ವಿರೋಧಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಲಾಯಿತು. ಆರೋಪಿಯು ತನ್ನ ಬಟ್ಟೆಗಳನ್ನು ಹರಿದು ಹಾಕಿದನು” ಎಂದು ಯುವತಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

“ಆರಂಭಿಕ ಘಟನೆಯನ್ನು ನನಗೆ ವರದಿ ಮಾಡಲಾಗಿಲ್ಲ. ಈಗ, ಲಿಖಿತ ದೂರು ಬಂದಿದ್ದು, ಅದರ ನಂತರ ಐದು ಪುರುಷರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ದಾಳಿ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಫೀಜ್‌ಪುರ ಎಸ್‌ಎಚ್‌ಒ ಆಶಿಶ್ ಕುಮಾರ್ ಹೇಳಿದರು.

“ಈ ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟವರನ್ನು ಬಂಧಿಸಲಾಗುವುದು” ಎಂದು ಎಸ್‌ಎಚ್‌ಒ ಹೇಳಿದರು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...