Homeಮುಖಪುಟ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

- Advertisement -
- Advertisement -

ಆರ್‌ಎಸ್‌ಎಸ್‌ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಿದ ಮೀರತ್ ಕಾಲೇಜಿನ ಹಿರಿಯ ಪ್ರಾಧ್ಯಾಪಕರೊಬ್ಬರನ್ನು, ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ತನ್ನ ಎಲ್ಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸಗಳಿಂದ ಜೀವಮಾನದವರೆಗೆ ನಿಷೇಧಿಸಿದೆ. ಸಂಘಪರಿವಾರದ ಒತ್ತಡದ ಮೇರೆಗೆ ಪ್ರಾಧ್ಯಾಪಕರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದ ನಂತರ ಸರ್ಕಾರಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಸೀಮಾ ಪನ್ವರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆದ ಎರಡು ದಿನಗಳ ನಂತರ ಶುಕ್ರವಾರ ಎಬಿವಿಪಿ ಪ್ರತಿಭಟಿಸಿದೆ.

ಏಪ್ರಿಲ್ 2ರಂದು ನಡೆದ ಎರಡನೇ ಸೆಮಿಸ್ಟರ್ ರಾಜ್ಯಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ “ಧಾರ್ಮಿಕ ಮತ್ತು ಜಾತಿ ಆಧಾರಿತ ರಾಜಕೀಯದ ಬೆಳವಣಿಗೆಗೆ ಆರೆಸ್ಸೆಸ್ ಕೊಡುಗೆ” ಕುರಿತು ಪ್ರಶ್ನಿಸಲಾಗಿತ್ತು. ನಕ್ಸಲಿಯರು ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್‌ನಂತಹ ಸಂಘಟನೆಗಳ ಜೊತೆಗೆ ಆರೆಸ್ಸೆಸ್ ಅನ್ನು ಅದೇ ಪ್ರಶ್ನೆಯಲ್ಲಿ ಉಲ್ಲೇಖಿಸಲಾಗಿತ್ತು. ಇದು ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ ಎಂದು ವರದಿಗಳು ಹೇಳಿವೆ.

ಪ್ರೊಫೆಸರ್ ಸೀಮಾ ಪನ್ವರ್ ಅವರನ್ನು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕೆಲಸಗಳಿಂದ ಜೀವನಪರ್ಯಂತ ನಿಷೇಧಿಸಲಾಗಿದೆ ಎಂದು ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಧೀರೇಂದ್ರ ಕುಮಾರ್ ವರ್ಮಾ ಹೇಳಿದ್ದಾರೆ. ವಿವಾದದ ಬಗ್ಗೆ, ಸೀಮಾ ಪನ್ವಾರ್ ಅವರು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. “ಯಾರನ್ನೂ ನೋಯಿಸುವ ಉದ್ದೇಶದಿಂದ ತಾನು ಇದನ್ನು ಮಾಡಿಲ್ಲ” ಎಂದು ಅವರು ಲಿಖಿತವಾಗಿ ಹೇಳಿದ್ದಾರೆ ಎಂದು ವರ್ಮಾ ತಿಳಿಸಿದ್ದಾರೆ.

ನಕ್ಸಲಿಯರು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್‌ನಂತಹ ಸಂಘಟನೆಗಳ ಜೊತೆಗೆ ಆರ್‌ಎಸ್‌ಎಸ್ ಹೆಸರನ್ನು ಸೇರಿಸಿದ್ದಕ್ಕಾಗಿ ಪ್ರೊಫೆಸರ್ ಸೀಮಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಬಿವಿಪಿ ಸದಸ್ಯರು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿ ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಮುಸ್ಲಿಮರ ಮೇಲಿನ ದಾಳಿ ನಂತರ ಆರ್‌ಎಸ್‌ಎಸ್ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...