Homeಚಳವಳಿಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: SIO ಒತ್ತಾಯ

ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: SIO ಒತ್ತಾಯ

- Advertisement -
- Advertisement -

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸುವಂತೆ ಸರ್ಕಾರವನ್ನು ಎಸ್.ಐ.ಓ ಕರ್ನಾಟಕ ಒತ್ತಾಯಿಸಿದೆ.

ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,690 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು ವಿದ್ಯಾರ್ಥಿಗಳಿಗೆ ಹೇಗೆ ತಾನೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಎಸ್.ಐ.ಓ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿಯವರು ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಅನೇಕ ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದಿದ್ದು, ಎನ್ಇಟಿ/ಎಸ್ಎಲ್ಇಟಿ ಅಥವಾ ಪಿ.ಎಚ್ ಡಿ ಪಡೆದುಕೊಂಡಿರುವ ಅತಿಥಿ ಉಪನ್ಯಾಸಕರಿಗೆ ರೂ.13,000/- ಹಾಗೂ ಸ್ನಾತಕೋತ್ತರ/ಎಂ.ಫಿಲ್ ಪದವೀಧರ ಅತಿಥಿ ಉಪನ್ಯಾಸಕರಿಗೆ ರೂ.11,000/- ಗಳ ಮಾಸಿಕ ಗೌರವ ಸಂಭಾವನೆಯನ್ನು ನೀಡಲಾಗುತ್ತಿದೆ, ಆದರೆ ಈ ಗೌರವಧನವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ವರ್ಷದ ಎಂಟು ತಿಂಗಳು ಮಾತ್ರ ಕೊಡಲಾಗುತ್ತಿದ್ದು ಈ ಅಲ್ಪವೇತನ ಪಡೆದುಕೊಂಡು ಇಂದಿನ ಹಣದುಬ್ಬರದ ದಿನಮಾನಗಳಲ್ಲಿ ಅತಿಥಿ ಉಪನ್ಯಾಸಕರು ಸಂಸಾರವನ್ನು ನಡೆಸಲು ತೀರಾ ಕಷ್ಟವನ್ನು ಎದುರಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಜೊತೆಗೆ ಉದ್ಯೋಗ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಉಪನ್ಯಾಸಕರ ಅಳಲಿಗೆ ಸ್ಪಂದಿಸಬೇಕಾಗಿದೆ. ಅರೆಕಾಲಿಕ ಉಪನ್ಯಾಸಕರಾಗಿ ಅಥವಾ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಒದಗಿಸಬೇಕು ಮತ್ತು ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿಗಳ ಸೇವೆಯನ್ನು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಬೇಕು ಅಥವಾ ಸೇವಾ ಸಕ್ರಮಾತಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಭೋದನಾ ತರಗತಿಗಳನ್ನು ತೊರೆದು ಪ್ರತಿಭಟಿಸುತ್ತಿದ್ದಾರೆ, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಬಹಳಷ್ಟು ನಷ್ಟವಾಗಲಿದೆ, ಪಾಠ-ಕಲಿಕೆಯು ವಿಳಂಭವಾದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪ್ರಭಾವ ಬೀರುವ ಸಂಭವವಿದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನಕ್ಕೆ ಅನಾನುಕೂಲವಾಗಲಿದೆ, ಇದಲ್ಲದೆ ರಾಜ್ಯದ ಅನೇಕ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬನೆಯಾಗಿವೆ, ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...