ಬೆಂಗಳೂರು, ಅ.29: ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿನ ಅಲೆಮಾರಿ ಸಮುದಾಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಅ.31ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿಯೊAದಿಗೆ ಕೃಷ್ಣಾದಲ್ಲಿ ಸಭೆ ನಿಗಧಿಯಾಗಿದೆ ಎಂದು ಮೂಲಗಳು ತಿಳಿಸಿದೆ.
ಬುಧವಾರ ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಜಾರಿ ಮಾಡಲಿಕ್ಕೆ ಇರುವ ಸವಾಲುಗಳ ಕುರಿತು ಚರ್ಚಿಸುವ ಸಂದರ್ಭದಲ್ಲಿ ಸಿ.ಎಂ.ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯದ ಪ್ರತಿನಿಧಿಗಳನ್ನು ಕರೆಸಿ ಚರ್ಚಿಸಿದ್ದಾರೆ. ನಾಳಿದ್ದು(ಅ.31) ರಂದು ನಡೆಯುವ ಸಭೆಯಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹೋರಾಟಗಾರರು ದಿಲ್ಲಿಗೆ ಹೋಗಿದ್ದಾಗ ಸಂಧಾನ ನಡೆಸಿದ್ದ ಬಿ.ಕೆ.ಹರಿಪ್ರಸಾದ್ ಅವರು ನಿನ್ನೆ(ಮಂಗಳವಾರ) ಮುಖ್ಯಮಂತ್ರಿರನ್ನು ಕಂಡು ಈ ವಿಚಾರದ ಕುರಿತು ಚರ್ಚಿಸಿದ್ದಾರೆ. ಇಂದು (ಬುಧವಾರ) ಬೆಳಗ್ಗೆ ಸಾಮಾಜಿಕ ಹೋರಾಟಗಾರ ನೂರ್ ಶ್ರೀಧರ್ ನೇತೃತ್ವದಲ್ಲಿ ಅಲೆಮಾರಿ ಮುಖಂಡರ ತಂಡ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಕಂಡು ಸಮಸ್ಯೆಯ ಪರಿಹಾರಕ್ಕೆ ಇರುವ ಮಾರ್ಗೋಪಾಯಗಳ ಕುರಿತು ಕೂಲಂಕುಷವಾಗಿ ಚರ್ಚೆ ನಡೆಸಿದ್ದರು. ಈ ಎಲ್ಲ ಹಿನ್ನೆಲೆಯಲ್ಲಿ ಪ್ರಕ್ರಿಯೆ ತ್ವರಿತಗೊಂಡಿದೆ.
ರಾಜ್ಯದಲ್ಲಿರುವ 5,22,000 ಅಲೆಮಾರಿ ಕುಟುಂಬಗಳ ಭವಿಷ್ಯ ಶುಕ್ರವಾರ (ಅ.31) ರಂದು ತೀರ್ಮಾನವಾಗಲಿದೆ. ಈ ವೇಳೆಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕರ್ನಾಟಕ ಜನಶಕ್ತಿ ಅಧ್ಯಕ್ಷ ನೂರ್ ಶ್ರೀಧರ್, ಅಲೆಮಾರಿ ಸಮುದಾಯದ ಮುಖಂಡರಾದ ಶೇಷಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್


