Homeಮುಖಪುಟಮೇಘಾಲಯ: ನದಿಗೆ ಉರುಳಿದ ಬಸ್, 6 ಜನರ ದುರ್ಮರಣ

ಮೇಘಾಲಯ: ನದಿಗೆ ಉರುಳಿದ ಬಸ್, 6 ಜನರ ದುರ್ಮರಣ

- Advertisement -
- Advertisement -

ಮೇಘಾಲಯದ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ, ಬಸ್‌ ಚಾಲಕ ಸೇರಿದಂತೆ 6 ಜನರು ಆ ಹೊತ್ತಿಗಾಗಲೇ ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

a0ljnues

“ಘಟನೆಯ ಮಾಹಿತಿ ದೊರೆತ ಕೂಡಲೆ ರಾಂಗ್‌ಜೆಂಗ್ ಮತ್ತು ವಿಲಿಯಂನಗರದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ರಕ್ಷಣಾ ತಂಡವು ಸಂತ್ರಸ್ತರಿಗೆ ಸಹಾಯ ಮಾಡಲು ಅಪಘಾತ ಸ್ಥಳಕ್ಕೆ ಧಾವಿಸಿತು. ಆರು ಜನರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಗಾಯಾಳುಗಳನ್ನು ರೊಂಗ್‌ಜೆಂಗ್ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ “ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ. ಕಾಏಕಿ ಬಸ್ ನದಿಗೆ ಉರುಳಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...