Homeಮುಖಪುಟಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

ವೇಶ್ಯಾವಾಟಿಕೆ ವೇಳೆ ದಾಳಿ ನಡೆಸಿದ ಪೊಲೀಸರು ಆರು ಮಂದಿ ಅಪ್ರಾಪ್ತರನ್ನು ರಕ್ಷಿಸಿದ್ದು 73 ಜನರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

- Advertisement -
- Advertisement -

ಮೇಘಾಲಯದ ತುರಾ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬರ್ನಾಡ್ ಎನ್ ಮರಕ್ ಅವರ ಒಡೆತನದ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ವೇಳೆ ದಾಳಿ ನಡೆಸಿದ ಪೊಲೀಸರು ಆರು ಮಂದಿ ಅಪ್ರಾಪ್ತರನ್ನು ರಕ್ಷಿಸಿದ್ದು 73 ಜನರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ ತಿಳಿಸಿದ್ದಾರೆ.

“ನಾವು ಆರು ಮಂದಿ ಅಪ್ರಾಪ್ತ ವಯಸ್ಕರನ್ನು ರಕ್ಷಿಸಿದ್ದೇವೆ. ಅದರಲ್ಲಿ ನಾಲ್ವರು ಬಾಲಕರು ಮತ್ತು ಇಬ್ಬರು ಬಾಲಕಿಯರಿದ್ದಾರೆ. ಬರ್ನಾಡ್ ಎನ್ ಮರಾಕ್ ಮತ್ತು ಆತನ ಸಹಚರರು ರಿಂಪು ಬಗಾನ್‌ನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಕ್ಯಾಬೀನ್‌ಗಳಲ್ಲಿ ಈ ಅಪ್ರಾಪ್ತರು ಸಿಲುಕಿದ್ದರು. ಈ ಕ್ಯಾಬಿನ್‌ಗಳು ಅಶುಚಿತ್ವದಿಂದ ಕೂಡಿದ್ದವು” ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಪ್ಪತ್ತೇಳು ವಾಹನಗಳು, ಎಂಟು ದ್ವಿಚಕ್ರ ವಾಹನಗಳು, ಸುಮಾರು 400 ಮದ್ಯದ ಬಾಟಲಿಗಳು, 500 ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಅನೈತಿಕ ಕಳ್ಳಸಾಗಣೆ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಮಾರಕ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮೇಘಾಲಯ ಪೊಲೀಸರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೂಡಲೇ ಶರಣಾಗುವಂತೆ ಹಾಗೂ ತನಿಖೆಗೆ ಸಹಕರಿಸುವಂತೆ ಮಾರಾಕ್‌ಗೆ ಸೂಚಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

“ಆದಾಗ್ಯೂ, ಅವರು ಇಲ್ಲಿಯವರೆಗೆ ಸಹಕರಿಸಲಿಲ್ಲ. ಬಂಧನದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದಾರೆ” ಎಂದು ಎಸ್‌ಪಿ ಆರೋಪಿಸಿದ್ದಾರೆ.

“ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮುರಾಕ್‌ ಬೇಗನೆ ಶರಣಾಗುವಂತೆ ಒತ್ತಾಯಿಸುತ್ತೇನೆ. ನಾವು ಆತನನ್ನು ಹುಡುಕುತ್ತಿದ್ದೇವೆ. ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಮುರಾಖ್‌ “ನಾನು ಪರಾರಿಯಾಗಿಲ್ಲ. ಪೊಲೀಸರೊಂದಿಗೆ ಸಹಕರಿಸುತ್ತಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ಅವರು, “ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸೂಚನೆಯ ಮೇರೆಗೆ ವಾರಂಟ್ ಇಲ್ಲದೆ ದಾಳಿ ನಡೆಸಲಾಗಿದೆ” ಎಂದು ದೂರಿದ್ದಾರೆ.

“ಬಂಧಿತರಲ್ಲಿ ಯಾರೂ ಯಾವುದೇ ಅಸಭ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಅಧ್ಯಯನ ಮಾಡಲು ನಾನು ಸಹಾಯಹಸ್ತ ನೀಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಕಿರುಕುಳ ನೀಡಿದ್ದಾರೆ. ವಿದ್ಯಾರ್ಥಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಆರೋಪಿಸಿದ್ದಾರೆ” ಎಂದು ಮರಕ್‌ ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮರಕ್ ಅವರು ಗಾರೊ ಹಿಲ್ ಜಿಲ್ಲಾ ಕೌನ್ಸಿಲ್‌ನ ಚುನಾಯಿತ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ ಸರ್ಕಾರವನ್ನು ಟೀಕಿಸುವ ಮೂಲಕ ಸುದ್ದಿಯಲ್ಲಿದ್ದಾರೆ. ಮಾರಕ್ ಅವರ ಪಕ್ಷವಾದ ಬಿಜೆಪಿ, ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಮೈತ್ರಿಕೂಟದ ಪಾಲುದಾರಿಕೆಯನ್ನೂ ಹೊಂದಿದೆ.

ಈ ಹಿಂದೆ ಬಂದಿದ್ದವು ಹಲವು ದೂರು

ಈ ಹಿಂದೆ ತುರಾ ಪಟ್ಟಣದ ನಿವಾಸಿಗಳಿಂದ ರೆಸಾರ್ಟ್ ಕುರಿತು ಹಲವು ಮೌಖಿಕ ದೂರುಗಳು ಬಂದಿದ್ದವು ಎಂದು ಮೇಘಾಲಯ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

ಫೆಬ್ರವರಿಯಲ್ಲಿ ಕಾಣೆಯಾಗಿದ್ದ ಬಾಲಕಿ ನಂತರದಲ್ಲಿ ಇದೇ ಪಟ್ಟಣದಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿಯನ್ನು ರಿಂಪು ಬಗಾನ್ ರೆಸಾರ್ಟ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಬಂದಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, “ಬಾಲಕಿಯ ಮೇಲೆ ಒಂದು ವಾರದಲ್ಲಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಭಾರತೀಯ ದಂಡ ಸಂಹಿತೆ 366A (ಅಪ್ರಾಪ್ತ ಬಾಲಕಿಯರನ್ನು ಕೂಡಿಹಾಕಿಕೊಳ್ಳುವುದು), 376 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...